Shocking; ಹೆರಿಗೆ ವೆಚ್ಚ ಹೆಚ್ಚಾಗಿದ್ದಕ್ಕೆ ಬಾಣಂತಿಯನ್ನೆ ಹತ್ಯೆಗೈದ ಪತಿ!!
ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.. ಅನಾಥವಾದ ಮಗು !
Team Udayavani, Dec 17, 2023, 4:26 PM IST
ರಾಯಚೂರು: ನಗರದ ಲಾಡ್ಜ್ ನಲ್ಲಿ ಮಹಿಳೆ ನೇಣು ಬಿಸಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ದೊಡ್ಡ ಟ್ವಿಸ್ಟ್ ದೊರಕಿದ್ದು, ಪತಿಯೇ ಕೊಲೆ ಮಾಡಿರುವ ಸತ್ಯಾಂಶ ಬಯಲಾಗಿದೆ. ಉತ್ತರ ಪ್ರದೇಶದ ಹತ್ರಾಸ ಮೂಲದ ಸೋನಿ (24) ಶವ ಕಳೆದ ಬುಧವಾರ ಬೆಳಗಿನ ನಗರದ ಸಂತೋಷಿ ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಿಕ್ಕಿತ್ತು.
ಪತಿ ಅವಿನಾಶ ಹಾಗೂ ಸೋನಿ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿ ಇಲ್ಲಿಗೆ ಬಂದು ನೆಲೆಸಿದ್ದರು. ಸೋನಿಗೆ ಈಚೆಗೆ ಹೆರಿಗೆಯಾಗಿದ್ದು, 20 ದಿನಗಳ ಹಸುಗೂಸಿತ್ತು. ಸೋನಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಳು. ಇದರಿಂದ ಪತಿ ಅವಿನಾಶ ಸದಾ ಆಕೆಯನ್ನು ನಿಂದಿಸುತ್ತಿದ್ದ. ಮಗುವನ್ನು ಸರಿಯಾಗಿ ನೋಡಿಕೊಳ್ಳಲು ಬರುವುದಿಲ್ಲ ಎಂದು ರೇಗಾಡುತ್ತಿದ್ದ. ಕೊನೆಗೆ ತಾನೆ ಕೊಲೆ ಮಾಡಿ ನೇಣು ಬಿಗಿದ ಸ್ಥಿತಿಯಲ್ಲಿ ನೇತು ಹಾಕಿರುವುದು ತನಿಖೆ ವೇಳೆ ಗೊತ್ತಾಗಿದೆ.
ಮೊದಲು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಂಬಿಸಲು ಯತ್ನಿಸಿದ್ದ. ಪೊಲೀಸರ ತೀವ್ರ ತನಿಖೆ ನಡೆಸಿದಾಗ ಕೊಲೆ ಎಂಬುದು ಸಾಬೀತಾಗಿದೆ. ಆರೋಪಿಯನ್ನು ವಶಕ್ಕೆ ಪಡೆದಿದ್ದು, ಮಗುವನ್ನು ಸೌಹಾರ್ದ ಕೇಂದ್ರಕ್ಕೆ ನೀಡಲಾಗಿದೆ ಎಂದು ಎಸ್ ಪಿ ನಿಖಿಲ್ ಬುಳ್ಳಾವರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.