ವೈಟಿಪಿಎಸ್ ಮೊದಲ ಘಟಕ ಉತ್ಪಾದನೆಗೆ ಸಿದ್ಧ
Team Udayavani, Mar 9, 2017, 3:45 AM IST
ರಾಯಚೂರು: ಇಲ್ಲಿನ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ ವಾಣಿಜ್ಯ ವಿದ್ಯುತ್ ಉತ್ಪಾದನೆಗೆ ಸಮರ್ಥವಾಗಿದೆ ಎಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಜಿ.ಕುಮಾರ ನಾಯಕ ತಿಳಿಸಿದ್ದಾರೆ.
ಕೇಂದ್ರದ ಮೊದಲ ಘಟಕಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು. ಕೇಂದ್ರವು 1,600 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಹೊಂದಿದೆ.ಈಗ 800 ಮೆ.ವ್ಯಾ. ಉತ್ಪಾದಿಸಬಲ್ಲದು. ಇನ್ನಾರು ತಿಂಗಳೊಳಗೆ ಎರಡನೇ ಘಟಕವೂ ಸಿದ್ಧವಾಗಲಿದೆ. ಆಗ ಆರ್‌ಟಿಪಿಎಸ್ ಮತ್ತು ವೈಟಿಪಿಎಸ್‌ನಿಂದ ಜಿಲ್ಲೆಯಲ್ಲಿ ಒಟ್ಟು 3,320 ಮೆ. ವ್ಯಾ.ವಿದ್ಯುತ್ ಉತ್ಪಾದನೆ ಮಾಡಿದಂತಾಗುತ್ತದೆ
ಸತತ 72 ಗಂಟೆಗಳ ಕಾಲ ನಡೆಸಿದ ಪರೀಕ್ಷೆಯಲ್ಲಿ ಸಮಸ್ಯೆಯಿಲ್ಲದೆ ಘಟಕ ಕಾರ್ಯನಿರ್ವಹಿಸಿದ್ದು, 800 ಮೆ.ವ್ಯಾ. ವಿದ್ಯುತ್ ಉತ್ಪಾದಿಸಿ ಮೈಲುಗಲ್ಲು
ನಿರ್ಮಿಸಿದೆ ಎಂದರು.ವೈಟಿಪಿಎಸ್‌ಗೆ ಭೂಮಿ ನೀಡಿದ 259 ಕುಟುಂಬಗಳನ್ನು ಗುರುತಿಸಲಾಗಿದೆ. ಮೊದಲ ಹಂತದಲ್ಲಿ 142 ಅರ್ಜಿಗಳು ಬಂದಿದ್ದು, 78 ಜನರಿಗೆ ಉದ್ಯೋಗ ನೀಡಲಾಗಿದೆ. ಎರಡನೇ ಹಂತದಲ್ಲಿ 117 ಅರ್ಜಿಗಳನ್ನು ಆಹ್ವಾನಿಸಿದ್ದು, ಶೀಘ್ರ ನೇಮಕಾತಿ ಪ್ರಕ್ರಿಯೆ ಮುಗಿಸಲಾಗುವುದು ಎಂದರು.
ಸಂತ್ರಸ್ತರ ಪ್ರತಿಭಟನೆ
ಕೇಂದ್ರಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಭೂ ಸಂತ್ರಸ್ತ ರೈತರು ವಿದ್ಯುತ್ ಟವರ್ ಏರಿ ಪ್ರತಿಭಟಿಸಿದರು. ಸೆಕ್ಯೂರಿಟಿ ತಂಡ ಅವರ ಮನವೊಲಿಸಿ ಎಂಡಿ ಬಳಿ ಕರೆ ತಂದಿತು. ನಮಗೆ ಅನ್ಯಾಯ ಮಾಡಲಾಗುತ್ತಿದೆ. ಭೂಮಿ ಪಡೆಯುವಾಗ ಇಲ್ಲದ ನಿಯಮಗಳನ್ನು ಈಗ ಹೇಳಲಾಗುತ್ತಿದೆ ಎಂದು ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದರು.
ಕಡಿಮೆ ಉಷ್ಣದಲ್ಲಿ ಹೆಚ್ಚು ವಿದ್ಯುತ್ ಉತ್ಪಾದಿಸಬಹುದು. ಹಳೇ ತಂತ್ರಜ್ಞಾನಕ್ಕೆ ಹೋಲಿಸಿದರೆ ಶೇ.8 ರಿಂದ 10 ಕಲ್ಲಿದ್ದಲು ಉಳಿತಾಯವಾಗಲಿದೆ.500 ಮೆ.ವ್ಯಾ. ಘಟಕದ ಸ್ಥಳದಲ್ಲಿ 800 ಮೆ.ವ್ಯಾ. ಉತ್ಪಾದಿಸಬಹುದು. ಸಂಪೂರ್ಣ ಲೋಕಾರ್ಪಣೆಗೊಂಡ ನಂತರ ಪ್ರತಿ ವರ್ಷ 60 ಕೋಟಿ ಯೂನಿಟ್ ವಿದ್ಯುತ್ ಉತ್ಪಾದಿಸಬಹುದು.
– ಜಿ.ಕುಮಾರ ನಾಯಕ ಕೆಪಿಸಿ ಎಂಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.