ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗೆ ಆದ್ಯತೆ ನೀಡಲಿ
Team Udayavani, Dec 2, 2018, 2:57 PM IST
ರಾಯಚೂರು: ಮಕ್ಕಳು ಕೇವಲ ಪಠ್ಯಕ್ಕೆ ಸೀಮಿತಗೊಳ್ಳದೇ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚು ಆದ್ಯತೆ ನೀಡಬೇಕು. ಅಂದಾಗ ಮಾತ್ರ ನಿಮ್ಮೊಳಗಿನ ಪ್ರತಿಭೆಗೆ ಸೂಕ್ತ ವೇದಿಕೆ ಸಿಗಲು ಸಾಧ್ಯ ಎಂದು ನಗರ ಶಾಸಕ ಡಾ| ಶಿವರಾಜ ಪಾಟೀಲ ಸಲಹೆ ನೀಡಿದರು.
ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ , ಪಪೂ ಶಿಕ್ಷಣ ಇಲಾಖೆ, ಬಾಲಕಿಯರ ಹಾಗೂ ಬಾಲಕರ ಪಪೂ ಕಾಲೇಜುಗಳ ಸಹಯೋಗದಲ್ಲಿ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಕಲಬುರಗಿ ವಿಭಾಗೀಯ ಮಟ್ಟದ ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಂಡಷ್ಟು ಅವರ ಬುದ್ಧಿಶಕ್ತಿ ಚುರುಕುಗೊಳ್ಳಲಿದೆ. ಅಲ್ಲದೇ, ದೈಹಿಕ ಆರೋಗ್ಯವು ಸುಧಾರಿಸಲಿದೆ. ಸರ್ಕಾರದಿಂದಲೂ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕ್ರೀಡೆಯಲ್ಲೂ ಸಾಧನೆಗೆ ಸಾಕಷ್ಟು ಅವಕಾಶಗಳಿವೆ. ಮಕ್ಕಳ ಪ್ರತಿಭೆ ಆಧರಿಸಿ ಆ ಕ್ಷೇತ್ರದಲ್ಲಿ ಮುಂದುವರಿಯಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಪರಮೇಶಪ್ಪ ಮಾತನಾಡಿ, ಮಕ್ಕಳು ಸೋಲು ಗೆಲುವನ್ನು ಲೆಕ್ಕಿಸದೆ ಕ್ರೀಡೆಯಲ್ಲಿ ಪಾಲ್ಗೊಳ್ಳುವುದಕ್ಕೆ ಆದ್ಯತೆ ನೀಡಬೇಕು. ಸೋತ ಮಾತ್ರಕ್ಕೆ ಕೀಳರಿಮೆ ಹೊಂದದೆ ಮತ್ತೆ ಪ್ರಯತ್ನಿಸಬಹುದು. ಆದರೆ, ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ. ಶಿಕ್ಷಕರು ಕೂಡ ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು ಎಂದರು.
ರಾಜ್ಯಮಟ್ಟದ ಹಾಕಿಪಟು ಬಸವರಾಜ ನಾಡಗೌಡರ ಮಾತನಾಡಿದರು. ಬಾಲಕಿಯರ ಸರ್ಕಾರಿ ಪಪೂ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ರವೀಂದ್ರ ಜಲ್ದಾರ್ ಪಾಲ್ಗೊಂಡಿದ್ದರು. ಪ್ರಾ. ಅಮರೇಶ ಪ್ರಾಸ್ತಾವಿಕ ಮಾತನಾಡಿದರು. ಉಪನಿರ್ದೇಶಕ ಸಿ.ಟಿ.ಕಲ್ಲಯ್ಯ, ನಾಗರಾಜ, ಪ್ರಕಾಶ ಕುಲಕರ್ಣಿ, ಸದಾಶಿವಪ್ಪ ಪಾಟೀಲ ಹಾಗೂ ಸರ್ಕಾರಿ,ಅನುದಾನಿತ, ಅನುದಾನ ರಹಿತ ಕಾಲೇಜುಗಳ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಪಾಲ್ಗೊಂಡಿದ್ದರು. ಆರು ಜಿಲ್ಲೆಗಳಿಂದ ಸುಮಾರು 270 ವಿದ್ಯಾರ್ಥಿಗಳು 11 ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಉಪನ್ಯಾಸಕ ಪವನಕುಮಾರ ಪ್ರಾರ್ಥಿಸಿದರು. ಅನುರಾಧಾ, ಸರಸ್ವತಿ ನಾಡಗೀತೆ ಪ್ರಸ್ತುತಪಡಿಸಿದರು. ಪ್ರಾಚಾರ್ಯ ಬೂದೆಪ್ಪ ಸ್ವಾಗತಿಸಿದರು. ಉಪನ್ಯಾಸಕ ಮಂಜುನಾಥ ಐಲಿ ನಿರೂಪಿಸಿದರು. ಉಪನ್ಯಾಸಕರ ಸಂಘದ ಅಧ್ಯಕ್ಷ ನರಸಪ್ಪ ಭಂಡಾರಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಭಾರತೀಯ ಸಂಸ್ಕೃತಿ ಮತ್ತು ಭಗವದ್ಗೀತೆ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.