ಕಳಪೆ ಕಾಮಗಾರಿ ತನಿಖೆಗೆ ಆಗ್ರಹ


Team Udayavani, Jul 19, 2017, 3:04 PM IST

19-RAI-1.gif

ಸಿಂಧನೂರು: ನಗರದಲ್ಲಿ ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ಒಳಚರಂಡಿ, ಕುಡಿಯುವ ನೀರು ಮತ್ತು ನಗರೋತ್ಥಾನ ಯೋಜನೆಯಡಿ ರಸ್ತೆಗಳು ಕಳಪೆ ಆಗಿದ್ದು,  ಈ ಎಲ್ಲ ಕಾಮಗಾರಿಗಳ ತನಿಖೆಗೆ ಆಗ್ರಹಿಸಿ ನಗರಾಭಿವೃದ್ಧಿ ಹೋರಾಟ ಸಮಿತಿ ಕಾರ್ಯಕರ್ತರು ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಬೃಹತ್‌ ಪ್ರತಿಭಟನಾ ಮೆರವಣಿಗೆ ಹಳೆ ಬಜಾರ್‌ ಮುಖಾಂತರ ನಗರಸಭೆ ತಲುಪಿತು. ಇದಕ್ಕೂ ಮುನ್ನ ಮಹಾತ್ಮಗಾಂಧಿ  ವೃತ್ತದಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಪ್ರತಿಭಟನಾಕಾರರು ನಗರಸಭೆ ಮುತ್ತಿಗೆ ಹಾಕಲು ಯತ್ನಿಸಿದರು, ಆದರೆ ಪೊಲೀಸರು ಇವರನ್ನು ತಡೆದರು. ನಗರಾಭಿವೃದ್ಧಿ ಹೋರಾಟ ಸಮಿತಿ ಸಮಿತಿ ಸಂಚಾಲಕ ಎಸ್‌.ದೇವೇಂದ್ರಗೌಡ ಮಾತನಾಡಿ, ಕಾಮಗಾರಿಗಳು ಪ್ರಾರಂಭವಾದಾಗಿನಿಂದ ಗುಣಮಟ್ಟದ ಕೆಲಸ ಮಾಡುವಂತೆ ನಗರಾಭಿವೃದ್ಧಿ ಹೋರಾಟ ಸಮಿತಿಯಿಂದ ಒತ್ತಾಯಿಸುತ್ತಾ ಬಂದಿದ್ದರೂ ಇಲಾಖೆಗಳು ಮತ್ತು ಗುತ್ತಿಗೆದಾರರು ಗಮನಕ್ಕೆ ತೆಗೆದುಕೊಳ್ಳದೆ ಯಥಾಸ್ಥಿತಿ ತಮ್ಮ ಅವ್ಯವಹಾರ ಮುಂದುವರೆಸಿದ್ದಾರೆ. ಕಾಮಗಾರಿಗಳ ಮೇಲ್ವಿಚಾರಣೆ
ಮಾಡುವ ನಗರಸಭೆ ಆಡಳಿತ ಮಂಡಳಿ ಸಹ ನಿರ್ಲಕ್ಷ ತಾಳಿದೆ. ಕಳೆದ ಎರಡು ದಿನದ ಹಿಂದೆ ಒಳಚರಂಡಿ, ಕುಡಿಯುವ ನೀರು ಮತ್ತು ನಗರೋತ್ಥಾನ ಯೋಜನೆಯ ಅಧಿಕಾರಿಗಳು ನಗರಾಭಿವೃದ್ಧಿ ಹೋರಾಟ ಸಮಿತಿಯೊಂದಿಗೆ ನಡೆಸಿದ ಚರ್ಚೆಯಲ್ಲಿ ಸಮರ್ಪಕ ಉತ್ತರ ನೀಡದೆ ನುಸುಳಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮಿತಿ ಸಂಚಾಲಕ ಡಿ.ಎಚ್‌.ಕಂಬಳಿ ಮಾತನಾಡಿ, ಸಿಂಧನೂರಿನ ಮಹತ್ವಾಕಾಂಕ್ಷೆಯ ಈ ಯೋಜನೆಗಳ ಕಳಪೆ ಕಾಮಗಾರಿ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಇಲಾಖೆಗೆ ಸಂಬಂಧವಿರದ ತಂತ್ರಜ್ಞರನ್ನು ತನಿಖಾ ಸಮಿತಿಗೆ ನೇಮಿಸಬೇಕು. ಪ್ರತಿ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಯೋಜನೆ ಕುರಿತಾದ ಮಾಹಿತಿ ಫಲಕ ಅಳವಡಿಸಬೇಕು. ನಗರದ ಜನರಿಗೆ ಸಮರ್ಪಕ ಶುದ್ಧ ಕುಡಿಯುವ ನೀರು ಪೂರೈಸಬೇಕು. ಇಲ್ಲದಿದ್ದರೆ ಮುತ್ತಿಗೆ ಚಳವಳಿಯನ್ನು ಮುಂದುವರಿಸುವುದಾಗಿ ಎಚ್ಚರಿಸಿದರು. ಪ್ರತಿಭಟನಾ ನಿರತರು ಪೌರಾಯುಕ್ತರ ಹಾಗೂ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲಾಧಿ ಕಾರಿಗಳು ಸ್ಥಳಕ್ಕೆ ಬರುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದರು. ನಂತರ ತಹಶೀಲ್ದಾರ ಶಂಶಾಲಂ, ಸಿಪಿಐ ನಾಗರಾಜ ನೇತೃತ್ವದಲ್ಲಿ ಸಹಾಯಕ ಆಯುಕ್ತರಿಗೆ ದೂರವಾಣಿಯಲ್ಲಿ ಕರೆ ಮಾಡಿಸಿ ಜು.19ರಂದು ಸಭೆ ನಡೆಸಿ, ತನಿಖಾ ಸಮಿತಿ ರಚನೆ ಮಾಡುವುದಾಗಿ ಹೇಳಿಕೆ ನೀಡಲಾಯಿತು. ಸಮಿತಿಯ ಸಂಚಾಲಕ ಚಂದ್ರಶೇಖರ ಗೊರೇಬಾಳ, ಮುಖಂಡರಾದ ಖಾನ್‌ಸಾಬ, ವೆಂಕನಗೌಡ ಗದ್ರಟಗಿ, ನಾರಾಯಣ ಬೆಳಗುರ್ಕಿ, ಡಾ| ತಾಹೇರ್‌ಅಲಿ, ಬಸವರಾಜ ಬಾದರ್ಲಿ, ಗುಂಡಪ್ಪ ಬಳಿಗಾರ, ಯಾಕೂಬ್‌ಅಲಿ, ಗಂಗಣ್ಣ ಡಿಶ್‌, ದಾವಲಸಾಬ ದೊಡ್ಮನಿ, ಕರೇಗೌಡ ಕುರಕುಂದಿ, ಶಂಕರ ಗುರಿಕಾರ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ
ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.