ಬೆನ್ನ ಮೇಲೆ ಪ್ರಧಾನಿ ಮೋದಿ ಟ್ಯಾಟೂ
Team Udayavani, Apr 30, 2018, 7:00 AM IST
ರಾಯಚೂರು: ರಾಜ್ಯದಲ್ಲಿ ಚುನಾವಣೆಯ ಕಾವು ದಿನೇದಿನೆ ಹೆಚ್ಚುತ್ತಿದೆ. ಅದರ ಜತೆಗೆ ಅಭಿಮಾನಿಗಳಲ್ಲೂ ಕ್ರೇಜ್ ಹೆಚ್ಚುತ್ತಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಜಿಲ್ಲೆಯ ಯುವಕನೊಬ್ಬ ತನ್ನ ಬೆನ್ನ ಮೇಲೆ ಪ್ರಧಾನಿ ನರೇಂದ್ರ ಮೋದಿಯ ದೊಡ್ಡ ಟ್ಯಾಟೂ ಹಾಕಿಸಿಕೊಂಡು ಗಮನ ಸೆಳೆದಿದ್ದಾನೆ.
ಜಿಲ್ಲೆಯ ಸಿಂಧನೂರು ಮೂಲದ ಕಲಾವಿದ ಈ ಟ್ಯಾಟೂ ಬಿಡಿಸಿದರೆ, ದೇವದುರ್ಗ ಮೂಲದ ಯುವಕ ಮೋದಿ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಕಲಾವಿದ ಶಂಕರ ಜಿ.ಬದಿ ಸತತ 15 ಗಂಟೆಗಳ ಕಾಲ ಮೋದಿ ಅಭಿಮಾನಿ ಬಸವರಾಜ ಮಡಿವಾಳ ಬೆನ್ನಿಗೆ ಟ್ಯಾಟೂ ಬಿಡಿಸಿದ್ದಾರೆ. ಚಾಲುಕ್ಯ ವಿದ್ಯಾಮಂದಿರ ನಡೆಸುತ್ತಿರುವ ಬಸವರಾಜ, ದೇಶದ ಬಗ್ಗೆ ಸಾಕಷ್ಟು ಅಭಿಮಾನ ಹೊಂದಿದ್ದಾರೆ.
“ಮೋದಿ ಬಗ್ಗೆ ನನಗಿರುವ ಅಪಾರ ಅಭಿಮಾನದಿಂದಲೇ ಈ ಟ್ಯಾಟೂ ಹಾಕಿಸಿಕೊಂಡಿದ್ದೇನೆ. ರಾಯಚೂರಿಗೆ ಅವರು ಬರುತ್ತಾರೆಂಬ ಮಾಹಿತಿಯಿದ್ದು, ಅವರಿಗೆ ನನ್ನ ಟ್ಯಾಟೂ ತೋರಿಸುವ ಆಸೆಯಿದೆ’ ಎನ್ನುತ್ತಾರೆ ಬಸವರಾಜ ಮಡಿವಾಳ. ಇಷ್ಟೊಂದು ದೊಡ್ಡ ಟ್ಯಾಟೂ ಹಾಕುವುದು, ಹಾಕಿಸಿಕೊಳ್ಳುವುದು ಕಷ್ಟದ ಕೆಲಸ. ಬಸವರಾಜ ಮಡಿವಾಳ 15 ಗಂಟೆಗಳ ಕಾಲ ಕುಳಿತು ಚಿತ್ರ ಬಿಡಿಸಿಕೊಂಡಿರುವುದು ಅವರ ಅಭಿಮಾನಕ್ಕೆ ಹಿಡಿದ ಕೈಗನ್ನಡಿ ಎನ್ನುತ್ತಾರೆ ಕಲಾವಿದ ಶಂಕರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್ ಪೊಲೀಸ್ ಠಾಣೆ ಬಂಟ್ವಾಳಕ್ಕೆ
ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.