ಗ್ರಾಮೀಣ ಪ್ರತಿಭೆ ಗುರುತಿಸುವ ಕೆಲಸ ಆಗಲಿ

ಕಾಟಾಚಾರಕ್ಕೆ ಕಾರ್ಯಕ್ರಮ ಮಾಡಬೇಡಿ ಜಿಲ್ಲಾಮಟ್ಟದ ಯುವಜನೋತ್ಸವದಲ್ಲಿ ಶಾಸಕ ನಾಡಗೌಡ ಸಲಹೆ

Team Udayavani, Feb 2, 2020, 4:08 PM IST

2-Febraury-24

ಸಿಂಧನೂರು: ಯುವ ಸಬಲೀಕರಣ ಕ್ರೀಡಾ ಇಲಾಖೆ ಕಾಟಾಚಾರಕ್ಕೆ ಕಾರ್ಯಕ್ರಮ ಆಯೋಜಿಸದೇ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವ ಕೆಲಸ ಮಾಡಬೇಕು ಎಂದು ಶಾಸಕ ವೆಂಕಟರಾವ್‌ ನಾಡಗೌಡ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಯುವ ಸಬಲೀಕರಣ, ತಾಲೂಕು ಪಂಚಾಯ್ತಿ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಗೋಸ್ವಾಮಿ ಸಮುದಾಯ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದೆ ಯುವಜನ ಮೇಳ ಅಂದರೆ ಹಬ್ಬದ ವಾತರವರಣವೇ ಸೃಷ್ಟಿ ಆಗುತ್ತಿತ್ತು. ಆದರೆ ಇದೀಗ ಅಂತಹ ವಾತಾವಾರಣ ಕಾಣುತ್ತಿಲ್ಲ. ಕಾಟಾಚಾರಕ್ಕೆ ಯುವಜನ ಮೇಳ ನಡೆಸಲಾಗುತ್ತಿದೆ. ಇತ್ತೀಚೆಗೆ ತಾಲೂಕು ಮಟ್ಟದ ಯುವಜನ ಮೇಳ ಸ್ಥಗಿತಗೊಳಿಸಿ ನೇರವಾಗಿ ಜಿಲ್ಲಾಮಟ್ಟದ ಯುವಜನ ಮೇಳೆ ಆಯೋಜಿಸಿದ್ದಾರೆ. ಇದರಿಂದ ಪ್ರತಿಭೆಗಳನ್ನು ಗುರುತಿಸಲು ಸಾಧ್ಯವಾಗುವುದಿಲ್ಲ. ಇಲಾಖೆ ಅಧಿಕಾರಿಗಳು ಕಾಟಾಚಾರಕ್ಕೆ ಕಾರ್ಯಕ್ರಮ ಆಯೋಜಿಸುವುದು ಬೇಡ. ಯುವಜನ ಮೇಳ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳಸುವ ಮೇಳವಾಗಬೇಕು. ಯುವಜನ ಮೇಳಕ್ಕೆ ಪುನಃ ಮೆರಗು ತರುವಂತೆ ಸಂಬಂಧಿಸಿದ ಇಲಾಖೆ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದ ಅವರು, ಯಾರೇ ರಾಜ್ಯಮಟ್ಟಕ್ಕೆ ಆಯ್ಕೆಯಾಗಲಿ ಅಲ್ಲಿಯೂ ಉತ್ತಮ ಪ್ರತಿಭೆ ತೋರಿ ಯಶಸ್ಸು ಸಾಧಿಸಿ ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕು ಎಂದರು.

ತಾಪಂ ಅಧ್ಯಕ್ಷೆ ಲಕ್ಷ್ಮೀ ಗುರಿಕಾರ ಮಾತನಾಡಿ, ಯುವಜನ ಮೇಳ ನಮ್ಮ ಸಂಸ್ಕೃತಿ, ಸಂಪ್ರದಾಯ, ಕಲೆ ಹೊರಹಾಕಲು ವೇದಿಕೆ ಆಗಿದೆ ಎಂದರು. ಜಿಪಂ ಸದಸ್ಯ ಅಮರೇಗೌಡ ವಿರೂಪಾಪುರ ಮಾತನಾಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸರಕಾರ ಬಹಳಷ್ಟು ಅನುದಾನ ನೀಡುತ್ತದೆ. ಇದರ ಸದುಪಯೋಗ ಆದಾಗ ಸರ್ಕಾರದ ಯೋಜನೆ ಸಾರ್ಥಕ ಎಂದರು.

ಇಲಾಖೆ ಸಹಾಯಕ ನಿರ್ದೇಶಕ ರಾಜು ಪಾದಿಹಳ್ಳಿ, ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಶರಣಪ್ಪ, ಬಸವರಾಜ ಗಸ್ತಿ, ವೀರೇಶ ಯರದಿಹಾಳ, ಶರಣಪ್ಪ ಗೋನವಾರ, ಟಿ.ರಾಮಯ್ಯ, ಎಸ್‌ .ದೇವೇಂದ್ರಗೌಡ ಸೇರಿದಂತೆ ಇತರರು ಇದ್ದರು. ವಿವಿಧ ತಾಲೂಕುಗಳ ಸಂಘ-ಸಂಸ್ಥೆಗಳ ಯುವಕ, ಯುವತಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.