ಸಂಸ್ಕಾರದಿಂದ ಸಮಾಜ ಪ್ರಗತಿ ಸಾಧ್ಯ
Team Udayavani, Jan 23, 2019, 10:02 AM IST
ರಾಯಚೂರು: ನಿಜಶರಣ ಅಂಬಿಗರ ಚೌಡಯ್ಯರ ವೈಚಾರಿಕತೆ ಅಳವಡಿಸಿಕೊಳ್ಳುವ ಮೂಲಕ ಸಮಾಜ ಬಾಂಧವರು ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಬೇಕು. ಅಂದಾಗಲೇ ಸಮಾಜದ ಏಳಿಗೆ ಸಾಧ್ಯವಾಗಲಿದೆ ಎಂದು ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಪರಮೇಶ ಹೇಳಿದರು.
ಜಿಲ್ಲಾಡಳಿತ, ಜಿಪಂ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗಂಗಾಮತಸ್ಥ ಸಮಾಜದ ಸಹಯೋಗದಲ್ಲಿ ನಗರದ ಪಂ. ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಿಜಶರಣ ಅಂಬಿಗರ ಚೌಡಯ್ಯನವರು ಸಾಕಷ್ಟು ವಚನಗಳನ್ನು ರಚಿಸಿ ಸಮಾಜವನ್ನು ಸುಧಾರಿಸಲು ಶ್ರಮಿಸಿದರು. ಚೌಡಯ್ಯನವರ ವೈಚಾರಿಕ ಚಿಂತನೆ ಇಂದಿಗೂ ಪ್ರಸ್ತುತ ಎಂದರು.
ಶಿಕ್ಷಕ ಗೋಪಾಲ ನಾಯಕ ವಿಶೇಷ ಉಪನ್ಯಾಸ ನೀಡಿ, ನಿಜಶರಣ ಅಂಬಿಗರ ಚೌಡಯ್ಯನವರು ಸ್ವಾರ್ಥಕ್ಕಾಗಿ ಬಾಳದೆ ಸಮಾಜಕ್ಕಾಗಿ ಬಾಳಿದರು. ಉತ್ತಮ ಸಮ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿದರು. ಅವರ ವಿಚಾರಗಳಲ್ಲಿ ಸಮಾನತೆ ಸಂದೇಶ ಕಾಣಬಹುದು. ಅವರ ಅನೇಕ ವಚನಗಳಲ್ಲಿ ಕೇವಲ 350 ವಚನಗಳು ಮಾತ್ರ ಲಭ್ಯವಾಗಿವೆ ಎಂದರು.
ನಗರ ಶಾಸಕ ಡಾ| ಶಿವರಾಜ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸಂಸದ ಬಿ.ವಿ. ನಾಯಕ, ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಜಿಲ್ಲಾ ಗಂಗಾಮತಸ್ಥ ಸಮಾಜ ಅಧ್ಯಕ್ಷ ಕೆ.ಶಾಂತಪ್ಪ, ಹಿರಿಯ ಮುಖಂಡ ಕೆ.ಶರಣಪ್ಪ, ಕಡಗೋಲ ಆಂಜನೇಯ, ಶರಣಪ್ಪ ಕಡಗೋಲ ಇತರರು ಇದ್ದರು.
ಅದ್ದೂರಿ ಮೆರವಣಿಗೆ: ಅಂಬಿಗರ ಚೌಡಯ್ಯ ಜಯಂತ್ಯುತ್ಸವ ನಿಮಿತ್ತ ನಗರದ ಅಂಬಿಗರ ಚೌಡಯ್ಯ ವೃತ್ತದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಭಾವಚಿತ್ರದ ಮೆರವಣಿಗೆಗೆ ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಎಂಎಲ್ಸಿ ಎನ್.ಎಸ್.ಬೋಸರಾಜು ಚಾಲನೆ ನೀಡಿದರು. ನಗರಸಭೆಯಿಂದ ರಂಗಮಂದಿರದವರೆಗೆ ಮೆರವಣಿಗೆ ನಡೆಸಲಾಯಿತು. ಆದರೆ, ವೇದಿಕೆ ಕಾರ್ಯಕ್ರಮ ಶುರುವಾದ ಕೆಲ ಹೊತ್ತಿಗೆ ಸಿದ್ಧಗಂಗಾ ಶ್ರೀಗಳ ಶಿವೈಕ್ಯ ಸುದ್ದಿ ಬಂದ ಕಾರಣ ಎರಡು ನಿಮಿಷ ಮೌನಾಚರಣೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.