ಸಿದ್ಧಗಂಗೆ ದೇವರಿಗೆ ಭಕ್ತಿಪೂರ್ವಕ ನಮನ


Team Udayavani, Jan 23, 2019, 9:46 AM IST

ray-1.jpg

ರಾಯಚೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಭಕ್ತಕೋಟಿಯ ಆರಾಧ್ಯದೈವವಾಗಿದ್ದ ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅಗಲಿಕೆ ಭಕ್ತರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಮಂಗಳವಾರ ನಗರ ಸೇರಿ ಜಿಲ್ಲೆಯ ಹಳ್ಳಿ ಹಳ್ಳಿಯಲ್ಲೂ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ವೀರಶೈವ ಸಮಾಜದಿಂದ ಶ್ರದ್ಧಾಂಜಲಿ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಸೋಮವಾರ ಪೇಟೆ ಮಠದ ಶ್ರೀ ಅಭಿನವ ರಾಚೋಟಿ ವೀರ ಶಿವಾಚಾರ್ಯರು, ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗೆ ಸರಿಸಾಟಿ ಯಾರೂ ಇಲ್ಲ. ಗಗನಕ್ಕೆ ಗಗನ, ಸಮುದ್ರಕ್ಕೆ ಸಮುದ್ರ ಹೇಗೆ ಸಾಟಿಯೋ. ಹಾಗೆ ಅವರಿಗೆ ಅವರೇ ಸಾಟಿ. ಅವರು ಹಾಕಿಕೊಟ್ಟ ದಾರಿಯಲ್ಲಿ ನಾವು ಸಾಗಬೇಕಿದೆ ಎಂದರು.

ಬಿಚ್ಚಾಲಿ ಮಠದ ಶ್ರೀ ವೀರಭದ್ರ ಶಿವಾಚಾರ್ಯರು, ನಿಲೋಗಲ್‌ ಬೃಹನ್ಮಠದ ಶ್ರೀ ಪಂಚಾಕ್ಷರಿ ಶಿವಾಚಾರ್ಯರು, ಶಾಸಕ ಡಾ| ಶಿವರಾಜ ಪಾಟೀಲ, ಮುಖಂಡರಾದ ವೀರನಗೌಡ, ಎಸ್‌.ಬಿ.ಪಾಟೀಲ ಸೇರಿ ಅನೇಕರು ಪಾಲ್ಗೊಂಡಿದ್ದರು.

ನಗರದ ಸಾರ್ವಜನಿಕ ಉದ್ಯಾನವನದಲ್ಲಿ ಬಂಡಾಯ ಸಾಹಿತಿ ಅಂಬಣ್ಣ ಅರೋಲಿ ನೇತೃತ್ವದಲ್ಲಿ ಬೆಳಗ್ಗೆ ಭಜನೆ ಗಾಯನ ಮಾಡಲಾಯಿತು. ಈ ವೇಳೆ ಸ್ವಾಮೀಜಿ ಕುರಿತು ಅಂಬಣ್ಣ ರಚಿಸಿದ ಹಾಡನ್ನು ಹಾಡುವ ಮೂಲಕ ಅವರಿಗೆ ಭಕ್ತಿ ನಮನ ಸಲ್ಲಿಸಲಾಯಿತು.

ಇನ್ನು ತಾಲೂಕಿನ ದೇವಸುಗೂರಿನ ಶ್ರೀ ಸೂಗೂರೇಶ್ವರ ಸ್ವಾಮಿ ದೇವಸ್ಥಾನದಲ್ಲಿಯೂ ದೇವಸ್ಥಾನ ಸಮಿತಿ ಹಾಗೂ ಭಕ್ತರಿಂದ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ದೇವಸ್ಥಾನ ಸಮಿತಿ ಅಧ್ಯಕ್ಷ ಹಂಪನಗೌಡ, ಸುರೇಶ ಮಾಲಿಪಾಟೀಲ, ಸೇರಿ ಪ್ರಧಾನ ಅರ್ಚಕರಾದ ಸುರೇಶ ಮರುಳ ಇತರರು ಇದ್ದರು.

ನಗರದ ಜೆಡಿಎಸ್‌ ಕಚೇರಿಯಲ್ಲಿಯೂ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಮುಖಂಡರು, ಶ್ರೀಗಳನ್ನು ಕಳೆದುಕೊಂಡ ನಾಡು ಅಕ್ಷರಶಃ ಅನಾಥವಾಗಿದೆ ಎಂದು ಅಭಿಪ್ರಾಯಪಟ್ಟರು.

ತಾಲೂಕಿನ ದೇವನಪಲ್ಲಿ ಗ್ರಾಮದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ಭಾವಚಿತ್ರಕ್ಕೆ ಪೂಜೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಮಠದ ಹಳೆ ವಿದ್ಯಾರ್ಥಿ ಕೆ.ರವಿ, ಡಿ .ಶಿವಾನಂದ, ಕೆ.ಈರೇಶ, ಕೆ.ಉರುಕುಂದ, ಸತ್ಯನಾರಾಯಣ, ರಾಮು, ರಾಜಪ್ಪ, ರಾಮುನಾಯಕ ಗ್ರಾಮದ ಮುಖಂಡರು ಪಾಲ್ಗೊಂಡಿದ್ದರು.

ಗಡಿಗ್ರಾಮದಲ್ಲೂ ಶ್ರದ್ಧಾಂಜಲಿ: ಗಡಿ ಗ್ರಾಮವಾದ ಕೃಷ್ಣ ಪ್ರಾಂತದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಎಲ್ಲರೂ ಗೌರವ ನಮನ ಸಲ್ಲಿಸಿದರು. ನಡೆದಾಡುವ ದೇವರೆಂದು ಖ್ಯಾತಿ ಪಡೆದಿದ್ದ ಅವರ ಸಾಧನೆ ಸಣ್ಣದಲ್ಲ. ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಕೇವಲ ಕರ್ನಾಟಕಕ್ಕೆ ಅಷ್ಟೇ ಅಲ್ಲ ಸಂಪೂರ್ಣ ದೇಶದ ವಿದ್ಯಾರ್ಥಿಗಳಿಗೂ ಪಸರಿಸಿದೆ. ಅವರನ್ನು ಕಂಡಿರುವ ನಾವೇ ಧನ್ಯರು ಎಂದು ಮುಖಂಡರು ಅಭಿಪ್ರಾಯಪಟ್ಟರು. ಜಯಪ್ರಕಾಶ, ಹಂಪಯ್ಯ, ಮಹಾದೇವ, ಬಿ ಸುರೇಶಕುಮಾರ, ನರಸಿಂಹಾಚಾರ್‌, ಅಮರ್‌ ದೀಕ್ಷಿತ್‌ ಸೇರಿ ಅನೇಕ ಪಾಲ್ಗೊಂಡಿದ್ದರು.

ತುಮಕೂರಿನತ್ತ ಪಯಣ: ತುಮಕೂರು ಸಿದ್ಧಗಂಗಾ ಶ್ರೀಗಳು ಶಿವೈಕ್ಯರಾದ ವಿಚಾರ ತಿಳಿಯುತ್ತಿದ್ದಂತೆ ಜಿಲ್ಲೆಯ ನಾನಾ ಭಾಗಗಳಿಂದ ಭಕ್ತರು ತುಮಕೂರಿನತ್ತ ಪಯಣ ಬೆಳೆಸಿದರು. ಜಿಲ್ಲೆಯ ಸುಮಾರು 2 ಸಾವಿರಕ್ಕೂ ಅಧಿಕ ಮಕ್ಕಳು ಪ್ರಸ್ತುತ ಶ್ರೀಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಸಹಸ್ರಾರು ವಿದ್ಯಾರ್ಥಿಗಳು ಶ್ರೀಮಠದಲ್ಲಿ ಅಧ್ಯಯನ ಮಾಡಿ ಈಗ ನಾನಾ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರೆಲ್ಲ ಮಂಗಳವಾರ ಶ್ರೀಗಳ ಅಂತಿಮ ದರ್ಶನಕ್ಕೆ ತೆರಳಿದರು. ಇನ್ನು ವ್ಯಾಸಂಗ ಮಾಡುತ್ತಿರುವ ಮಕ್ಕಳ ಪಾಲಕರು ಕೂಡ ಶ್ರೀಮಠದತ್ತ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.