ರಾಯಚೂರು : ಕೃಷ್ಣೆಗೆ ಹೆಚ್ಚಿದ ಹರಿವು : ಶೀಲಹಳ್ಳಿ ಸೇತುವೆ ಮುಳುಗಡೆ
Team Udayavani, Jul 23, 2021, 12:56 PM IST
ರಾಯಚೂರು : ಜಲಾನಯನ ಪ್ರದೇಶದಲ್ಲಿ ಹೆಚ್ಚಿದ ಮಳೆಯಿಂದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.50 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಇದರಿಂದ ಲಿಂಗಸೂಗೂರು ತಾಲೂಕು ವ್ಯಾಪ್ತಿಯ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ.
ಇದರಿಂದ ಕಡದರಗಡ್ಡಿ, ಯಳಗುಂದಿ, ಹಂಚಿನಾಳ ಸೇರಿದಂತೆ ವಿವಿಧ ನಡುಗಡ್ಡೆ ಪ್ರದೇಶಗಳಿಗೆ ಸಂಪರ್ಕ ಕಡಿತಗೊಂಡಿದೆ. ಬೆಳಗ್ಗೆ 1.90 ಕ್ಯೂಸೆಕ್ ನೀರು ಹರಿಸಲಾಗಿತ್ತು. ಒಳಹರಿವು ಹೆಚ್ಚಾಗುತ್ತಿದ್ದಂತೆ ಜಲಾಶಯದಿಂದ ಹೊರಹರಿವು ಹೆಚ್ಚಾಗಿದೆ.
ಸಂಜೆ ವೇಳೆಗೆ ಈ ನೀರಿನ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನೂ ನದಿಪಾತ್ರದ ಹಳ್ಳಿಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ವಿಪತ್ತು ನಿರ್ವಹಣಾ ಸಮಿತಿಗೆ ಎಸಿ ತಿಳಿಸಿದ್ದಾರೆ. ನದಿಗೆ ಇಳಿಯದಂತೆ ಗ್ರಾಮಗಳಲ್ಲಿ ಡಂಗೂರ ಸಾರಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.