ರಾಜ್ಯಪಾಲರ ನಿರ್ಧಾರ ಖಂಡಿಸಿ ಪ್ರತಿಭಟನೆ


Team Udayavani, May 19, 2018, 12:56 PM IST

vij-3.jpg

ರಾಯಚೂರು: ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಕರ್ನಾಟಕ ರಾಜ್ಯಪಾಲರು ಕೈಗೊಂಡ ಅಸಂವಿಧಾನಿಕ ನಿರ್ಧಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ಸಿಪಿಐ(ಎಂ) ಹಾಗೂ ಎಸ್‌ಯುಸಿಐ(ಸಿ) ಕಾರ್ಯಕರ್ತರು ಶುಕ್ರವಾರ ಜಿಲ್ಲಾ ಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಕುರಿತು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿ, ಬಹುಮತ ಪಡೆದ ಪಕ್ಷಗಳಿಗೆ ಸರ್ಕಾರ ರಚಿಸಲು ಅವಕಾಶ ನೀಡದಿರುವ ರಾಜ್ಯಪಾಲರ ನಡೆ ಬಗ್ಗೆ ಖಂಡಿಸಿದರು. ರಾಜ್ಯ ವಿಧಾನಸಭೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಇಂಥ ವೇಳೆ ರಾಜ್ಯಪಾಲರು ತುಂಬಾ ಜವಾಬ್ದಾರಿಯಿಂದ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. 

ಒಂದು ವೇಳೆ ಯಾವುದೇ ಪಕ್ಷಕ್ಕೆ ಬಹುಮತ ಸಿಗದಿದ್ದಾಗ ಸಂಖ್ಯಾಬಲದೊಂದಿಗೆ ಸರ್ಕಾರ ರಚಿಸಲು ಸಂವಿಧಾನ ಅವಕಾಶ ಕಲ್ಪಿಸಿದೆ. ಈಗಾಗಲೇ ಮಣಿಪುರ, ಗೋವಾ, ಮೇಘಾಲಯ ರಾಜ್ಯಗಳಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಸಿಗದಿದ್ದಾಗ ಸಮ್ಮಿಶ್ರ ಸರ್ಕಾರ ರಚಿಸಲು ಹಲವು ಪಕ್ಷಗಳು ಒಗ್ಗೂಡಿ ಹಕ್ಕು ಮಂಡಿಸಿದ್ದು, ಅವುಗಳೇ ಸರ್ಕಾರ ರಚಿಸಿವೆ ಎಂದರು. 

ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಜಂಟಿಯಾಗಿ ಸರ್ಕಾರ ರಚಿಸಲು ಮನವಿ ಮಾಡಿದ್ದಾಗ್ಯೂ ರಾಜ್ಯಪಾಲರು ಬಹುಮತವಿಲ್ಲದ ಬಿಜೆಪಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದಾರೆ. ಬಹುಮತ ಇಲ್ಲದ ಬಿಜೆಪಿ ಜನಪ್ರತಿನಿಧಿ ಗಳ ಖರೀದಿಗೆ ಮುಂದಾಗಿದ್ದಾರೆ. 

ಸಿಎಂ ಸ್ಥಾನಕ್ಕೆ ಗೌರವ ಇಲ್ಲದಂತೆ ಮಾಡಿದ್ದಾರೆ ಎಂದು ದೂರಿದರು. ಕರ್ನಾಟದಲ್ಲಿ ಇನ್ನೂ 2 ಕ್ಷೇತ್ರದಲ್ಲಿ ಚುನಾವಣೆ ನಡೆಯಬೇಕಿದೆ. ಆದರೆ, ಈಗಾಗಲೇ ರೆಸಾರ್ಟ್‌ ರಾಜಕಾರಣ ಆರಂಭಗೊಂಡಿದೆ. ಮುಂದೆ ಹಲವು ಕ್ಷೇತ್ರಗಳಲ್ಲಿ ಚುನಾವಣೆ ನಡೆಯವಂತೆ ಮಾಡುವ ಹುನ್ನಾರ ನಡೆದಿದೆ. ಇಂಥ ಕ್ರಮದಿಂದ ಸಾರ್ವಜನಿಕರ ಹಣವು ಅನಾವಶ್ಯಕವಾಗಿ ಪೋಲಾಗುವ ಹಾಗೂ ಕಲುಷಿತ ರಾಜಕೀಯ ನಡೆಯಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶ ಮಾಡಿ ಕಾಂಗ್ರೆಸ್‌, ಜೆಡಿಎಸ್‌ಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ.ಜಿ. ವೀರೇಶ, ಜಿಲ್ಲಾ ಸಮಿತಿ ಸದಸ್ಯರಾದ ಡಿ.ಎಸ್‌. ಶರಣಬಸವ, ಕರಿಯಪ್ಪ ಅಚ್ಚೊಳ್ಳಿ, ಎಚ್‌. ಪದ್ಮಾ, ವರಲಕ್ಷ್ಮೀ, ಯಂಕಪ್ಪ, ಸುಲೋಚನಾ, ಪಾರ್ವತಿ, ಶರಣಗೌಡ, ಶ್ರೀಧರ, ಕುಮಾರ, ಎಸ್‌ಯುಸಿಐ(ಸಿ) ಸಂಘಟನೆ ಜಿಲ್ಲಾ ಸಮಿತಿ ಸದಸ್ಯರಾದ ಅಪರ್ಣಾ ಬಿ.ಆರ್‌., ವೀರೇಶ, ಎನ್‌.ಎಸ್‌. ಚನ್ನಬಸವ ಜಾನೇಕಲ್‌, ಶ್ಯಾಮಸುಂದರ, ಚೇತನಾ ಬನಾರೆ, ಪ್ರಮೋದ ಕುಮಾರ, ಸರೋಜಾ, ಅಪೂರ್ವ, ಈರಮ್ಮ, ಉದಯ, ಅಜಯಕುಮಾರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.