ಕನ್ನಡಪರ ಸಂಘಟನೆಗಳ ಬೆಂಬಲ ಹೊಸ ಮೆರುಗು
Team Udayavani, Dec 12, 2021, 12:44 PM IST
ರಾಯಚೂರು: ಕನ್ನಡ ಸಾಹಿತ್ಯ ಪರಿಷತ್‌ನ ಆಶಯಗಳಿಗೆ ಬೆನ್ನೆಲುಬಾಗಿ ಕನ್ನಡಪರ ಸಂಘಟನೆಗಳು ನಿಲ್ಲುವುದಾಗಿ ಹೇಳುತ್ತಿರುವುದು ಕನ್ನಡ ಸೇವೆಗೆ ಹೊಸ ಮೆರುಗು ತಂದುಕೊಟ್ಟಿದೆ ಎಂದು ಕಸಾಪ ನೂತನ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ ತಿಳಿಸಿದರು.
ನಗರದ ಕನ್ನಡ ಭವನದಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಶನಿವಾರ ಹಮ್ಮಿಕೊಂಡಿದ್ದ ಅಭಿನಂದನಾ ಮತ್ತು ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕನ್ನಡಪರ ಸಂಘಟನೆಗಳು ನಮ್ಮೊಂದಿಗೆ ಕೈ ಜೋಡಿಸುತ್ತಿರುವುದು ಬಹಳ ಖುಷಿ ಕೊಟ್ಟಿದೆ. ಇನ್ನು ಮುಂದೆ ಕಸಾಪ ಜನರ ಪರಿಷತ್ ಆಗಿ ಮುನ್ನಡೆಸುವ ಜವಾಬ್ದಾರಿ ನನ್ನದು. ಕಸಾಪ ರಾಜ್ಯಾಧ್ಯಕ್ಷರಾದ ಮಹೇಶ ಜೋಷಿ ರವಿವಾರ ನಗರಕ್ಕೆ ಆಗಮಿಸುವರು. ಅವರಿಗೆ ಆತ್ಮೀಯ ಅಭಿನಂದನೆ ಹಮ್ಮಿಕೊಳ್ಳಲಾಗಿದೆ ಎಂದರು.
ಒಕ್ಕೂಟದ ಮುಖಂಡ ಅಶೋಕ ಕುಮಾರ ಸಿ.ಕೆ. ಜೈನ ಮಾತನಾಡಿ, ಕನ್ನಡಪರ ಸಂಘಟನೆಗಳು ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜೊತೆ ಸಕ್ರಿಯವಾಗಿ ಕೆಲಸ ಮಾಡಲಿವೆ. ಕಸಾಪ ಆಜೀವ ಸದಸ್ಯರಾಗಿ ಎಲ್ಲ ಕನ್ನಡಪರ ಸಂಘಟನೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನೋಂದಣಿ ಮಾಡಲಾಗುವುದು. ರಾಯಚೂರು ನಗರದಲ್ಲಿಯೇ ಸದಸ್ಯತ್ವ ಸಂಖ್ಯೆ ಒಂದು ಸಾವಿರದ ಗಡಿ ದಾಟಬೇಕು ಎಂದು ಅಭಿಪ್ರಾಯಪಟ್ಟರು.
ಮುಖಂಡ ಡಾ| ಬಸವರಾಜ ಕಳಸ ಮಾತನಾಡಿ, ಕನ್ನಡಪರ ಸಂಘಟನೆಗಳು ಕಸಾಪದೊಂದಿಗೆ ಬೆರೆತು ಕನ್ನಡದ ಕೆಲಸ ಮಾಡಲು ಮುಂದಾಗಿರುವುದು ಶ್ಲಾಘನೀಯ ಎಂದರು. ರಂಗಕರ್ಮಿ ವಿ.ಎನ್.ಅಕ್ಕಿ, ಜಿ.ಸುರೇಶ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸಾಹಿತಿ ವೀರ ಹನುಮಾನ್ ಮಾತನಾಡಿದರು. ಈ ವೇಳೆ ವಿವಿಧ ಕನ್ನಡಪರ ಸಂಘಟನೆಗಳ ಮುಂಡರಾದ ಎಸ್.ಶಿವಕುಮಾರ ಯಾದವ, ಅಸ್ಕಿಹಾಳ ಶರಣಪ್ಪ, ಡಿ.ವೀರೇಶಕುಮಾರ, ವೀರೇಶ ಹಿರಾ, ವೆಂಕಟೇಶ ಆರಗೊಲ, ವೆಂಕಟಗಿರಿ ಸಾಗರ, ಸಾದಿಕ್ ಖಾನ್, ಇಮ್ರಾನ್ ಬಡೇಸಾಬ್, ಮಹ್ಮದ್ ಶೇಖ್ ಹನಿಫ್, ಮಲ್ಲೇಶ ಗಧಾರ, ಪಿ.ಪ್ರಕಾಶ ವಕೀಲ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.