
ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
Team Udayavani, Dec 4, 2018, 1:18 PM IST

ರಾಯಚೂರು: ಸಮಾಜದ ರಕ್ಷಣೆ ಹೊಣೆ ಹೊತ್ತಿರುವ ಆರಕ್ಷಕರು ಸದಾ ಕ್ರಿಯಾಶೀಲರಾಗಿರಬೇಕು. ಒತ್ತಡ ನಿವಾರಣೆಗೆ ಇಂಥ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬೈಲೂರು ಶಂಕರ ರಾಮ್ ತಿಳಿಸಿದರು.
ಪೊಲೀಸ್ ಇಲಾಖೆಯಿಂದ ನಗರದ ಡಿಎಆರ್ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಪೊಲೀಸರಿಗೆ ಮನಸ್ಸು-ದೈಹಿಕ ಸಾಮರ್ಥ್ಯ ಅತ್ಯಗತ್ಯ. ಸೇವೆಗೆ ಸೇರುವ ಮುನ್ನ ದೈಹಿಕ ಸಾಮರ್ಥ್ಯ ಅಳೆದು ಆಯ್ಕೆ ಮಾಡುತ್ತಾರೆ. ದೈಹಿಕ ದಕ್ಷತೆ ಕುಗ್ಗಿದಂತೆಲ್ಲ ವ್ಯಕ್ತಿ ಮಾನಸಿಕ ಒತ್ತಡಗಳಿಗೂ ಸಿಲುಕುತ್ತಾನೆ. ಆಗ ಇಂಥ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಬೇಕು ಎಂದು ಸಲಹೆ ನೀಡಿದರು.
ಆರಂಭದಲ್ಲಿದ್ದ ಸೇವಾ ಮನೋಭಾವ ಕುಗ್ಗುತ್ತದೆ. ಅದ್ದರಿಂದ ಪೊಲೀಸರು ಮಾನಸಿಕ-ದೈಹಿಕ ಸಾಮರ್ಥ್ಯವನ್ನು ಕಾಯ್ದುಕೊಳ್ಳುವ ಮೂಲಕ ಪ್ರಾಮಾಣಿಕ ಸೇವೆಗೆ ಮುಂದಾಗಬೇಕು. ನಮ್ಮ ಮನಸ್ಸು, ಶರೀರದ ನಡುವೆ ಸಮಾನತೆ ಕಾಯ್ದುಕೊಂಡು ಆರೋಗ್ಯ ಪೂರ್ಣ ಬದುಕು ನಡೆಸಬೇಕಿದೆ ಎಂದರು.
ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಮಹಾದೇವಯ್ಯ ಮಾತನಾಡಿ, ಪೊಲೀಸ್ ಇಲಾಖೆ
ಸಿಬ್ಬಂದಿ ಇಡೀ ವರ್ಷ ಒತ್ತಡದಲ್ಲಿಯೇ ಸೇವೆ ಮಾಡುತ್ತಾರೆ. ಅವರ ಕೆಲಸದಲ್ಲಿ ಹೊಸ ಉತ್ಸಾಹ ತುಂಬುವ ಉದ್ದೇಶದಿಂದ
ಹಮ್ಮಿಕೊಂಡಿರುವ ಕ್ರೀಡಾಕೂಟದಲ್ಲಿ ಅಧಿಕಾರಿ, ಸಿಬ್ಬಂದಿ ವರ್ಗ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.
ಆರಂಭದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿರುವ ಠಾಣೆಗಳ ಪೊಲೀಸರ ತಂಡವು ಗಣ್ಯರಿಗೆ ಗೌರವ ವಂದನೆ ಸಲ್ಲಿಸಿತು. ಬಳಿಕ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರಬಾಬು, ಹೆಚ್ಚುವರಿ ಎಸ್ಪಿ ಎಸ್.ಬಿ.ಪಾಟೀಲ, ಮುಖಂಡರಾದ ರವೀಂದ್ರ
ಜಲ್ದಾರ್ ಸೇರಿ ಇಲಾಖೆ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು. ನಂತರ ವಿವಿಧ ಕ್ರೀಡೆಗಳು ಜರುಗಿದವು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.