Maski: ಪೊಲೀಸ್ ಪೇದೆಗಳ ಮೇಲೆ ಹಲ್ಲೆ: ಎಸ್ಪಿ, ಎಎಸ್ಪಿ ಭೇಟಿ, ವಿಚಾರಣೆ
Team Udayavani, Jan 9, 2024, 4:41 PM IST
ಮಸ್ಕಿ: ತಾಲೂಕಿನ ಬಳಗಾನೂರು ಪೊಲೀಸ್ ಠಾಣೆಯ ಪೇದೆಗಳಿಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಹೆಚ್ಚುವರಿ ವರಿಷ್ಠಾಧಿಕಾರಿ ಪ್ರತ್ಯೇಕ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.
ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಶಂಕಿತ ಆರೋಪಿಗಳ ವಿಚಾರಣೆಗೆ ತೆರಳಿದಾಗ ನಾಲ್ಕೈದು ಜನರ ಗುಂಪು ಪೇದೆಗಳಾದ ಮಂಜುನಾಥ, ಗೋಪಾಲ ಎನ್ನುವರ ಮೇಲೆ ದಾಳಿ ನಡೆಸಿದ್ದರು. ಪೇದೆಗಳಿಬ್ಬರು ಗಂಭಿರ ಗಾಯಗೊಂಡು ಸಿಂಧನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಸ್ಪಿ ನಿಖಿಲ್ ಬಿ. ಗಾಯಾಳು ಸಿಬ್ಬಂದಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ ಬಳಗಾನೂರು ಪೊಲೀಸ್ ಠಾಣೆ, ಹಸ್ಮಕಲ್ ಗ್ರಾಮ ಹಾಗೂ ಮಸ್ಕಿಗೆ ಭೇಟಿ ನೀಡಿ ಘಟನಾ ಸ್ಥಳ ಪರಿಶೀಲನೆ ನಡೆಸಿದರುಬ. ಬಳಿಕ ಸುದ್ದಿಗಾರರ ಜತೆ ಮಾತಾನಾಡಿ, ಪೊಲೀಸರ ಮೇಲೆ ದಾಳಿ ಮಾಡುವುದು ಹೊಸದೇನಲ್ಲ. ಇಂತಹ ಘಟನೆಗಳು ಆಗಾಗ ನಡೆಯುತ್ತವೆ. ಶೈಕ್ಷಣಿಕ, ಕಾನೂನಿನ ತಿಳಿವಳಿಕೆ ಕೊರತೆಯಿಂದ ಇಂತಹ ಘಟನೆ ನಡೆಯುತ್ತವೆ. ಈ ಬಗ್ಗೆ ಆರು ಜನರ ಮೇಲೆ ಕೇಸ್ ದಾಖಲಾಗಿದೆ. ಆರೋಪಿಗಳ ಬಂಧನಕ್ಕಾಗಿ ಸಿಂಧನೂರು ಗ್ರಾಮೀಣ ಸಿಪಿಐ, ಇಬ್ಬರು ಪಿಎಸ್ಐಗಳ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ. ಶೀಘ್ರವೇ ಅರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಲಲಾಗಿತ್ತದೆ ಎಂದರು.
ಬಿಗಿ ಕ್ರಮ: ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಿನ ಅಪರಾಧ ಚಟುವಟಿಕೆಗಳು ನಡೆಯುತ್ತಿವೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಎಎಸ್ಪಿ ಶಿವಕುಮಾರ್ ಈ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ಬೀಟ್ ಪೊಲೀಸ್, 112 ವಾಹನ ಸಂಚಾರ, ಹೆದ್ದಾರಿ ಗಸ್ತು ಸೇರಿ ಹೆಚ್ಚಿನ ಪೊಲೀಸ್ ಕಣ್ಗಾವಲು ಇರಿಸಲಾಗಿದೆ. ಸಾರ್ವಜನಿಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಇದನ್ನೂ ಓದಿ: IMDbಯ 2024 ರ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ: ಸ್ಥಾನ ಪಡೆದ ಕನ್ನಡದ ಏಕೈಕ ಸಿನಿಮಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.