ಮಸಿ ಬಳಿದ ದುಷ್ಕರ್ಮಿಗಳ ವಿರುದ್ದ ಕ್ರಮಕ್ಕೆ ಆಗ್ರಹ
Team Udayavani, Jun 1, 2022, 5:35 PM IST
ರಾಯಚೂರು: ರೈತ ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ವ್ಯವಸ್ಥಿತ ದಾಳಿಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದವು.
ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನ ಗಾಂಧಿ ಭವನದಲ್ಲಿ ರೈತ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ಆತ್ಮಾವಲೋಕನ ಸಭೆ ಹಮ್ಮಿಕೊಂಡಿದ್ದ ವೇಳೆ ರೈತ ನಾಯಕ ರಾಕೇಶ್ ಟಿಕಾಯತ್, ಯುದ್ದವೀರ್ ಸಿಂಗ್, ಚುಕ್ಕಿ ನಂಜುಂಡಸ್ವಾಮಿ ಸೇರಿದಂತೆ ಮಹಿಳಾ ರೈತ ಮುಖಂಡರ ಮೇಲೆ ಬಿಜೆಪಿ ಹಾಗೂ ಸಂಘ ಪರಿವಾರದ ಗೂಂಡಾಪಡೆಗಳು ಮುಖಕ್ಕೆ ಮಸಿ ಎರಚಿರುವುದು ಖಂಡನೀಯ. ಇದು ರೈತರಿಗೆ ಮಾಡಿದ ಅವಮಾನವಾಗಿದೆ. ತಕ್ಷಣವೇ ಈ ಗೂಂಡಾಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾದ ಗೃಹ ಸಚಿವ ಆರಗ ಜ್ಞಾನೇಂದ್ರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಹೋರಾಟಗಾರರು, ಬುದ್ಧಿಜೀವಿಗಳು, ಬರಹಗಾರರು, ಸಾಹಿತಿಗಳು ಹಾಗೂ ಜನಪರ ಪತ್ರಕರ್ತರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು. ಉಭಯ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.