ಹೆಣ‍್ಣು ದೇಶದ ಸಂಸ್ಕೃತಿ ಜೀವಾಳ ಇದ್ದಂತೆ: ನ್ಯಾ| ಗೌಡ
Team Udayavani, Jan 25, 2022, 2:55 PM IST
ರಾಯಚೂರು: ಹೆಣ್ಣು ಮಕ್ಕಳು ಭಾರತೀಯ ಸಂಸ್ಕೃತಿಯ ಜೀವಾಳವಿದ್ದಂತೆ. ಒಬ್ಬ ತಾಯಿ ಇಡೀ ಕುಟುಂಬದ ಸದಸ್ಯರಿಗೆ ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ಕಲಿಸುವಲ್ಲಿ ಮಹತ್ವದ ಪಾತ್ರ ನಿಭಾಯಿಸಬಲ್ಲಳು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ತಿಳಿಸಿದರು.
ಸ್ವಾತಂತ್ಯೋತ್ಸವದ ಅಮೃತ ಮಹೋತ್ಸವದಡಿ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಸ್ವಾಮಿ ವಿವೇಕಾನಂದರ 159ನೇ ಜಯಂತಿ ಪ್ರಯುಕ್ತ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮದ ಸಮಾರೋಪ ಉದ್ಘಾಟಿಸಿ ಅವರು ಮಾತನಾಡಿದರು.
ಜನ್ಮವಿತ್ತ ತಂದೆ-ತಾಯಿಯೇ ದೇವರ ನಿಜ ಸ್ವರೂಪ. ಅವರನ್ನು ಗೌರವಿಸುವುದು ಹಾಗೂ ಜೀವನದುದ್ದಕ್ಕೂ ಸುಖದಿಂದ ಇರುವಂತೆ ಮಾಡುವುದೇ ನಿಜಧರ್ಮ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಬದುಕಿದಾಗಲೇ ವ್ಯಕ್ತಿಯ ಜೀವನಕ್ಕೆ ಅರ್ಥ ಮತ್ತು ಸಾರ್ಥಕತೆ ಇರುತ್ತದೆ ಎಂದರು.
ಹಿರಿಯ ಸಿವಿಲ್ ನ್ಯಾಯಾ ಧೀಶರಾದ ಮಹಾಜನ್ ಆರ್.ಎ. ಮಾತನಾಡಿ, ಕಾನೂನುಗಳು ವ್ಯಕ್ತಿಗೆ ಆಗುವ ಅನ್ಯಾಯಗಳನ್ನು ತಡೆಗಟ್ಟಲು ಅಗತ್ಯವಾಗಿವೆ. ಮಾನವನ ಅನಾಗರಿಕ ವರ್ತನೆ ಹಾಗೂ ನೈತಿಕ ಮೌಲ್ಯಗಳ ಅಧಃಪತನದಿಂದಾಗಿ ಕಾನೂನುಗಳು ಹೆಚ್ಚಿನ ಸಂಖ್ಯೆಯಲ್ಲಿ ರೂಪುಗೊಳ್ಳುತ್ತಿವೆ. ಹಾಗಾಗಿ ಎಲ್ಲರೂ ನೈತಿಕ ಹಾಗೂ ಸಾಮಾಜಿಕ ಮೌಲ್ಯಗಳನ್ನು ರೂಢಿಸಿಕೊಂಡು ಬದುಕಬೇಕು. ವ್ಯಕ್ತಿಯ ಉನ್ನತಿಯಲ್ಲಿ ಕೌಶಲ್ಯಗಳೂ ಸಹ ಮೌಲ್ಯಗಳಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದರು.
ಕಾಲೇಜಿನ ಪ್ರಾಚಾರ್ಯ ಡಾ| ಪ್ರಸನ್ನಕುಮಾರ ಮಾತನಾಡಿ, ಯುವ ಜನರು ದೇಶದ ಸಂಪನ್ಮೂಲವಾಗಿ ಪರಿವರ್ತನೆ ಆದಾಗಲೇ ಸಮಾಜ ಮತ್ತು ರಾಷ್ಟ್ರದ ಏಳ್ಗೆ ಸಾಧ್ಯ. ಸ್ವಾಮಿ ವಿವೇಕಾನಂದರ ತತ್ವಾದರ್ಶಗಳು ಯುವಶಕ್ತಿಗೆ ದಾರಿದೀಪವಾಗಿದ್ದು, ಉತ್ತಮ ಭವಿಶ್ಯಕ್ಕಾಗಿ ಅವುಗಳನ್ನು ಅನುಸರಿಸುವಂತೆ ಸಲಹೆ ನೀಡಿದರು. ಡಾ| ಸಿ.ಕೆ. ಜ್ಯೋತಿ, ಪ್ರೊ| ಉಮಾದೇವಿ, ಡಾ| ಮಲ್ಲಯ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.