ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
Team Udayavani, Jul 5, 2020, 3:40 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸಿಂಧನೂರು: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಗರ ಹಾಗೂ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ಶನಿವಾರ ನಗರದಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.
ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ಕೋವಿಡ್ ಲಾಕ್‌ಡೌನ್‌ದಿಂದ ಈಗಾಗಲೇ ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂಥ ಸಮಯದಲ್ಲಿ ಕೇಂದ್ರ ಸರ್ಕಾರ ನಿತ್ಯ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುತ್ತ ಜನರ ಗಾಯದ ಮೇಲೆ ಬರೆ ಎಳೆಯುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗುತ್ತಿದ್ದರೆ ಕೇಂದ್ರ ಸರ್ಕಾರ ಅತೀ ಹೆಚ್ಚು ಆಮದು ಸುಂಕ, ವ್ಯಾಟ್ ವಿಧಿಸಿ ತೈಲ ಬೆಲೆ ಏರಿಕೆಗೆ ಕಾರಣವಾಗಿದೆ. ತೈಲೆ ಬೆಲೆ ಏರಿಕೆಯಿಂದ ಜೀವನಾವಶ್ಯಕ ವಸ್ತುಗಳ ಬೆಲೆ ಹೆಚ್ಚುತ್ತದೆ. ಕೂಡಲೇ ಸರ್ಕಾರ ತೈಲ ಬೆಲೆ ಇಳಿಸಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು. ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ವಿದ್ಯುತ್ ಕಾಯ್ದೆ ತಿದ್ದುಪಡಿ ಕೈಬಿಡಬೇಕೆಂದು ಆಗ್ರಹಿಸಿದರು.
ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ನಗರ ಘಟಕ ಅಧ್ಯಕ್ಷ ಖಾಜಿಮಲ್ಲಿಕ್ ವಕೀಲ, ಮುಖಂಡರಾದ ಪಂಪನಗೌಡ ಬಾದರ್ಲಿ, ಬಾಬುಗೌಡ, ಎಂ.ದೊಡ್ಡಬಸವರಾಜ, ಶೇಖರಪ್ಪ ಗಿಣಿವಾರ, ಪ್ರಭುಸ್ವಾಮಿ, ಜಾಫರ್ ಅಲಿ ಜಾಗೀರದಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.