ನವಲಕಲ್ಲು ಗ್ರಾಮದಲ್ಲಿ ಸೌಕರ್ಯ ಕೊರತೆ
Team Udayavani, Jan 17, 2019, 9:34 AM IST
ಸಿರವಾರ: ಸಮೀಪದ ನವಲಕಲ್ಲು ಗ್ರಾಮದಲ್ಲಿ ಚರಂಡಿ, ಸಿಸಿ ರಸ್ತೆ ಸೇರಿದಂತೆ ಅನೇಕ ಮೂಲ ಸೌಕರ್ಯಗಳ ಕೊರತೆಯಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ.
ರಾಜ್ಯ, ಕೇಂದ್ರ ಸರ್ಕಾರಗಳು ಸ್ವಚ್ಛ ಭಾರತ, ರಸ್ತೆ ಅಭಿವೃದ್ಧಿ, ಶೌಚಾಲಯ ನಿರ್ಮಾಣ, ಚರಂಡಿ ನಿರ್ಮಾಣ ಸೇರಿದಂತೆ ಅನೇಕ ಯೋಜನೆಗಳಿಗೆ ಕೋಟ್ಯಂತರ ರೂ. ಅನುದಾನ ಬಿಡುಗಡೆ ಮಾಡುತ್ತಿದ್ದರೆ ನವಲಕಲ್ಲು ಗ್ರಾಮದಲ್ಲಿ ಈ ಯಾವುದೇ ಯೋಜನೆಗಳು ಸದ್ಭಳಕೆಯಾಗದ್ದರಿಂದ ಗ್ರಾಮಗಳು ಸಮಸ್ಯೆಗಳ ಆಗರವಾಗಿವೆ.
ಚರಂಡಿ ನೀರು ರಸ್ತೆಗೆ: ಈ ಗ್ರಾಮದ ಪ್ರಮುಖ ಸಮಸ್ಯೆ ಚರಂಡಿ ಇಲ್ಲದಿರುವುದು. ಗ್ರಾಮದ ಅನೇಕ ಕಡೆ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ್ದರಿಂದ ಚರಂಡಿ ನೀರು ರಸ್ತೆ ಮೇಲೆ ಹರಿದು ಸಾರ್ವಜನಿಕರು ಓಡಾಡಲು ಕಷ್ಟಪಡುವಂತಾಗಿದೆ
ವ್ಯರ್ಥ ಹರಿಯುವ ನೀರು: ಗ್ರಾಮಕ್ಕೆ ನೀರಿನ ಸೌಲಭ್ಯ ಸಮರ್ಪಕವಾಗಿದ್ದರೂ ಅದನ್ನು ನಿರ್ವಹಣೆ ಮಾಡದಿರುವುದರಿಂದ ಪೈಪ್‌ಗ್ಳು ಎಲ್ಲೆಂದರಲ್ಲಿ ತೂತು ಬಿದ್ದು ಗಲೀಜು ನೀರು ಪೈಪ್ ಸೇರುತ್ತಿವೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭಯದಲ್ಲಿ ನೀರು ಕುಡಿಯಲು ಗ್ರಾಮಸ್ಥರು ಹಿಂದೇಟು ಹಾಕುವಂತಾಗಿದೆ.
ಸಮಯಕ್ಕೆ ಬಾರದ ಪಂಚಾಯತಿ ಸಿಬ್ಬಂದಿ: ನವಲಕಲ್ಲು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಟ್ಟು 4 ಹಳ್ಳಿಗಳು ಬರುತ್ತವೆ. ಆದರೆ ಕೇಂದ್ರ ಸ್ಥಾನವಾಗಿರುವ ಪಂಚಾಯತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಿಲ್ಲದ ಕಾರಣ ಪಿಡಿಒ, ಗಣಕಯಂತ್ರ ನಿರ್ವಾಹಕಿಯಿಂದ ಹಿಡಿದು ಯಾವೊಬ್ಬ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.
ಶೌಚಾಲಯ ಬಿಲ್ ಬಾಕಿ: ಗ್ರಾಮದಲ್ಲಿ ಕೆಲವರು ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿಕೊಂಡಿದ್ದಾರೆ. ಇವರಿಗೆ ಸರ್ಕಾರದ ಸಹಾಯಧನ ನೀಡದ್ದರಿಂದ ಪ್ರತಿದಿನ ಪಂಚಾಯತಿಗೆ ಅಲೆಯುವಂತಾಗಿದೆ. ಹೀಗಾಗಿ ಕೆಲವರು ಶೌಚಾಲಯಗಳನ್ನು ನಿರ್ಮಿಸಿಕೊಳ್ಳಲು ಹಿಂದೇಟು ಹಾಕುವಂತಾಗಿದೆ.
ಇನ್ನು ಅಭಿವೃದ್ಧಿ ಮಾಡಬೇಕಾದ ಪಂಚಾಯತಿ ಸದಸ್ಯರೇ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ ಎಂಬ ಹೇಳಿಕೆ ನೀಡುತ್ತಿರುವುದು ವಿಪರ್ಯಾಸವೇ ಸರಿ. ಕಣ್ಣು ಮುಂದೆಯೇ ಸಮಸ್ಯೆ ಕಂಡರೂ ಜನಪ್ರತಿನಿಧಿಗಳು ಸುಮ್ಮನಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಗ್ರಾಮದಲ್ಲಿನ ಸಮಸ್ಯೆಗಳ ಕುರಿತು ಅನೇಕ ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಅಧಿಕಾರಿಗಳು ಬೇಕಾಬಿಟ್ಟಿ ಕೆಲಸ ಮಾಡುತ್ತಿದ್ದು ಇದರಿಂದ ಸಾರ್ವಜನಿಕರು ಕಷ್ಟ ಅನುಭವಿಸುವಂತಾಗಿದೆ.
ಜಾಕೀರ್, ಗ್ರಾಮಸ್ಥ
ನವಲಕಲ್ಲು ಗ್ರಾಮದಲ್ಲಿ ಒಟ್ಟು 2000ಕ್ಕೂ ಹೆಚ್ಚು ಗ್ರಾಮಸ್ಥರಿದ್ದು, 6 ಜನ ಪಂಚಾಯತಿ ಸದಸ್ಯರನ್ನು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.