ಕಾನೂನು ಅನ್ಯಾಯಕ್ಕೊಳಗಾದವರ ಅಸ್ತ್ರ


Team Udayavani, Sep 18, 2021, 3:51 PM IST

Udayavani Kannada Newspaper

ವಾಡಿ: ಕಾನೂನಿನ ಅರಿವಿನ ಕೊರತೆಯಿಂದಾಗಿ ಸಮಾಜದಲ್ಲಿ ಅನೇಕರು ವಿವಿಧ ರೀತಿಯ ದೌರ್ಜನ್ಯಗಳಿಗೆ ಬಲಿಯಾಗಿ ಶೋಷಣೆಗೆ ಒಳಗಾಗುತ್ತಿದ್ದಾರೆ. ಕಾನೂನು ಅರಿವು ಎನ್ನುವುದು ಅನ್ಯಾಯಕ್ಕೊಳಗಾದ ಸಂತ್ರಸ್ತರ ಕೈಗಳಿಗೆ ಅಸ್ತ್ರವಿದ್ದಂತೆ. ಬದುಕಿನಲ್ಲಿ ನ್ಯಾಯ ಸ್ಥಾಪಿಸಲು ಪ್ರತಿಯೊಬ್ಬರೂ ಕಾನೂನು ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ಚಿತ್ತಾಪುರ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ಸುಭಾಶ್ಚಂದ್ರ
ರಾಠೊಡ ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವದ 75ನೇ ಅಮೃತ ಮಹೋತ್ಸವ ನಿಮಿತ್ತ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ, ಪೊಲೀಸ್‌ ಇಲಾಖೆ ಹಾಗೂ ಪುರಸಭೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಪಟ್ಟಣದ ಡಾ| ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಏರ್ಪಡಿಸಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಕಾನೂನಿನ ತಿಳಿವಳಿಕೆ ಇದ್ದರೆ ಲಂಚ ಮತ್ತು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಲು ಧೈರ್ಯ ಬರುತ್ತದೆ. ಅನಗತ್ಯವಾಗಿ ದಾಖಲಾಗುವ ಎಫ್‌ಐಆರ್‌ ಪ್ರಶ್ನಿಸಲು ಶಕ್ತಿ ನೀಡುತ್ತದೆ. ಪೊಲೀಸರು ನಮ್ಮ ವೈರಿಗಳಲ್ಲ. ಅವರಿಗೆ ಹೆದರಬೇಕಾದ ಅವಶ್ಯಕತೆಯೂ ಇಲ್ಲ. ಏಕಾಏಕಿ ಯಾರನ್ನೂ ಅವರು ಬಂ ಧಿಸುವಂತಿಲ್ಲ. ಕಾನೂನಿಗೂ ನಮಗೂ ಸಂಬಂಧವೇ ಇಲ್ಲದಂತೆ ಇರುವುದರಿಂದ ಸಮಾಜದಲ್ಲಿ ಅಪರಾಧಗಳು ಹೆಚ್ಚಾಗುತ್ತಿವೆ ಎಂದರು.

ಗಂಡು, ಹೆಣ್ಣು ಮಗು ಎನ್ನುವ ತಾರತಮ್ಯದ ಮನಸ್ಥಿತಿಯಿಂದ ಹೊರಬರಬೇಕು ಎನ್ನುವ ಕಾರಣಕ್ಕೆ ಕಾನೂನಿನಲ್ಲಿ ಸಮಾನತೆ ಬೋಧಿ ಸಲಾಗಿದೆ. 6ರಿಂದ 14 ವರ್ಷ ವಯಸ್ಸಿನೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡುವ ಹಕ್ಕು ನೀಡಲಾಗಿದೆ. ಅಪ್ರಾಪ್ತರನ್ನು ದುಡಿಸಿಕೊಳ್ಳುವುದಾಗಲಿ ಅಥವಾ ಮದುವೆ ಮಾಡುವುದಾಗಲಿ ಮಾಡಿದರೆ ಅದು ಶಿಕ್ಷಾರ್ಹ ಅಪರಾಧವಾಗುತ್ತದೆ. ಶಿಕ್ಷಣದಿಂದ ವಂಚಿತವಾಗುವ ಮಗು ಸಮಾಜವನ್ನು ಅರ್ಥ ಮಾಡಿಕೊಳ್ಳುವಲ್ಲಿ
ವಿಫಲವಾಗುತ್ತದೆ. ಅಂಥಹ ಮಕ್ಕಳು ದೌರ್ಜನ್ಯ, ದಬ್ಟಾಳಿಕೆ, ಶೋಷಣೆ ಹಾಗೂ ಅಸಮಾನತೆಗೆ ತುತ್ತಾಗುತ್ತಾರೆ ಎಂದರು.

ಆಸ್ತಿಗಾಗಿ ಕುಟುಂಬ ಕಲಹ ಹೆಚ್ಚಾಗುತ್ತಿರುವುದನ್ನು ಕಾಣುತ್ತಿದ್ದೇವೆ. ವಿಶೇಷವಾಗಿ ಮಹಿಳೆಯರು ಪೋಷಕರ ಆಸ್ತಿ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ. ಪುರುಷರು ನಮಗೆ ಅಕ್ಕ ತಂಗಿಯರಿಲ್ಲ ಎಂದು ಸುಳ್ಳು ಮಾಹಿತಿ ನೀಡಿ ಸಂಪೂರ್ಣ ಆಸ್ತಿ ಕಬಳಿಸುತ್ತಿದ್ದಾರೆ. ಆದ್ದರಿಂದ ನೀವು ಸತ್ತನಂತರವೂ ಮಕ್ಕಳು ಖುಷಿಯಾಗಿರಬೇಕು ಎಂದಾದರೆ ಬದುಕಿರುವಾಗಲೇ ವ್ಹಿಲ್‌ ಬರೆದಿಡಿ ಎಂದು ಹೇಳಿದರು.

ವಕೀಲರಾದ ಸುಜಾತಾ ಎಸ್‌.ಮೊಸಲಗಿ ಮಾತನಾಡಿ,ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನು ಹಕ್ಕುಗಳ ಅರಿವು ಮೂಡುವಂತಾಗಬೇಕು ಎಂಬುದು ಡಾ|ಬಾಬಾಸಾಹೇಬ ಅಂಬೇಡ್ಕರ್‌ ಅವರ ಕನಸಾಗಿತ್ತು ಎಂದರು. ನ್ಯಾಯವಾದಿ ಪಿ.ಎಂ.ಗಾಯಕವಾಡ ನೋಟರಿ ಕಾಯ್ದೆ ಕುರಿತು ಮಾಹಿತಿ ನೀಡಿದರು. ಸಿಪಿಐ ಕೃಷ್ಣಪ್ಪ ಕಲ್ಲೆದೇವರು ಹಾಗೂ ಪುರಸಭೆ ಗ್ರೇಡ್‌-1 ಮುಖ್ಯಾಧಿಕಾರಿ ಡಾ| ಚಿದಾನಂದಸ್ವಾಮಿ ಸಾಮಾಜಿಕ ಅಪರಾಧ ಮತ್ತು ಮೋಟಾರು ವಾಹನ ಕಾಯ್ದೆಗಳ ಮೇಲೆ ಬೆಳಕು ಚೆಲ್ಲಿದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯ್ಯದ್‌ ಮಹೆಮೂದ್‌ ಸಾಹೇಬ, ಬಿಜೆಪಿ ಎಸ್‌ಸಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮುಕ್ಕಣ್ಣ, ಪುರಸಭೆ ವಿರೋಧ ಪಕ್ಷದ ನಾಯಕ ಭೀಮಶಾ ಜಿರೊಳ್ಳಿ, ಮುಖಂಡರಾದ ಬಸವರಾಜ ಪಂಚಾಳ, ಫಿರೋಜ್‌ ಖಾನ್‌, ಬಾಬುಮಿಯ್ನಾ, ಗಿರಿಮಲ್ಲಪ್ಪ ಕಟ್ಟಿಮನಿ, ಶರಣಬಸು ಸಿರೂರಕರ, ಅಂಬಾದಾಸ ಜಾಧವ ಮತ್ತಿತರರು ಇದ್ದರು. ನ್ಯಾಯವಾದಿ ಶ್ರವಣಕುಮಾರ ಮೊಸಲಗಿ ಸ್ವಾಗತಿಸಿದರು. ಕಾನೂನು ಸಲಹಾ ಸಮಿತಿ ಸದಸ್ಯ ಗಂಗಣ್ಣ ನಿರೂಪಿಸಿದರು. ಪಿಎಸ್‌ಐ ವಿಜಯಕುಮಾರ ಭಾವಗಿ ವಂದಿಸಿದರು.

ಟಾಪ್ ನ್ಯೂಸ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.