ಮುದಗಲ್ಲ ಹೋಬಳಿಯಲ್ಲಿ 17,171.82 ಹೆಕ್ಟೇರ್‌ ಬಿತ್ತನೆ ಗುರಿ


Team Udayavani, Jul 7, 2017, 11:11 AM IST

RAI-1.jpg

ಮುದಗಲ್ಲ: ಮುದಗಲ್ಲ ಪಟ್ಟಣ ಸೇರಿದಂತೆ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆ
ಆಗಿದ್ದರಿಂದ ರೈತರು ಬಿತ್ತನೆಯಲ್ಲಿ ತೊಡಗಿದ್ದಾರೆ. ವಿವಿಧ ಬೆಳೆ ಬಿತ್ತನೆಯಲ್ಲಿ ತೊಡಗಿರುವ ರೈತರಿಗೆ ಕೃಷಿ ಕಾರ್ಮಿಕರ ಸಮಸ್ಯೆ ಎದುರಾಗಿದೆ.

ಮುದಗಲ್ಲ ಹೋಬಳಿ ವ್ಯಾಪ್ತಿಯ  ನಾಗಲಾಪುರ, ಕನ್ನಾಳ, ತಿಮ್ಮಾಪುರ, ಜಕ್ಕರಮಡು, ಹಡಗಲಿ, ದೇಸಾಯಿ ಭೋಗಾಪುರ, 
ವ್ಯಾಸನಂದಿಹಾಳ, ಮಟ್ಟೂರ, ಬುದ್ದಿನ್ನಿ, ಆಶಿಹಾಳ, ಲೆಕ್ಕಿಹಾಳ, ಆಮದಿಹಾಳ, ನಾಗರಾಳ ಸೇರಿದಂತೆ ಅನೇಕ ಹಳ್ಳಿಗಳಲ್ಲಿ ರೈತರು ವಿವಿಧ ಬೀಜಗಳ  ಬಿತ್ತನೆಯಲ್ಲಿ ತೊಡಗಿದ್ದಾರೆ. ಕಳೆದ ನಾಲ್ಕು ವರ್ಷದಿಂದ ಮೃಗಶಿರಾ ಮಳೆ ಆಗಿದ್ದಿಲ್ಲ. ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆ ಸುರಿದಿದ್ದು, ಸಕಾಲದಲ್ಲಿ  ಬಿತ್ತನೆ ಕಾರ್ಯ ನಡೆದಿದೆ. ಸಜ್ಜೆ, ಸೂರ್ಯಕಾಂತಿ, ಹೆಸರು, ತೊಗರಿ, ಹತ್ತಿ, ಅಲಸಂದಿ ಬೀಜಗಳ
ಬಿತ್ತನೆಗೆ ಭೂಮಿ ಹದವಾಗಿದೆ ಎಂದು ಕನ್ನಾಳ ಗ್ರಾಮದ ರೈತ ಹನುಮಂತ ತಿಳಿಸಿದ್ದಾರೆ. 

ಕೂಲಿಕಾರರ ಕೊರತೆ: ಒಂದೆಡೆ ರೈತರು ಕೃಷಿ  ಚಟುವಟಿಕೆಯಲ್ಲಿ ತೊಡಗಿದ್ದರೆ, ಕೃಷಿ ಕಾರ್ಯಕ್ಕೆ ಕೂಲಿಕಾರರ ಸಮಸ್ಯೆ ಎದುರಾಗಿದೆ. ಮುಂಗಾರು  ಹಂಗಾಮಿನ ಶೇಂಗಾ, ಮೆಣಸಿನಕಾಯಿ, ಸೂರ್ಯಕಾಂತಿ, ಹತ್ತಿ, ತೊಗರಿ, ಹೆಸರು ಸೇರಿದಂತೆ ಇತರೆ ವಾಣಿಜ್ಯ ಬೆಳೆಗಳ ಬೀಜ  ಬಿತ್ತನೆ ಹಾಗೂ ಈರುಳ್ಳಿ (ಉಳ್ಳಾಗಡ್ಡೆ) ಸಸಿ ನಾಟಿ ಮಾಡಲಾಗುತ್ತಿದೆ. ಮಹಿಳಾ ಕೂಲಿಕಾರರ ಸಮಸ್ಯೆ
ಎದುರಿಸುವಂತಾಗಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ನಾಗರಹಾಳ, ನಾಗಲಾಪುರ, ಆಮದಿಹಾಳ, ಆಶಿಹಾಳ, ಖೈರವಾಡಗಿ, ಕನ್ನಾಳ, ಹಡಗಲಿ, ಛತ್ತರ, ಮರಳಿ, ಹುನೂರ ಸೇರಿದಂತೆ ಮುದಗಲ್ಲ ಗ್ರಾಮೀಣ ಪ್ರದೇಶದಲ್ಲಿ ಪ್ರಮುಖವಾಗಿ ಈರುಳ್ಳಿ ಸಸಿ ನಾಟಿ ಮಾಡಲು ಮುಂದಾಗಿರವ ರೈತರು ಮಹಿಳಾ ಕೂಲಿ ಆಳುಗಳಿಗಾಗಿ ಊರಿಂದೂರಿಗೆ ಹುಡುಕಾಟ ನಡೆಸಿದ್ದಾರೆ. 

ಗ್ರಾಮೀಣ ಪ್ರದೇಶದ ಅನೇಕ ಕೃಷಿ ಕೂಲಿ ಕಾರ್ಮಿಕರು ದುಡಿಯಲು ಹೊರ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಪುಣೆ ಸೇರಿದಂತೆ
ಬೆಂಗಳೂರ, ಉಡುಪಿ, ಮಂಗಳೂರ, ಕಾರವಾರ ನಗರಗಳಿಗೆ ಗುಳೆ ಹೋಗಿದ್ದರಿಂದ ಕೂಲಿಕಾರರ ಸಮಸ್ಯೆ ಎದುರಾಗಿದೆ. ದಿನಕ್ಕೆ 100ರಿಂದ 150 ಮಹಿಳೆಯರಿಗೆ, 150ರಿಂದ 200 ರೂ. ಪುರುಷರಿಗೆ ಕೂಲಿ ನೀಡಿದರೂ ಈರುಳ್ಳಿ ಸಸಿ ನಾಟಿ ಮಾಡುವ ಕೆಲಸಕ್ಕೆ ಯಾರು ಸಿಗುತ್ತಿಲ್ಲ ಎಂದುಆಮದಿಹಾಳ ಗ್ರಾಮದ ರೈತರಾದ ಹುಲಿಗಪ್ಪ, ದುರುಗಪ್ಪ, ಗದ್ದೆಪ್ಪ ತಿಳಿಸಿದ್ದಾರೆ.

ಮುದಗಲ್ಲ ಹೋಬಳಿ ವ್ಯಾಪ್ತಿಯಲ್ಲಿ 50 ಹಳ್ಳಿಗಳು ಬರುತ್ತಿದ್ದು, ಒಟ್ಟು 17,171.82 ಹೆಕ್ಟೇರ್‌ ಪ್ರದೇಶದಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಗುರಿ ಹೊಂದಲಾಗಿದೆ. ಈಗಾಗಲೇ ರೈತರಿಗೆ ಬೇಕಾಗುವ ಸೂರ್ಯಕಾಂತಿ, ತೊಗರಿ, ಸಜ್ಜೆ, ಹೆಸರು, ಅಲಸಂದಿ ಬೀಜ
ಸೇರಿದಂತೆ ರಸಗೊಬ್ಬರ, ಸಾವಯವ ಗೊಬ್ಬರ ಸಂಗ್ರಹವಿದೆ. ರೈತರು ರೈತ ಸಂಪರ್ಕ ಕೇಂದ್ರಗಳಿಂದ ಬೀಜ, ರಸಗೊಬ್ಬರ ಪಡೆಯಬಹುದು. 
 ವೆಂಕಟೇಶ ಕುಲಕರ್ಣಿ, ಕೃಷಿ ಅಧಿಕಾರಿ, ಮುದಗ

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.