ಸಿಂಧನೂರು: ನದಿಗೆ ಸ್ನಾನಕ್ಕೆ ಹೋದ ದೇವಸ್ಥಾನದ ಪೂಜಾರಿ ನೀರು ಪಾಲು
Team Udayavani, Jul 15, 2022, 2:07 PM IST
ಸಿಂಧನೂರು: ತುಂಗಭದ್ರಾ ನದಿ ದಂಡೆಯಲ್ಲಿ ಸ್ನಾನಕ್ಕೆ ಹೋಗಿದ್ದ ದೇವಸ್ಥಾನದ ಪೂಜಾರಿಯೊಬ್ಬರು ನೀರು ಪಾಲಾದ ಘಟನೆ ತಾಲೂಕಿನ ಮುಕ್ಕುಂದಾ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಗ್ರಾಮದ ನದಿ ಬಳಿ ಇರುವ ಕರಿವೀರೇಶ್ವರ ದೇವಸ್ಥಾನದ ಪೂಜಾರಿ ನಿಂಗಪ್ಪ ( 55) ನೀರು ಪಾಲಾದವರು.
ತುಂಗಭದ್ರಾ ಜಲಾಶಯ ಭರ್ತಿಯಾಗಿರುವುದರಿಂದ ಡ್ಯಾಂನ ಗೇಟ್ ತೆಗೆದು 1 ಲಕ್ಷ 40 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ನದಿಗೆ ಬಿಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನದಿಪಾತ್ರದ ಹಳ್ಳಿಗರು ನದಿಗೆ ಇಳಿಯದಂತೆ ಮನವಿ ಮಾಡಲಾಗಿತ್ತು. ಮುಕ್ಕುಂದಾ ಗ್ರಾಮದಲ್ಲಿ ಎಂದಿನಂತೆ ನದಿಗೆ ತೆರಳಿ ಸ್ನಾನಕ್ಕೆ ಹೋದ ಪೂಜಾರಿ ನೀರು ಪಾಲಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಅರುಣ್ ದೇಸಾಯಿ, ಡಿವೈಎಸ್ಪಿ ವೆಂಕಟಪ್ಪ ನಾಯಕ, ಸರ್ಕಲ್ ಇನ್ ಸ್ಪೆಕ್ಟರ್ ಉಮೇಶ್ ಕಾಂಬಳೆ, ಪಿಎಸ್ಐ ಯರಿಯಪ್ಪ ಹಾಗೂ ಸಿಬ್ಬಂದಿ ಶೆಟಪ್ಪ ನಾಯ್ಕ ಒಳಗೊಂಡ ತಂಡ, ಗ್ರಾಮದಲ್ಲಿ ಸಭೆ ನಡೆಸಿತು. ನದಿಗೆ ಅಪಾರ ಪ್ರಮಾಣದ ನೀರು ಬಿಟ್ಟಿರುವುದರಿಂದ ಯಾರೂ ಕೂಡ ನದಿಯತ್ತ ತೆರಳಬಾರದು ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.