ರಸ್ತೆ ಕಾಮಗಾರಿ ವಿಳಂಬ: ಬನ್ನಿಗೋಳ ಗ್ರಾಮಸ್ಥರ ಆಕ್ರೋಶ
Team Udayavani, Jul 15, 2020, 11:55 AM IST
ಮುದಗಲ್ಲ: ಚಿಕ್ಕೆಸರೂರು- ಮುಂಡರಗಿ ರಸ್ತೆ ಡಾಂಬರೀಕರಣ ಕಾಮಗಾರಿ ಮುಕ್ತಾಯವಾಗಿದ್ದು, ಗ್ರಾಮಗಳ ಮಧ್ಯೆ ಸಿಸಿ ರಸ್ತೆ, ಅಲ್ಲಲ್ಲಿ ಸಿಡಿ ಕಾಮಗಾರಿಗಳನ್ನು ನಿಧಾನ ಗತಿಯಲ್ಲಿ ನಿರ್ವಹಿಸುತ್ತಿರುವುದನ್ನು ಖಂಡಿಸಿ ಬನ್ನಿಗೋಳ ಗ್ರಾಮಸ್ಥರು ಇತ್ತೀಚೆಗೆ ಸಿಸಿ ರಸ್ತೆ ಕಾಮಗಾರಿಗೆ ಅಡ್ಡಿಪಡಿಸಿದರು.
ಕಾಲಮಿತಿಯಲ್ಲಿ ಲೋಕೋಪ ಯೋಗಿ ಇಲಾಖೆ ಅಧಿಕಾರಿ ಗಳು ಕಾಮಗಾರಿ ಮಾಡಿಲ್ಲ. ಮಳೆಗಾಲ ದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದಾರೆಎಂದು ಆರೋಪಿಸಿ ರಸ್ತೆ ನಿರ್ಮಾಣಕ್ಕೆ ತಡೆದು ಪ್ರತಿಭಟನೆ ನಡೆಸಿದರು. ಲಿಂಗಸುಗೂರು ಲೋಕೋಪಯೋಗಿ ಇಲಾಖೆ ಅಧಿಕಾರಿ, ಪೊಲೀಸ್ ಇಲಾಖೆ, ಪಂಚಾಯತ್‌ಅ ಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರ ಮನವೊಲಿಸಿದರು.
ಇನ್ನು ಕೆಲವರು ಗುತ್ತಿಗೆದಾರ ಎನ್.ಮಲ್ಲಿಕಾರ್ಜುನ ಹಾಗೂ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಲೋಕೋಪಯೋಗಿ ಇಲಾಖೆ ಅಧಿಕಾರಿ ಜಗದೇವಯ್ಯ ಮಾತನಾಡಿ, ಗ್ರಾಮದಲ್ಲಿ ರಸ್ತೆಗೆ ಹೊಂದಿಕೊಂಡಿರುವ ಕೆಲ ಮನೆಗಳನ್ನು ತೆರವುಗೊಳಿಸಿದರೆ, ರಸ್ತೆ ನಿರ್ಮಾಣಕ್ಕೆ ಅನುಕೂಲವಾಗುತ್ತದೆ. ರಸ್ತೆ ಸರಿಯಾಗಿ ನಿರ್ಮಾಣವಾದರೆ ಗ್ರಾಮ ಅಂದವಾಗಿರುತ್ತದೆ ಎಂದು ವಸ್ತುಸ್ಥಿತಿ ವಿವರಿಸಿದರು.
ಆಗ ಗ್ರಾಮಸ್ಥರು ಕುಲಂಕೂಶವಾಗಿ ಚರ್ಚಿಸಿ ಅಗಲವಾದ ರಸ್ತೆ ನಿರ್ಮಿಸಲು ಒಪ್ಪಿಗೆ ನೀಡಿದರು. ಜೂನಿಯರ್ ಇಂಜಿನಿಯರ್ ಹುಸೇನ್ ಭಾಷಾ, ಬಸವರಾಜ ವಸ್ತ್ರದ, ಮುದಗಲ್ಲ ಪಿಎಸ್‌ಐ ಡಾಕೇಶ, ಗ್ರಾಮಸ್ಥರಾದ ಶರಣಪ್ಪ ತೋಟದ, ಚಿನ್ನಪ್ಪ ವಡ್ಡರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.