ರಸ್ತೆ ತಡೆದು ರಿಮ್ಸ್ ಸಿಬ್ಬಂದಿ ಪ್ರತಿಭಟನೆ
Team Udayavani, Sep 2, 2017, 4:04 PM IST
ರಾಯಚೂರು: ನಗರದ ರಿಮ್ಸ್‌ನಲ್ಲಿ ಆಡಳಿತ ಮಂಡಳಿ ನಿಯಮ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿ ಟಿಯುಸಿಐ ನೇತೃತ್ವದಲ್ಲಿ ಸಿಬ್ಬಂದಿ ಶುಕ್ರವಾರ ಸಂಚಾರ ತಡೆದು ಪ್ರತಿಭಟಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು.
ನಗರದ ಬಸವೇಶ್ವರ ವೃತ್ತದಲ್ಲಿ ಸಂಚಾರ ತಡೆದು ಪ್ರತಿಭಟನೆ ಶುರು ಮಾಡಿದ ಕಾರ್ಯಕರ್ತರು ರಿಮ್ಸ್ ನಿರ್ದೇಶಕಿ ಡಾ| ಕವಿತಾ ಪಾಟೀಲ , ವೈದ್ಯಕೀಯ ಖಾತೆ ಸಚಿವ ಡಾ| ಶರಣಪ್ರಕಾಶ ಪಾಟೀಲ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಸಂಸ್ಥೆ ನಿರ್ದೇಶಕಿ ನಿಯಮಬಾಹಿರವಾಗಿ ಆಡಳಿತ ನಡೆಸುತ್ತಿದ್ದಾರೆ. ವೇತನ ಹೆಚ್ಚಿಸುವಂತೆ ಕೇಳಿದ್ದಕ್ಕೆ 36 ನರ್ಸಿಂಗ್
ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಅಲ್ಲದೇ, ನಿರ್ದೇಶಕ ಹುದ್ದೆಯಲ್ಲಿ ಮುಂದುವರಿಯಲು ಡಾ| ಕವಿತಾ
ಪಾಟೀಲ ಅವರು ಅನರ್ಹರಾಗಿದ್ದು, ಕೂಡಲೇ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಆಗ್ರಹಿಸಿದರು.
ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಐದು ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಯಾರೊಬ್ಬರು ಸ್ಪಂದಿಸಿಲ್ಲ. ಹೀಗಾಗಿ ಟಿಯುಸಿಐ ರಾಜ್ಯಾಧ್ಯಕ್ಷ ಆರ್. ಮಾನಸಯ್ಯ ಅವರ ನೇತೃತ್ವದಲ್ಲಿ ಬಸವೇಶ್ವರ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮಾನವ ಸರಪಳಿ ನಿರ್ಮಿಸಿ ಸಂಚಾರ ತಡೆದರು. ವಜಾಗೊಳಿಸಿರುವ 36 ಸಿಬ್ಬಂದಿಯನ್ನು ಮರು ನೇಮಕ ಮಾಡಿಕೊಳ್ಳಬೇಕು. ಬೇಡಿಕೆಯನ್ವಯ ವೇತನ ಹೆಚ್ಚಿಸಬೇಕು. ಸಿ ಮತ್ತು ಡಿ ಗ್ರೂಪ್ ಕಾರ್ಮಿಕರಿಗೆ ನಿಗದಿತ ವೇತನ ಪಾವತಿಸಬೇಕು.ಭ್ರಷ್ಟ ಹಾಗೂ ಕಾರ್ಮಿಕ ವಿರೋಧಿ ರಿಮ್ಸ್ ಪ್ರಭಾರ ಡೀನ್
ಡಾ| ಕವಿತಾ ಪಾಟೀಲ ಅವರನ್ನು ಅಮಾನತುಗೊಳಿಸಬೇಕು.ಸೋಲಾರ್ ದೀಪಗಳ ಅಳವಡಿಕೆಯಲ್ಲಿ 1.27 ಕೋಟಿ
ರೂ. ದುರ್ಬಳಕೆಯಾಗಿದ್ದು, ಈ ಕೂಡಲೇ ಅದನ್ನು ತನಿಖೆಗೊಳಪಡಿಸಬೇಕು. ರಿಮ್ಸ್‌ನ ಎಸ್‌ಸಿ ಅನುದಾನದಡಿ
ಎಂಟು ಕೋಟಿ ರೂ. ದುರ್ಬಳಕೆ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಟಿಯುಸಿಐ ರಾಜ್ಯಾಧ್ಯಕ್ಷ ಆರ್.ಮಾನಸಯ್ಯ, ಉಪಾಧ್ಯಕ್ಷ ಚಿನ್ನಪ್ಪ ಕೊಟ್ರಿಕಿ, ಜಿಲ್ಲಾಧ್ಯಕ್ಷ ಜಿ. ಅಮರೇಶ, ಮುಖಂಡರಾದ ಅಡವಿರಾವ, ಆರ್. ಹುಚ್ಚರೆಡ್ಡಿ, ವಿಜಯಕುಮಾರ, ಶ್ರವಣಕುಮಾರ, ಶಿವಶರಣಪ್ಪ, ಸುನಂದಾ ಕುಮಾರ, ಸುಹಾಸಿನಿ, ಪ್ರತಿಭಾ ಸೇರಿ ಸಂಘಟನೆ ಸದಸ್ಯರು, ಕಾರ್ಮಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.