ಬೇಡ ಜಂಗಮ ಪ್ರಮಾಣಪತ್ರ ಸಮಸ್ಯೆ ಪರಿಹರಿಸಿ


Team Udayavani, Jul 23, 2022, 5:49 PM IST

19bedajangama

ದೇವರಹಿಪ್ಪರಗಿ: ಬೇಡ ಜಂಗಮ ಪ್ರಮಾಣಪತ್ರದ ಸಮಸ್ಯೆಯನ್ನು ಶೀಘ್ರ ಇತ್ಯರ್ಥ ಪಡಿಸಿ ನ್ಯಾಯ ಒದಗಿಸುವಂತೆ ಹಾಗೂ ಸತ್ಯ ಪ್ರತಿಪಾದನಾ ಸತ್ಯಾಗ್ರಹ ಕೈಗೊಂಡಿರುವ ಬೇಡ ಜಂಗಮರನ್ನು ಬಂಧಿಸಿರುವ ಸರ್ಕಾರದ ಕ್ರಮ ಖಂಡಿಸಿ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.

ಪಟ್ಟಣದ 1008 ಜಗದ್ಗುರು ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಸಭೆ ಸೇರಿದ ತಾಲೂಕಿನ ಜಂಗಮ ಸಮುದಾಯದವರು ಬೇಡ ಜಂಗಮ ಪ್ರಮಾಣಪತ್ರದ ಸಮಸ್ಯೆಯನ್ನು ಇತ್ಯರ್ಥ ಪಡಿಸುವಂತೆ ಆಗ್ರಹಿಸಿದರು.

ಈ ವೇಳೆ ಜಡಿ ಮಠದ ಜಡಿಸಿದ್ದೇಶ್ವರ ಸ್ವಾಮೀಜಿ, ಕೆರುಟಗಿ ಹಿರೇಮಠದ ಶಿವಬಸವ ಸ್ವಾಮೀಜಿ, ಸದಯ್ಯನಮಠದ ವೀರಗಂಗಾಧರ ಸ್ವಾಮೀಜಿ, ನಿವೃತ್ತ ಕೃಷಿ ಅಧಿಕಾರಿ ಮಡಿವಾಳಯ್ಯ ಬುದ್ನಿ, ಬಸಯ್ಯ ಹಿರೇಮಠ ಮಾತನಾಡಿ, ನಮ್ಮ ಹೋರಾಟ ನಮ್ಮ ಹಕ್ಕಿಗಾಗಿಯೇ ವಿನಃ ಯಾರ ವಿರುದ್ಧವೂ ಅಲ್ಲ. ಡಾ| ಅಂಬೇಡ್ಕರ್‌ ಸಂವಿಧಾನದ ಮೂಲಕ ನೀಡಿರುವ ಮೀಸಲಾತಿಯನ್ನು ಪಡೆಯಲು ಕೇಳುತ್ತಿದ್ದೇವೆ ಎಂದರು.

ಕಾಯಕ ನಿರತ ಜಂಗಮ ಸಮುದಾಯ ಹಿಂದಿನಿಂದಲೂ ನಿರ್ಲಕ್ಷéಕ್ಕೆ ಒಳಗಾಗಿದೆ. ಇನ್ನೂ ನಮ್ಮ ತಾಳ್ಮೆ ಪರೀಕ್ಷಿಸಬೇಡಿ. ಬೆಂಗಳೂರಿನಲ್ಲಿ ಸತ್ಯ ಪ್ರತಿಪಾದನಾ ಸತ್ಯಾಗ್ರಹ ಕೈಗೊಂಡಿರುವ ಬೇಡ ಜಂಗಮರನ್ನು ಬಂಧಿಸಿರುವ ಸರ್ಕಾರದ ಕ್ರಮ ಖಂಡನೀಯ. ಎಂದ ಅವರು, ನಮಗೆ ಸಲ್ಲಬೇಕಾದ ಮೀಸಲಾತಿ ನೀಡಿ ಎಂದು ಒತ್ತಾಯಿಸಿದರು.

ಸಭೆ ನಂತರ ಪಂಚಾಚಾರ್ಯ ಕಲ್ಯಾಣ ಮಂಟಪದಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಂಡು ಡಾ| ಅಂಬೇಡ್ಕರ್‌ ವೃತ್ತ ತಲುಪಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ತಹಶೀಲ್ದಾರ್‌ ಕಚೇರಿ ತಲುಪಿತು. ಈ ಸಂದರ್ಭದಲ್ಲಿ ಪರದೇಶಿ ಮಠದ ಶಿವಯೋಗಿ ಶ್ರೀ ಮಾತನಾಡಿದರು.

ನಂತರ ತಹಶೀಲ್ದಾರ್‌ ಸಿ.ಎ. ಗುಡದಿನ್ನಿ ಅವರಿಗೆ ಮನವಿ ಸಲ್ಲಿಸಿದರು. ಕಡಕೋಳ ಹಿರೇಮಠದ ಮಹಾಲಿಂಗೇಶ್ವರ ಸ್ವಾಮೀಜಿ, ಯಾಳವಾರ ಗುರುಮಠದ ಕೇದಾರ ಶ್ರೀ, ಕೋರವಾರ ಚೌಕಿಮಠದ ಕಾಶಿಲಿಂಗ ಶ್ರೀ, ಅಯ್ಯಪ್ಪಯ್ಯಸ್ವಾಮಿ ಹಿರೇಮಠ, ಗುರುಬಸಯ್ಯ ಹಿರೇಮಠ, ಬಸಯ್ಯ ಮಲ್ಲಿಕಾರ್ಜುನಮಠ, ಶಾಂತಯ್ಯ ಜಡಿಮಠ, ಎಸ್‌.ವಿ. ಆಲಾಳಮಠ, ಡಾ| ಮಹಾಂತೇಶ ಹಿರೇಮಠ, ಡಾ| ಮಂಜುನಾಥ ಮಠ, ಶಿವಾನಂದಯ್ಯ ಹಿರೇಮಠ, ಸೋಮಶೇಖರ ಹಿರೇಮಠ, ವೀರಘಂಟಯ್ಯ ಗದ್ದಿಗೆಮಠ, ಮಹೇಶ ಬುದ್ನಿ, ಅರನಾಥ ಹಿರೇಮಠ, ಪ್ರಕಾಶ ಡೋಣೂರಮಠ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ಜಂಗಮ ಸಮುದಾಯದ ಪ್ರಮುಖರು ಇದ್ದರು.

ಟಾಪ್ ನ್ಯೂಸ್

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

1-supri

Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ

1-leo

Football;ಕೇರಳದಲ್ಲಿ ಅಂತಾರಾಷ್ಟ್ರೀಯ ಪಂದ್ಯ ಆಡಲಿರುವ ದಿಗ್ಗಜ ಲಿಯೋನೆಲ್ ಮೆಸ್ಸಿ

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

15

UV Fusion: ಬಣ್ಣದ ಛತ್ರಿ; ಇಲ್ಲೊಂದು ಕಥೆ

14

UV Fusion: ವಯೋಮಾನದ ಕಾಲಘಟ್ಟಕ್ಕೆ ಬದುಕಿನನುಭವದ ಸಾರ

13

UV Fusion: ಹಿರಿಜೀವಗಳ ಕಾಳಜಿ ವಹಿಸಿ

12

UV Fusion: ಇಂಗ್ಲೆಂಡ್‌ ಟು ಕೋಲ್ಕತಾ ಬಸ್‌ ಒಂದು ನೆನಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.