ದೇವದುರ್ಗ ಸರಕಾರಿ ಬಾಪೂಜಿ ಶಾಲೆ “ಮಾಡೆಲ್”
Team Udayavani, Aug 10, 2022, 9:56 PM IST
ದೇವದುರ್ಗ: ಸರಕಾರಿ ಶಾಲೆಯೆಂದರೆ ಮೂಗು ಮುರಿಯುವವರೇ ಹೆಚ್ಚು. ಅಂತಹದರಲ್ಲಿ ಹಳೆ ವಿದ್ಯಾರ್ಥಿಗಳ ನೆರವಿನಿಂದ ಸರಕಾರಿ ಶಾಲೆಯೊಂದು ಮಧುವಣಗಿತ್ತಿಯಂತೆ ಶೃಂಗಾರಗೊಂಡು ನೋಡುಗರ ಗಮನ ಸೆಳೆಯುತ್ತಿದೆ.
ಪಟ್ಟಣದ ಗೌತಮ ವಾರ್ಡ್‌ನಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಬಾಪೂಜಿ ಪಾಠಶಾಲೆ 1ರಿಂದ 7ನೇ ತರಗತಿ 140 ಮಕ್ಕಳ ದಾಖಲಾತಿ ಹೊಂದಿದೆ. ಇಲ್ಲಿ ಮಕ್ಕಳಿಗೆ ಸ್ಮಾರ್ಟ್ ಕ್ಲಾಸ್ ಬೋಧನೆ ವ್ಯವಸ್ಥೆ ಮಾಡಲಾಗಿದೆ. ಶಾಲಾ ಮಕ್ಕಳೇ ಪರಿಸರ ಸಂರಕ್ಷಣೆಯ ಹೊಣೆ ಹೊತ್ತಿದ್ದಾರೆ.
ಮಧುವಣಗಿತ್ತಿಯಂತೆ ಶೃಂಗಾರ: ಸರಕಾರಿ ಹಿರಿಯ ಪ್ರಾಥಮಿಕ ಬಾಪೂಜಿ ಶಾಲೆಯ ಹಳೆಯ ವಿದ್ಯಾರ್ಥಿಗಳು ಕಿರಿದಾದ ಕಾಂಪೌಂಡ್ ಎತ್ತರಗೊಳಿಸಿ ಕಿಡಿಗೇಡಿಗಳ ಕಾಟ ತಪ್ಪಿಸಿದ್ದಾರೆ. ಹೀಗಾಗಿ ಮಕ್ಕಳ ಕಲಿಕೆಗೆ ಅನುಕೂಲವಾದಂತಾಗಿದೆ. ಹಳೆ ವಿದ್ಯಾರ್ಥಿ ಬಸವರಾಜ ಅಕ್ಕರಕಿ ಒಬ್ಬರೇ ಶಾಲೆಗೆ ಸುಣ್ಣ-ಬಣ್ಣ, ಶಾಲಾ ಪ್ರವೇಶ ದ್ವಾರದಲ್ಲಿ ಗೇಟ್ ಅಳವಡಿಸಿದ್ದಾರೆ. 60ರಿಂದ 70 ಸಾವಿರ ರೂ. ಸ್ವಂತ ಖರ್ಚು ಮಾಡಿ ಶಾಲೆಯನ್ನು ಮಧುವಣಗಿತ್ತಿಯಂತೆ ಶೃಂಗಾರಗೊಳಿಸಿದ್ದಾರೆ. ಪಟ್ಟಣದ ಕ್ಲಸ್ಟರ್ ವ್ಯಾಪ್ತಿಯ ಸರಕಾರಿ ಶಾಲಾ ಶಿಕ್ಷಕರ ಮೀಟಿಂಗ್, ತರಬೇತಿಗಳು ಇಲ್ಲಿಯೇ ನಡೆಯುತ್ತಿರುವುದು ವಿಶೇಷ.
ಮಕ್ಕಳಿಗೆ ಸ್ಮಾರ್ಟ್‌ಕ್ಲಾಸ್: ಇಲ್ಲಿನ ಸರಕಾರಿ ಬಾಪೂಜಿ ಶಾಲಾ ಮಕ್ಕಳಿಗೆ ಸ್ಮಾರ್ಟ್‌ಕ್ಲಾಸ್ ನೀಡಲಾಗುತ್ತಿದೆ. ಪಟ್ಟಣ ವ್ಯಾಪ್ತಿಯ ಸರಕಾರಿ ಶಾಲೆಯಲ್ಲಿ ಇಂತಹದೊಂದು ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಎಲ್ಲಿಯೂ ಇಲ್ಲ. ಹಳೆ ವಿದ್ಯಾರ್ಥಿಗಳ ನೆರವಿನಿಂದ ಮಕ್ಕಳ ಬೋಧನೆಗೆ ಅನುಕೂಲವಾಗಿದೆ ಎನ್ನುತ್ತಾರೆ ಮುಖ್ಯಶಿಕ್ಷಕ ಮಹಾದೇವಪ್ಪ.
ಮಕ್ಕಳಿಗೆ ಪರಿಸರ ಹೊಣೆ: ಶಾಲೆ ಸುಸಜ್ಜಿತ ಕಾಂಪೌಡ್ ಹೊಂದಿದ್ದು, ಪ್ರವೇಶ ದ್ವಾರದಲ್ಲಿ ಗೇಟ್ ಇದೆ. ಶಾಲಾ ಆವರಣದಲ್ಲಿ ವಿವಿಧ ಬಗ್ಗೆಯ ಗಿಡಗಳು ನೆಡಲಾಗಿದ್ದು, ಶಿಕ್ಷಕರು ಒಂದೊಂದು ಗಿಡಗಳ ಸಂರಕ್ಷಣೆಯ ಜವಾಬ್ದಾರಿಯನ್ನು ಒಬ್ಬೊಬ್ಬ ವಿದ್ಯಾರ್ಥಿಗಳಿಗೆ ವಹಿಸಿದ್ದಾರೆ. ಶಾಲೆಯಲ್ಲಿ ಕುಡಿವ ನೀರಿನ ಸೌಲಭ್ಯ ಇದ್ದು, ಆಟಕ್ಕೆ ಬಿಟ್ಟ ವೇಳೆ ಮಕ್ಕಳು ಅವರವರ ಗಿಡಗಳಿಗೆ ನೀರು ಹಾಕುವ ಮೂಲಕ ರಕ್ಷಣೆಗೆ ಮುಂದಾಗಿದ್ದಾರೆ.
ಇತಿಹಾಸ ಹೊಂದಿದ ಶಾಲೆ: ಈ ಶಾಲೆಯಲ್ಲಿ ಕಲಿತಿರುವ ಬಹುತೇಕ ವಿದ್ಯಾರ್ಥಿಗಳು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಕೆಲ ವಿದ್ಯಾರ್ಥಿಗಳು ವಿದೇಶದಲ್ಲಿ ಹಲವು ಹುದ್ದೆಗಳಲ್ಲಿದ್ದಾರೆ. ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಪ್ರಕಾಶ ಅಕ್ಕರಕಿ ಬಾಪೂಜಿ ಶಾಲೆಯಲ್ಲೇ ಕಲಿತಿದ್ದಾರೆ. ಪುರಸಭೆ ಸದಸ್ಯರು, ಪತ್ರಕರ್ತರು, ವಿವಿಧ ಸರಕಾರಿ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿದ್ಯಾರ್ಥಿಗಳು ಶಾಲೆಯ ಬಗೆ ಮುಚ್ಚಿಗೆ ವ್ಯಕ್ತಪಡಿಸಿದ್ದಾರೆ ಎಂದು ವಾರ್ಡ್‌ನ ಪುರಸಭೆ ಸದಸ್ಯ ಚಂದ್ರಶೇಖರ ಕುಂಬಾರ ತಿಳಿಸಿದ್ದಾರೆ.
-ನಾಗರಾಜ ತೇಲ್ಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.