ಶಿಕ್ಷಣದಿಂದ ಸಮಾಜ ಪ್ರಗತಿ
Team Udayavani, Jan 22, 2018, 4:24 PM IST
ರಾಯಚೂರು: ಶೈಕ್ಷಣಿಕ ಪ್ರಗತಿ ಹೊಂದಿದಾಗ ಮಾತ್ರ ಸಮಾಜ ಮುಖ್ಯವಾಹಿನಿಗೆ ಬರಲು ಸಾಧ್ಯ. ಈ ನಿಟ್ಟಿನಲ್ಲಿ
ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಜಿ.ನಾಗರಾಜ ಹೇಳಿದರು.
ನಗರದ ಶ್ರೀ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಪದ್ಮಶಾಲಿ ಸಮಾಜದಿಂದ ಹಮ್ಮಿಕೊಂಡ ಶ್ರೀ ಮಾರ್ಕಂಡೇಶ್ವರ
ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪದ್ಮಸಾಲಿ ಸಮಾಜ ಜನಸಂಖ್ಯೆಯಲ್ಲಿ
ಚಿಕ್ಕದಾಗಿದ್ದು, ಆರ್ಥಿಕವಾಗಿ ಸಾಕಷ್ಟು ಹಿಂದುಳಿದಿದೆ. ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯುವ ಮೂಲಕ ಸಮಾಜದ
ಏಳಿಗೆಗೆ ಮುಂದಾಗಬೇಕು. ಅಂಥ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ನೀಡುತ್ತಿರುವುದು ಮಾದರಿ ಎಂದರು.
ಸೋಮವಾರಪೇಟೆ ಮಠದ ಶ್ರೀ ಅಭಿನವ ರಾಚೋಟಿ ವೀರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ನೇಕಾರ ಸಮಾಜದ ದೇವರ ದಾಸಿಮಯ್ಯ ಮೊದಲ ವಚನಕಾರರಾಗಿದ್ದು, ಅವರ ವಚನಗಳಲ್ಲಿ ಅಡಗಿರುವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಕ್ಕಳ ಪ್ರತಿಭೆ ಗುರುತಿಸಿ ಸಮಾಜ ಗೌರವಿಸುತ್ತಿರುವುದು ಸಾಧನೆಗೆ ಮತ್ತಷ್ಟು ಪ್ರೇರಣೆ ನೀಡಿದಂತಾಗಿದೆ ಎಂದರು.
ನಗರಸಭೆ ಸದಸ್ಯ ಎ.ಮಾರೆಪ್ಪ ಮಾತನಾಡಿದರು. ಸಮಾಜದ ಅಧ್ಯಕ್ಷ ಪಿ.ಗೋವಿಂದರಾಜುಲು, ಖಜಾಂಚಿ
ಪಿ.ನಾಗೇಶ, ಗೌರವಾಧ್ಯಕ್ಷ ಚಿನ್ನಿ ಪಾಂಡುರಂಗ, ಉಪಾಧ್ಯಕ್ಷ ಹೊನ್ನಾಲ ವೆಂಕಟೇಶ, ಸಮಾಜದ ಯಾದಗಿರಿ ಜಿಲ್ಲಾ ಮಾಜಿ ಅಧ್ಯಕ್ಷ ಕರ್ಲಿ ವಿಶ್ವನಾಥ, ಜಿಲ್ಲಾ ನೇಕಾರ ಸಮುದಾಯದ ತಾಲೂಕು ಅಧ್ಯಕ್ಷ ಕರ್ಲಿ ಈರಣ್ಣ, ಯುವಕ ಸಂಘದ
ಗೌರವಾಧ್ಯಕ್ಷ ಕೊಡಗಂಟಿ ಶರಣಬಸವ, ಅಧ್ಯಕ್ಷ ಚಿನ್ನಿ ಮುನಿಚಂದ್ರ, ಕಾರ್ಯದರ್ಶಿ ಪ್ರಭು ಕರ್ಲಿ, ಸಮಾಜದ
ಮಹಿಳಾ ಮಂಡಳಿ ಅಧ್ಯಕ್ಷೆ ಗಡ್ಡಂ ಕಲಾವತಿ, ಕಾರ್ಯದರ್ಶಿ ಗದ್ದೆ ರಾಧಾ, ಜಿಲ್ಲಾ ಕಾಂಗ್ರೆಸ್ ಮಹಿಳಾ ಮಂಡಳಿ ಹಿಂದುಳಿದ ವರ್ಗಗಳ ಅಧ್ಯಕ್ಷೆ ಸರೋಜಿನಿ ಧಾರವಾಡಕರ್, ಸುರೇಶ ಧಾರವಾಡಕರ್, ಭಂಡಾರಿ ವೆಂಕಟೇಶ ಸೇರಿ ಸಮಾಜದ ಮುಖಂಡರು, ಮಹಿಳೆಯರು ಭಾಗವಹಿಸಿದ್ದರು. ಸಂಗೀತ ಶಿಕ್ಷಕ ರಾಘವೇಂದ್ರ ನೇತೃತ್ವದಲ್ಲಿ ಕರ್ಲಿ ಮಯೂರ ಹಾಗೂ ಕೊಡಗಂಟಿ ನರಸಿಂಹ ಮೂರ್ತಿ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಪತ್ರಕರ್ತ ಈರಣ್ಣ ಕರ್ಲಿ ನಿರೂಪಿಸಿದರು.
ಮಾರ್ಕಂಡೇಶ್ವರ ಜಯಂತಿ ಪ್ರಯುಕ್ತ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ವಿವಿಧ ಪೂಜಾ ಕಾರ್ಯಕ್ರಮ ಜರುಗಿದವು.
ಹೋಮ ಹವನ, ರುದ್ರಾಭಿಷೇಕ ಮತ್ತು ಶ್ರೀ ಮಾರ್ಕಂಡೇಶ್ವರ ಮತ್ತು ರಾಜರಾಜೇಶ್ವರಿ ದೇವಸ್ಥಾನಕ್ಕೆ ಕಳಸರೋಹಣ
ಮಾಡಲಾಯಿತು. ಆಂಜನೇಯ ದೇವಸ್ಥಾನದಿಂದ ಬಿಆರ್‌ಬಿ ವೃತ್ತದ ಮೂಲಕ ಶ್ರೀ ಮಾರ್ಕಂಡೇಶ್ವರ ದೇವಸ್ಥಾನದವರೆಗೆ ಮೆರವಣಿಗೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.