ವೇತನ ಖಾತ್ರಿಗೆ ನಿಲಯ ಕಾರ್ಮಿಕರ ಆಗ್ರಹ
Team Udayavani, Jan 21, 2022, 3:39 PM IST
ರಾಯಚೂರು: ಕೋವಿಡ್ ಆರೈಕೆ ಕೇಂದ್ರಗಳಾಗಿ ಪರಿವರ್ತಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳ ಕಾರ್ಮಿಕರಿಗೆ ವೇತನ ಖಾತ್ರಿ ಪಡಿಸಬೇಕು ಎಂದು ರಾಜ್ಯ ವಸತಿ ನಿಲಯ ಹಾಗೂ ವಸತಿ ಶಾಲೆಗಳ ಕಾರ್ಮಿಕರ ಸಂಘದ ಸದಸ್ಯರು ಒತ್ತಾಯಿಸಿದರು.
ಈ ಕುರಿತು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಗುರುವಾರ ಮನವಿ ಸಲ್ಲಿಸಿದ ಸಂಘಟನೆ ಸದಸ್ಯರು, ಮಸ್ಕಿಯ ಎರಡು ಹಾಗೂ ಅಮರೇಶ್ವರ, ದೇವದುರ್ಗ, ಸಿರವಾರ ಹಾಗೂ ಮಾನ್ವಿಯ ವಸತಿ ನಿಲಯ ಹಾಗೂ ಶಾಲೆಗಳನ್ನು ಕೋವಿಡ್ ಆಸ್ಪತ್ರೆಗಳನ್ನಾಗಿ ಮಾಡಲಾಗಿದೆ. ಅಲ್ಲದೇ ಅಲ್ಲಿನ ಸುಮಾರು 500 ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ. 66ಕ್ಕೂ ಹೆಚ್ಚು ಅಡುಗೆ ಹಾಗೂ ಕಾವಲು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಕಳೆದ ಮೊದಲ ಮತ್ತು ಎರಡನೇ ಅಲೆಯ ವೇಳೆ ಈ ಸಿಬ್ಬಂದಿಗೆ ವೇತನ ನೀಡಿಲ್ಲ ಎಂದು ದೂರಿದರು.
ಪ್ರತಿ ವರ್ಷವೂ ಕಾರ್ಮಿಕ ಇಲಾಖೆ ಹೆಚ್ಚಿಸಿದ ತುಟ್ಟಿ ಭತ್ಯೆಯನ್ನು ವಸತಿ ಶಾಲೆಗಳ ಸಿಬ್ಬಂದಿ ವೇತನಕ್ಕೆ ಸೇರಿಸಿ ಪಾವತಿಸುತ್ತಿಲ್ಲ. 2017ರಿಂದ 2021ರ ಡಿಸೆಂಬರ್ ವರೆಗೂ ಕಾರ್ಮಿಕ ಇಲಾಖೆಯ ಅಸೂಚಿತ ದರದಲ್ಲಿ ವೇತನ ಪಾವತಿಸಿಲ್ಲ. ಕೂಡಲೇ ಆ ಅವಧಿಯ ವೇತನದ ವ್ಯತ್ಯಾಸ ಸಂಬಂಧಪಟ್ಟ ಎಲ್ಲ ಕಾರ್ಮಿಕರಿಗೆ ಪಾವತಿಸಬೇಕು, ಅಡುಗೆ ಹಾಗೂ ಕಾವಲು ಸಿಬ್ಬಂದಿಗೆ ಉದ್ಯೋಗ ಹಾಗೂ ವೇತನ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾಧ್ಯಕ್ಷ ಜಿ.ಅಮರೇಶ, ಉಪಾಧ್ಯಕ್ಷ ರಂಗನಾಥ ಮಸ್ಕಿ, ಪ್ರಧಾನ ಕಾರ್ಯದರ್ಶಿ ಕೈಸರ್ ಅಹಮ್ಮದ್ ಸೇರಿ ಅನೇಕ ಕಾರ್ಮಿಕರು ಪ್ರತಿಭಟನೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.