ಮನೆ ಫಲಾನುಭವಿಗಳ ಪರದಾಟ
Team Udayavani, Mar 20, 2018, 3:57 PM IST
ಮುದಗಲ್ಲ: ಗುಡಿಸಲು ಮುಕ್ತ ರಾಜ್ಯ ನಿರ್ಮಾಣಕ್ಕೆ ಸರಕಾರ ಬಸವ ವಸತಿ, ಪ್ರಧಾನಮಂತ್ರಿ ಆವಾಸ ಯೋಜನೆ,
ಅಂಬೇಡ್ಕರ್ ವಸತಿ ಸೇರಿ ವಿವಿಧ ವಸತಿ ಯೋಜನೆ ಜಾರಿಗೆ ತಂದಿದೆ.
ಗುಡಿಸಲು ವಾಸಿಗಳಿಗೆ ಮನೆ ನಿರ್ಮಿಸಿ ಕೊಳ್ಳಲು ಅನುದಾನ ನೀಡುತ್ತಿದೆ. ಆದರೆ ಮನೆ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಕಂತಿನ ಹಣ ಜಮಾ ಮಾಡದ್ದರಿಂದ ಈಗಾಗಲೇ ಸಾಲ ಮಾಡಿ ಮನೆ ನಿರ್ಮಿಸಿಕೊಂಡ ಫಲಾನುಭವಿಗಳು ಅನುದಾನಕ್ಕಾಗಿ ಚಾತಕ ಪಕ್ಷಿಯಂತೆ ಕಾಯುವಂತಾಗಿದೆ.
ಲಿಂಗಸುಗೂರು ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ 2015-16, 2016-17, 2017-18ಕ್ಕೆ ಬೆಂಗಳೂರಿನ ರಾಜೀವ ಗಾಂಧಿ ವಸತಿ ನಿಗಮದಿಂದ ಗುಡಿಸಲು ವಾಸಿಗಳಿಗೆ ಮನೆ ಮಂಜೂರಾಗಿವೆ.
ಫಲಾನುಭವಿಗಳು ಈಗಾಗಲೇ ತಳಪಾಯ ಮತ್ತು ಗೋಡೆ ಹಂತದವರೆಗೆ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ವಸತಿ ಯೋಜನೆ ನಿಯಮಗಳಂತೆ ಗ್ರಾಪಂ ಅಧಿಕಾರಿಗಳು ಜಿಪಿಎಸ್ ಮಾಡಿದ್ದಾರೆ. ಆದರೆ ಇದುವರೆಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಬಿಡಿಗಾಸು ಜಮೆಯಾಗಿಲ್ಲ, ಸಾಲ ಮಾಡಿ ಮನೆ ನಿರ್ಮಾಣಕ್ಕೆ ಸಿಮೆಂಟ್, ಮರಳು, ಕಿಟಕಿ ,ಬಾಗಿಲು, ಇಟ್ಟಿಗೆ ತಂದು ಹಾಕಿದ್ದಾರೆ.
ಆದರೆ ಒಂದೂವರೆ ತಿಂಗಳಿಂದ ಅನುದಾನ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಕೆಲ ಫಲಾನುಭವಿಗಳು ಮನೆ ನಿರ್ಮಿಸಿಕೊಂಡು ನಾಲ್ಕೈದು ತಿಂಗಳಾದರೂ ರಾಜೀವಗಾಂಧಿ ವಸತಿ ನಿಗಮದಿಂದ ಅನುದಾನ ಬಂದಿಲ್ಲ, ಆಯಾ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ವಿಚಾರಿಸಿದರೆ ರಾಜೀವಗಾಂಧಿ ವಸತಿ ನಿಗಮದ ಅಧಿಕಾರಿಗಳನ್ನು ಕೇಳಿ ಎನ್ನುತ್ತಾರೆ.
ಗ್ರಾಪಂಗೆ ಯಾವುದೇ ಹಣಕಾಸಿನ ಅಧಿಕಾರ ಇಲ್ಲ ಎಂದು ಜಾರಿಕೊಳ್ಳುತ್ತಾರೆ. ಇದ್ದ ಹರಕು-ಮುರಕು ಗುಡಿಸಲುಗಳಲ್ಲಿ
ವಾಸ ಮಾಡುತ್ತಿದ್ದ ಬಡ ಕುಟುಂಬಗಳು ಸರಕಾರ ಸಹಾಯಧನ ನೀಡುತ್ತದೆ ಎಂಬ ಆಶೆಯಿಂದ ಗುಡಿಸಲುಗಳನ್ನು ಕಿತ್ತಿ ಸಾಲ ಮಾಡಿ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಆದರೆ ಅಧಿಕಾರಿಗಳು ಸಕಾಲಕ್ಕೆ ಅನುದಾನ ಬಿಡುಗಡೆ ಮಾಡದಿರುವುದರಿಂದ ಮನೆಗಳ
ಕಾಮಗಾರಿ ಅರ್ಧಕ್ಕೆ ನಿಂತಿದೆ. ಸಂಬಂಧಿಸಿದ ಅಧಿಕಾರಿಗಳು ಮನೆ ನಿರ್ಮಿಸಿಕೊಂಡವರಿಗೆ ಅನುದಾನ ಬಿಡುಗಡೆ ಮಾಡಬೇಕು ಎಂದು ಹಡಗಲಿ ತಾಪಂ ಸದಸ್ಯೆ ಶಾರದಾ ರಾಠೊಡ ಆಗ್ರಹಿಸಿದ್ದಾರೆ.
ಜಿಪಿಎಸ್ ತಂತ್ರಜ್ಞಾನದ ಫಲಾನುಭವಿಗಳು ನಿರ್ಮಿಸಿಕೊಂಡ ಫೋಟೋಗಳನ್ನು ಸೆರೆಹಿಡಿಯಲಾಗಿದೆ. ಅನುದಾನದ ಕಂತು ಬಿಡುಗಡೆಗೆ ರಾಜೀವಗಾಂಧಿ ವಸತಿ ನಿಗಮಕ್ಕೆ ಶಿಫಾರಸು ಮಾಡಲಾಗಿದೆ. ಇಂದು-ನಾಳೆ ಕಂತಿನ ಅನುದಾನ ಜಮೆಯಾಗುವ ಸಾಧ್ಯತೆ ಇದೆ.
ಶಂಕರ ನಾಯ್ಕ, ವಸತಿ ಯೋಜನೆಗಳ ನೋಡಲ್ ಅಧಿಕಾರಿ
ದೇವಪ್ಪ ರಾಠೊಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.