ಮಣ್ಣು ಕುಸಿದು ಕಾರ್ಮಿಕ ಸಾವು
Team Udayavani, Feb 11, 2019, 9:56 AM IST
ಹಟ್ಟಿ ಚಿನ್ನದ ಗಣಿ: ಚಿನ್ನದ ಗಣಿ ಕಂಪನಿಯ ಮಲ್ಲಪ್ಪ ಶಾಫ್ಟ್‌ನ ಭೂಮಿಯ 1500 ಮೀ. ಆಳದಲ್ಲಿ ಕಲ್ಲು ಮಿಶ್ರಿತ ಸಡಿಲ ಮಣ್ಣು ಕುಸಿದು ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ಸಂಭವಿಸಿದೆ.
ಆನ್ವರಿ ಗ್ರಾಮದ ದಾವಲಸಾಬ್ ಎಂ.ಡಿ. ಹುಸೇನ್ (45) (ಭಿಲ್ಲೆ ಸಂಖ್ಯೆ 1415) ಮೃತ ಕಾರ್ಮಿಕ. ಭೂಮಿಯ 1500 ಮೀಟರ್ ಅಳದಲ್ಲಿ ಮಣ್ಣು ಗಟ್ಟಿ ಇದೆಯೋ ಇಲ್ಲವೋ ಎಂಬ ಪರೀಕ್ಷೆಗೆ ತೆರಳಿದಾಗ ದುರ್ಘಟನೆ ಜರುಗಿದೆ. ಕೂಡಲೇ ಇತರೆ ಕಾರ್ಮಿಕರು ವಿಷಯವನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಕೂಡಲೇ ಚಿನ್ನದ ಗಣಿ ಕಂಪನಿ ಪ್ರಧಾನ ವ್ಯವಸ್ಥಾಪಕರು ಹಾಗೂ ವಿವಿಧ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮೃತ ಕಾರ್ಮಿಕನನ್ನು ಚಿನ್ನದ ಗಣಿ ಆಸ್ಪತ್ರೆಗೆ ಸಾಗಿಸಲಾಯಿತು.
ಕುಟುಂಬ ಸದಸ್ಯರ ಆಕ್ರಂದನ: ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು. ಕಾರ್ಮಿಕ ಸಂಘದ ಮುಖಂಡರು, ಅಧಿಕಾರಿಗಳು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಪರಿಹಾರ ಹೆಚ್ಚಳಕ್ಕೆ ಆಗ್ರಹ: ಕೆಲಸದ ವೇಳೆ ಅವಘಡದಿಂದ ಮೃತರಾಗುವ ಕಾರ್ಮಿಕರಿಗೆ ಕಾರ್ಮಿಕರ ಕಾಯ್ದೆ ಪ್ರಕಾರ 6 ಲಕ್ಷ ರೂ. ನೀಡಲಾಗುತ್ತದೆ. ಈ ಮೊತ್ತವನ್ನು ಹೆಚ್ಚಿಸಬೇಕೆಂದು ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಕಾರ್ಮಿಕ ಹಾಗೂ ಸಿಬ್ಬಂದಿ ಸಂಘದ ಅಧ್ಯಕ್ಷ ವಾಲೇಬಾಬು ಮೃತ ಕಾರ್ಮಿಕನ ಕುಟುಂಬದ ಸದಸ್ಯರಿಗ ಎಕೆಲಸ ನೀಡಬೇಕು. ಕಾರ್ಮಿಕನಿಗೆ ಹೆಚ್ಚಿನ ಪರಿಹಾರ ನೀಡಬೇಕೆಂದು ಆಡಳಿತ ಮಂಡಳಿಯವರಿಗೆ ಮನವಿ ಸಲ್ಲಿಸಿದ್ದೇವೆ. ಹಟ್ಟಿ ಚಿನ್ನದ ಗಣಿ ಕಂಪನಿಗೆ ಅಧ್ಯಕ್ಷರು ಆಗಮಿಸಲಿದ್ದು ಅವರೊಂದಿಗೆ ಮಾತುಕತೆ ನಡೆಸಿ ಹೆಚ್ಚಿನ ಪರಿಹಾರ ಒದಗಿಸಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಅಧ್ಯಕ್ಷ ವಾಲೇಬಾಬು, ಸೋಮಣ್ಣ ಪಾಟೀಲ, ಯಂಕೋಬ, ಅಂಜತ್ ಹುಸೇನ ಸೇರಿದಂತೆ ಕಾರ್ಮಿಕ ಮುಖಂಡರು ಪ್ರತಿಭಟನೆ ಸœಳದಲ್ಲಿ ಇದ್ದರು.
ಮಣ್ಣು ಕುಸಿಯಲು ಕಾರಣ: ಭೂಮಿಯ ಕೆಳಮೈಯಲ್ಲಿ ಬ್ಲಾಸ್ಟ್ ಮಾಡಿದ ನಂತರ ಸುರಂಗ ಬೀಳುತ್ತದೆ. ಈ ವೇಳೆ ಕೆಲ ಕಾರ್ಮಿಕರು ಸುರಂಗದೊಳಗೆ ತೆರಳಿ ಮಣ್ಣು ಗಟ್ಟಿ ಇದೆಯೋ ಇಲ್ಲವೋ ಎಂಬುದನ್ನು ಪರಿಶೀಲನೆ ನಡೆಸುತ್ತಾರೆ. ಬಳಿಕ ಅಲ್ಲಿ ಬಿದ್ದ ಅದಿರು ತೆಗೆದು ಹಾಕಿ ಕೆಲಸ ಪ್ರಾರಂಭಿಸಬೇಕು. ಹೀಗೆ ಪರೀಕ್ಷೆಗೆ ಹೋದಾಗ ಐದು ಅಡಿ ಅಗಲ ಮತ್ತು ಉದ್ದದ ಮಣ್ಣು ಮಿಶ್ರಿತ ಕಲ್ಲು ದ್ದು ಕಾರ್ಮಿಕ ಮೃತಪಟ್ಟಿದ್ದಾನೆ ಎಂದು ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ಕೆ. ಲಿಂಗಸುಗೂರು ತಿಳಿಸಿದ್ದಾರೆ.
ಭೂ ಕೆಳಮೈ ಅಧಿಕಾರಿಗಳಿಂದ ಮಾಹಿತಿ ಪಡೆದು ಮೃತ ಕಾರ್ಮಿಕನ ಕುಟುಂಬಕ್ಕೆ ಉದ್ಯೋಗ ಹಾಗೂ ಪರಿಹಾರ ನೀಡಲಾಗುವುದು.
•ಪ್ರಭಾಕರ ಸಂಗೂರಮಠ,ಪ್ರಧಾನ ವ್ಯವಸ್ಥಾಪಕ ಹಟ್ಟಿ ಚಿನ್ನದ ಗಣಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.