ಗಾಂಧೀಜಿ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ
Team Udayavani, Oct 15, 2019, 3:20 PM IST
ರಾಯಚೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆ ನಿಮಿತ್ತ ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಗರದ ಕೃಷಿ ವಿಜ್ಞಾನಗಳ ವಿವಿಯಲ್ಲಿ ಸೋಮವಾರ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.
ಪ್ರದರ್ಶನಕ್ಕೆ ಚಾಲನೆ ನೀಡಿದ ಶಿಕ್ಷಣ ನಿರ್ದೇಶಕ ಎಸ್. ಕೆ.ಮೇಟಿ ಮಾತನಾಡಿ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಕಗೃಹದಲ್ಲಿ ಆಯೋಜಿಸಿರುವ ಛಾಯಾಚಿತ್ರ ಪ್ರದರ್ಶನ ಅ.16ರವರೆಗೆ ನಡೆಯಲಿದೆ. ಪ್ರದರ್ಶನ ಸಂಪೂರ್ಣ ಉಚಿತವಾಗಿದೆ. ಸಾರ್ವಜನಿಕರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ವೀಕ್ಷಿಸಿ ಉಪಯುಕ್ತ ಮಾಹಿತಿ ಪಡೆಯಬಹುದು ಎಂದರು. ಮಹಾತ್ಮ ಗಾಂಧೀಜಿಯವರು ಜಗತ್ಪ್ರಸಿದ್ಧ ವ್ಯಕ್ತಿ. ಅಹಿಂಸಾ ಮಾರ್ಗದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಅವರು, ದೇಶದಲ್ಲಿ ಆಚರಣೆಯಲ್ಲಿದ್ದ ಹಲವು ಅನಿಷ್ಟ ಪದ್ಧತಿಗಳನ್ನು ಹೊಡೆದೋಡಿಸಿ ಸುಧಾರಣೆ ತರಲು ಯತ್ನಿಸಿದರು. ಅವರು ಸಾಗಿದ ಜೀವನ ಪಯಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯವರು ಛಾಯಾಚಿತ್ರಗಳ ಮೂಲಕ ಸಾರ್ವಜನಿಕರಿಗೆ ತಿಳಿಸುತ್ತಿರುವುದು ಶ್ಲಾಘನೀಯ ಎಂದರು.
ಗಾಂಧಿಧೀಜಿ ಯಾವುದೇ ಅಧಿಕಾರಕ್ಕೆ ಆಸೆ ಪಡಲಿಲ್ಲ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸಂಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡವರು. ವಿದ್ಯಾರ್ಥಿಗಳು ಇಂತಹ ಮಹಾತ್ಮರ ಚಿಂತನೆ, ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದರು. ಕೃಷಿ ತಾಂತ್ರಿಕ ಮಹಾವಿದ್ಯಾಲಯ ಮುಖ್ಯಸ್ಥ ವೀರನಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ ಎಚ್.ಜಿ. ಸೇರಿ ಇತರೆ ಹಲವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.