ಮಗುವಿಗೆ ಜನ್ಮ ನೀಡಿದ ವಲಸೆ ಮಹಿಳೆ!
Team Udayavani, May 13, 2020, 12:05 PM IST
ಶಹಾಪುರ: ಚಾಮನಾಳ ಆರೋಗ್ಯ ಕೇಂದ್ರದಲ್ಲಿ ಇರುವ ತಾಯಿ-ಮಗು
ಶಹಾಪುರ: ಗುಳೆ ಹೋಗಿದ್ದ ಗರ್ಭಿಣಿಯೊಬ್ಬಳು ಈಚೆಗೆ ಸ್ವಗ್ರಾಮಕ್ಕೆ ಬಂದಿದ್ದು, ಕೋವಿಡ್ ತಪಾಸಣೆ ಮುಗಿಸಿ ತಾಲೂಕಿನ ಚಾಮನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ವಾರಂಟೈನ್‌ನಲ್ಲಿದ್ದ ವೇಳೆ ಮಗುವಿಗೆ ಜನ್ಮ ನೀಡಿದ್ದಾಳೆ.
ಕಳೆದ ನಾಲ್ಕೈದು ವರ್ಷದಿಂದ ಹೊಟ್ಟೆ ಪಾಡಿಗಾಗಿ ತಾಲೂಕಿನ ದೊರಿಗುಡ್ಡ ತಾಂಡಾದ ಮಹಿಳೆ ಶಿವುಬಾಯಿ ಮಹಾರಾಷ್ಟ್ರದ ಮುಂಬೈನಲ್ಲಿ ಕೂಲಿ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದರು. ಆದರೆ ಕೋವಿಡ್ ಹಾವಳಿಯಿಂದಾಗಿ ಪರಿತಪಿಸಿದ್ದು, ವಾಪಸ್ ಸ್ವಗ್ರಾಮಕ್ಕೆ ಆಗಮಿಸಿದ್ದರು. ಮರಳಿ ಗೂಡಿಗ ಆಗಮಿಸುವ ವೇಳೆ ತಾಲೂಕಿನ ಆರೋಗ್ಯ ಇಲಾಖೆಯ ಕೊರೊನಾ ತಪಾಸಣೆಗೆ ಒಳಪಟ್ಟಿದ್ದು, ಮಹಿಳೆ ಶಿವುಬಾಯಿ ಗರ್ಭಿಣಿ ಆಗಿದ್ದರಿಂದ ಆರೋಗ್ಯ ಕೇಂದ್ರದಲ್ಲಿ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಲಾಗಿತ್ತು.
ಇದೀಗ ಮಹಿಳೆಗೆ ಹೆರಿಗೆಯಾಗಿದ್ದು, ಹೆರಿಗೆಯನ್ನು ಕೇಂದ್ರದ ಕಿರಿಯ ಆರೋಗ್ಯ ಸಹಾಯಕರಾದ ಅನಿತಾ ಹಾಗೂ ಆಶಾ ಕಾರ್ಯಕರ್ತೆ ತಾರಾಬಾಯಿ ಹಾಗೂ ಸಿಬ್ಬಂದಿ ವೈದ್ಯಾಧಿಕಾರಿಗಳ ಸೂಕ್ತ ಮಾರ್ಗದರ್ಶನದ ಮೇಲೆ ಹೆರಿಗೆ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ತಾಯಿ ಮಗು ಆರೋಗ್ಯದಿಂದ ಇದ್ದಾರೆ ಎಂದು ಡಾ.ರಮೇಶ ಗುತ್ತೇದಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.