ವಿದ್ಯಾರ್ಥಿಗಳಿಗೆ ಉನ್ನತ ಗುರಿ ಅಗತ್ಯ
Team Udayavani, Aug 17, 2022, 6:42 PM IST
ಲಿಂಗಸುಗೂರು: ವಿದ್ಯಾರ್ಥಿಗಳಿಗೆ ಉನ್ನತ ಗುರಿ ಇರಬೇಕು, ಅದರಷ್ಟೇ ಪರಿಶ್ರಮ ಪಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹೆಚ್ಚುವರಿ ಕೊಠಡಿ, ಗ್ರಂಥಾಲಯ, ಪ್ರಯೋಗಾಲಯ, ಸಭಾಂಗಣ ಉದ್ಘಾಟಿಸಿ ಅವರು ಮಾತನಾಡಿದರು.
ಯಾರೂ ಕೂಡ ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಸರ್ಕಾರ ಶಿಕ್ಷಣಕ್ಕಾಗಿ ಸಾವಿರಾರು ಕೋಟಿ ಖರ್ಚು ಮಾಡುತ್ತಿದೆ. ಇಲ್ಲಿನ ಶಾಸಕ ಡಿ.ಎಸ್. ಹೂಲಗೇರಿ ಶಿಕ್ಷಣದ ಮೇಲೆ ಅಪಾರ ಕಾಳಜಿ ಇದ್ದುದ್ದರಿಂದ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸಾಕಷ್ಟು ಅನುದಾನ ತಂದಿದ್ದಾರೆ. ವಿದ್ಯಾರ್ಥಿಗಳು ಸಹ ಉನ್ನತ ಸ್ಥಾನದ ಗುರಿ ಇಟ್ಟುಕೊಂಡು ಅದರಷ್ಟೇ ಪರಿಶ್ರಮ ಪಡಬೇಕು. ಸಾಧಕರ ಆದರ್ಶ ಮೈಗೂಡಿಸಿಕೊಂಡು ಅವರಂತೆಯೇ ಮುನ್ನುಗ್ಗಬೇಕು ಎಂದರು.
ಈ ವೇಳೆ ಶಾಸಕ ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ಡಿ.ಎಸ್. ಹೂಲಗೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖೀಲ್, ಸಹಾಯಕ ಆಯುಕ್ತ ರಾಹುಲ್ ಸಂಕನೂರು, ಕಾಲೇಜು ಪ್ರಾಚಾರ್ಯ ಡಾ| ಮಹಾಂತಗೌಡ ಪಾಟೀಲ್ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.