ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಬೇಕಿದೆ ಚಿಕಿತ್ಸೆ

• ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ವೈದ್ಯರು • ವಿದ್ಯುತ್‌ ಹೋದರೆ ಕತ್ತಲಲ್ಲಿ ಜಾಗರಣೆ • ಹೆರಿಗೆಗೆ ಹಣ ಕೊಡುವಂತೆ ಸಿಬ್ಬಂದಿ ಬೇಡಿಕೆ

Team Udayavani, Jul 30, 2019, 12:51 PM IST

rc-tdy-1

ಸಿಂಧನೂರು: ನಗರದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತೆ, ಕುಡಿಯುವ ನೀರು, ಕರೆಂಟ್ ಕೈಕೊಟ್ಟರೆ ಜನರೇಟರ್‌, ಚಿಕಿತ್ಸೆಗೆ ಅಗತ್ಯ ಪರಿಕರ ಸೇರಿ ಹಲವು ಸೌಲಭ್ಯಗಳಿಂದ ನರಳುತ್ತಿದೆ.

ರಾಯಚೂರು ಜಿಲ್ಲೆಯಲ್ಲೇ ದೊಡ್ಡ ತಾಲೂಕು ಎಂಬ ಹೆಗ್ಗಳಿಕೆ ಸಿಂಧನೂರಿಗಿದೆ. ತಾಲೂಕು ಕೇಂದ್ರದ ಆಸ್ಪತ್ರೆಗೆ ತಾಲೂಕಿನ ವಿವಿಧ ಗ್ರಾಮ ಸೇರಿ ನೆರೆ ತಾಲೂಕುಗಳ ಗ್ರಾಮೀಣ ರೋಗಿಗಳು ಚಿಕಿತ್ಸೆಗೆ ಆಗಮಿಸುತ್ತಾರೆ. ನಿತ್ಯ ಸಾವಿರಾರು ರೋಗಿಗಳು, ಗರ್ಭಿಣಿಯರು ಇಲ್ಲಿಗೆ ಚಿಕಿತ್ಸೆಗೆ ಬರುತ್ತಾರೆ. ಆದರೆ ಆಸ್ಪತ್ರೆಯಲ್ಲಿ ಸೌಲಭ್ಯಗಳಿಲ್ಲದೇ ಪರದಾಡುವಂತಾಗಿದೆ.

ಖಾಸಗಿ ಆಸ್ಪತ್ರೆಯಲ್ಲಿ ದುಬಾರಿ ವೆಚ್ಚ ಭರಿಸಿ ಚಿಕಿತ್ಸೆ ಪಡೆಯಲಾಗದ ನಗರ ಹಾಗೂ ಗ್ರಾಮೀಣ ಬಡ ರೋಗಿಗಳು ಇಲ್ಲಿಗೆ ಬರುತ್ತಾರೆ. ಆದರೆ ಆಸ್ಪತ್ರೆಯೊಳಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಇರುವ ಜನರೇಟರ್‌ ದುರಸ್ತಿಗೀಡಾಗಿದ್ದು, ಕರೆಂಟ್ ಪರ್ಯಾಯ ವ್ಯವಸ್ಥೆ ಇಲ್ಲ. ಐಸಿಯು, ಶೌಚಾಲಯ, ಕುಳಿತುಕೊಳ್ಳಲು ಆಸನಗಳು ಇನ್ನಿತರ ಮೂಲ ಸೌಲಭ್ಯಗಳೇ ಇಲ್ಲ. ಇನ್ನು ರೋಗಿಗಳ ಚಿಕಿತ್ಸೆಗೆ ಸ್ಪಂದಿಸಬೇಕಾದ ಇಲ್ಲಿನ ವೈದ್ಯರು ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಸಮಯಕ್ಕೆ ಸರಿಯಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಲಭ್ಯ ಇರುವುದಿಲ್ಲ. ಹೀಗಾಗಿ ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿವೆ.

ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿದ್ದ ಜಿಲ್ಲಾ ವೈದ್ಯಾಧಿಕಾರಿಗಳ ತಂಡದ ಎದುರು ಸಾರ್ವಜನಿಕರು ಸೇರಿ ಜಿಪಂ ಸದಸ್ಯ ಬಾಬುಗೌಡ ಬಾದರ್ಲಿ, ಬಸವರಾಜ ಹಿರೇಗೌಡ ಇತರರು ಆಸ್ಪತ್ರೆಯಲ್ಲಿನ ಅವ್ಯವಸ್ಥೆಯನ್ನು ಬಿಡಿಸಿಟ್ಟರು. ಆದರೆ ಈವರೆಗೆ ಯಾವುದೇ ಸಮಸ್ಯೆ ಪರಿಹಾರ ಆಗಿಲ್ಲ.

ಖುಷಿಗಾಗಿ ಹಣ ವಸೂಲಿ: ಇನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾದರೆ ಬಾಣಂತಿಯರು ಮತ್ತು ಅವರ ಸಂಬಂಧಿಕರಿಂದ ನರ್ಸ್‌ ಇತರೆ ಸಿಬ್ಬಂದಿ ಖುಷಿ ನೀಡುವಂತೆ ಪೀಡಿಸಿ ಹಣ ವಸೂಲಿ ಮಾಡುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಪ್ರತಿ ಹೆರಿಗೆಗೆ ಸಾವಿರಾರು ರೂ. ವಸೂಲಿ ಮಾಡುತ್ತಾರೆ. ಹಣ ನೀಡದಿದ್ದರೆ ತಾಯಿ ಕಾರ್ಡ್‌ ಕೊಡಲು ಸತಾಯಿಸುತ್ತಾರೆ ಎಂದು ಗರ್ಭಿಣಿಯರು, ಬಾಣಂತಿಯರು ದೂರಿದ್ದಾರೆ.

ಆಸ್ಪತ್ರೆ ಆವರಣದಲ್ಲಿ ಕೊಳಚೆ: ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಆವರಣದಲ್ಲೇ ವಸತಿಗೃಹಗಳಿವೆ. ವಸತಿ ಗೃಹಗಳ ಎದುರು ಸ್ವಚ್ಛತೆ ಇಲ್ಲದಾಗಿದೆ. ಮಳೆ ಬಂದರೆ ಕೊಳಚೆ ಪ್ರದೇಶದಂತಾಗಿ, ನಾಯಿ, ಹಂದಿಗಳ ಗೂಡಾಗುತ್ತದೆ. ಸೊಳ್ಳೆ ಹಾವಳಿ ಹೆಚ್ಚಿದೆ. ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಸರಿಪಡಿಸಬೇಕು. ಹೆರಿಗೆಯಾದ ಬಾಣಂತಿಯರು ಮತ್ತು ಅವರ ಸಂಬಂಧಿಕರಿಂದ ಹಣ ವಸೂಲಿಗೆ ಕಡಿವಾಣ ಹಾಕಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಸರಿಯಾಗಿ ಸೇವೆ ಸಲ್ಲಿಸುತ್ತಿಲ್ಲ. ಆಸ್ಪತ್ರೆಯಲ್ಲಿ ವಿದ್ಯುತ್‌ ಸಮಸ್ಯೆ, ಮೂಲ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ. ಗರ್ಭಿಣಿಯರಿಂದ ಖುಷಿಗಾಗಿ ಹಣ ಕೇಳುವ ಪ್ರವೃತ್ತಿ ಆಸ್ಪತ್ರೆ ಸಿಬ್ಬಂದಿ ರೂಢಿಸಿಕೊಂಡಿದ್ದಾರೆ.•ನಾಗರಾಜ ಪೂಜಾರ, ಆರ್‌.ವೈ.ಎಸ್‌.ಎಫ್‌.ವೈ ಸಂಘಟನೆ ಮುಖಂಡ

•ಚಂದ್ರಶೇಖರ ಯರದಿಹಾಳ

ಟಾಪ್ ನ್ಯೂಸ್

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.