ರಾಯಚೂರು: ಶಿಕ್ಷಕರ ಸಂಘದ ಚುನಾವಣೆಗೆ ಬಿರುಸಿನ ಮತದಾನ
Team Udayavani, Dec 15, 2020, 12:20 PM IST
ರಾಯಚೂರು: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ನಗರದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ನಗರದ ಸೀತಾ ಸುಬ್ಬರಾಜು ಸ್ಮಾರಕ ಕಾಲೇಜಿನಲ್ಲಿ ನಾಲ್ಕು ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಈವರೆಗೆ ಶೇ.25 ರಷ್ಟು ಮತದಾನ ನಡೆದಿದೆ.
ಬೆಳಗ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. 10 ಗಂಟೆ ಬಳಿಕ ಮತ ಚಲಾಯಿಸಲು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಆಗಮಿಸಿದ್ದು ಕಂಡು ಬಂತು. ಒಟ್ಟು 1400 ಮತದಾರರಿದ್ದಾರೆ. ತಲಾ 350 ಮತದಾರರಿಗೆ ಒಂದರಂತೆ ನಾಲ್ಕು ಮತಗಟ್ಟೆ ಸ್ಥಾಪಿಸಲಾಗಿದೆ.
28 ಸ್ಥಾನಗಳಿಗೆ ಎರಡು ಬಣದಿಂದ 51 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಾಮಾನ್ಯ ವಿಭಾಗದಲ್ಲಿ 19 ಸ್ಥಾನಗಳಿಗೆ 41 ಜನ ಸ್ಪರ್ಧಿಸಿದರೆ ಮಹಿಳಾ ವಿಭಾಗದ 9 ಸ್ಥಾನಗಳಿಗೆ15 ಜನ ಸ್ಪರ್ಧಿಸಿದ್ದಾರೆ.
ಸಂಜೆ ನಾಲ್ಕು ಗಂಟೆವರೆಗೂ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, 5 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಶುರುವಾಗಲಿದೆ ಎಂದು ಚುನಾವಣಾಧಿಕಾರಿ ಕೋರೆಕಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.