ಪರೀಕ್ಷಾ ಅಕ್ರಮ; ಕ್ರಮಕ್ಕೆ ಆಗ್ರಹ
ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಶನ್ ಪ್ರತಿಭಟನೆ
Team Udayavani, May 14, 2019, 5:27 PM IST
ರಾಯಚೂರು: ನಗರದ ಖಾಸಗಿ ಮನೆಯಲ್ಲಿ ಬಿಕಾಂ ಪರೀಕ್ಷೆಯನ್ನು ಅಕ್ರಮವಾಗಿ ನಡೆಸಿದ ಕಾಲೇಜುಗಳ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಶನ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ನಗರರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ವಿದ್ಯಾರ್ಥಿಗಳು ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಈ ಘಟನೆ ಶಿಕ್ಷಣ ವ್ಯವಸ್ಥೆಯ ಅವನತಿಯನ್ನು ತೋರಿಸುತ್ತಿದೆ. ಶಿಕ್ಷಣದ ವ್ಯಾಪಾರೀಕರಣ ಹೇಗಾಗುತ್ತಿದೆ ಎನ್ನಲಿಕ್ಕೆ ಪ್ರಮುಖ ಸಾಕ್ಷಿಯಂತಿದೆ. ಅಮಾಯಕ ವಿದ್ಯಾರ್ಥಿಗಳನ್ನು ಇಂಥ ಕೂಪಕ್ಕೆ ಸಿಲುಕಿಸಿ ಅವರ ಭವಿಷ್ಯದ ಜತೆ ಚಲ್ಲಾಟ ಆಡಲಾಗುತ್ತಿದೆ. ಇಂಥ ಘಟನೆಯನ್ನು ತೀವ್ರವಾಗಿ ಖಂಡಿಸಬೇಕಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಇಂಥ ಅಕ್ರಮಗಳನ್ನು ನಡೆಸುವ ಮೂಲಕ ಪ್ರಾಮಾಣಿಕವಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕಂಟಕವಾಗಿ ಮಾರ್ಪಟ್ಟಿದೆ. ಗುಲ್ಬರ್ಗ ವಿಶ್ವವಿದ್ಯಾಲಯ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಈ ಅಕ್ರಮದಲ್ಲಿ ಭಾಗಿಯಾದ ಸಂಸ್ಥೆಗಳ ಮಾನ್ಯತೆ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಸಂಘಟನೆ ಅಧ್ಯಕ್ಷ ಮಹೇಶ ಚೀಕಲಪರ್ವಿ, ಸಂಘಟನೆ ಸದಸ್ಯರಾದ ಪ್ರಮೋದ, ಪೀಸ್‌ಸಾಬ್, ಆಂಜನೇಯ, ಮಲ್ಲಿಕಾರ್ಜುನ, ಸಣ್ಣಬಸವ, ಹೇಮಂತ ಸೇರಿ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.