ಸಿರವಾರ ತಾಲೂಕು ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ಪಾಲಿಗೆ
Team Udayavani, Jul 6, 2020, 3:09 PM IST
ಸಿರವಾರ ( ರಾಯಚೂರು): ನೂತನ ತಾಲೂಕು ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎರಡು ಸ್ಥಾನಗಳು ಬಿಜೆಪಿ ಪಾಲಾಗಿವೆ.
ಒಟ್ಟು 10 ಸ್ಥಾನಗಳಲ್ಲಿ ಬಿಜೆಪಿ 5 ಸದಸ್ಯರು, ಕಾಂಗ್ರೆಸ್ 4 ಹಾಗೂ ಜೆಡಿಎಸ್ ಪಕ್ಷದ ಒಬ್ಬ ಸದಸ್ಯರಿದ್ದು ಬಹುಮತಕ್ಕೆ 6 ಸ್ಥಾನಗಳ ಅವಶ್ಯಕತೆ ಇತ್ತು. ಪರಿಶಿಷ್ಟ ಪಂಗಡಕ್ಕೆ ಸೀಮಿತವಾದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಎರಡು ಪಕ್ಷಗಳ ಸದಸ್ಯರು ನಾಮಪತ್ರ ಸಲ್ಲಿಸಿದ್ದರು. ನಂತರ ನಡೆದ ಮತದಾನ ಪ್ರಕ್ರಿಯೆಯಲ್ಲಿ ಜೆಡಿಎಸ್ ಸದಸ್ಯ ಬಿಜೆಪಿಗೆ ಕೈ ಎತ್ತಿದ್ದರಿಂದ ಅಧ್ಯಕ್ಷ, ಉಪಾಧ್ಯಕ್ಷ ಎರಡು ಸ್ಥಾನಗಳು ಬಿಜೆಪಿ ಪಾಲಾಗಿದ್ದು ಅಧ್ಯಕ್ಷರಾಗಿ ಕುರುಕುಂದಾ ತಾ.ಪಂ ಸದಸ್ಯ ದೇವರಾಜ ಕುರುಕುಂದಾ, ಉಪಾಧ್ಯಕ್ಷರಾಗಿ ಬಲ್ಲಟಗಿ ತಾ.ಪಂ ಸದಸ್ಯೆ ಯಲ್ಲಮ್ಮ ಪಾಂಡುರಂಗ ಗೆಲುವು ಸಾಧಿಸಿದ್ದಾರೆ.
ಚುನಾವಣಾಧಿಕಾರಿಯಾಗಿ ಸಹಾಯಕ ಆಯುಕ್ತ ಸಂತೋಷ ಕಾಮೇಗೌಡ, ಸಹಾಯಕ ಚುನಾವಣಾಧಿಕಾರಿಯಾಗಿ ತಹಶೀಲ್ದಾರ ಕೆ.ಶೃತಿ ಚುನಾವಣ ಪ್ರಕ್ರಿಯೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.