ಭಕ್ತರ ಸಹಕಾರವೇ ಮಠದ ಆಸ್ತಿ

Team Udayavani, Mar 16, 2019, 11:45 AM IST

ray.jpg

ಸಿರವಾರ: ನವಲಕಲ್ಲು ಬೃಹನ್ಮಠವು ಸಾಮಾಜಿಕ ಕಾರ್ಯ ಮಾಡಿ, ಉತ್ತಮ ದಾರಿಯಲ್ಲಿ ಸಾಗುತ್ತಿದೆ ಎಂದರೆ ಅದಕ್ಕೆ ಭಕ್ತರ ಸಹಕಾರ ಕಾರಣ ಎಂದು ಹಾಸನ ಜಿಲ್ಲೆಯ ಕಾರ್ಜುವಳ್ಳಿಯ ಹಿರೇಮಠದ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲೂಕಿನ ನವಲಕಲ್ಲು ಬೃಹನ್ಮಠದಲ್ಲಿ ಗುರುವಾರ ರಾತ್ರಿ ನಡೆದ ಲಿಂ.ಸೋಮಶೇಖರ ಶಿವಾಚಾರ್ಯರ 22ನೇ ಜಾತ್ರಾ ಮಹೋತ್ಸವ ಹಾಗೂ 7 ನೇ ಮಾಸಿಕ ಶಿವಾನುಭವಗೋಷ್ಠಿಯಲ್ಲಿ ಮಾತನಾಡಿದರು.

ಉತ್ತರ ಕರ್ನಾಟಕ ಭಾಗದಲ್ಲಿ ಮಠ ಮಾನ್ಯಗಳ ಬಗ್ಗೆ ಪ್ರತಿಯೊಬ್ಬರೂ ಅಪಾರ ಗೌರವ ಹೊಂದಿದ್ದಾರೆ. ಅದರಿಂದಾಗಿ ಮಠಗಳು ಹೆಚ್ಚಿನ ಕಾರ್ಯಗಳನ್ನು ಮಾಡಲು ಸಹಕಾರಿಯಾಗಿದೆ. ನವಲಕಲ್ಲು ಬೃಹನ್ಮಠದ ಶ್ರೀಗಳು ಇಂದಿನ ದಿನದಲ್ಲಿ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿರುವುದಕ್ಕೆ ಪ್ರಮುಖ ಶಕ್ತಿಯೇ ಅವರ ಭಕ್ತರು ಎಂದರು. 

ವೀರಗೋಟ ಸುಕ್ಷೇತ್ರದ ಅಡವಿಲಿಂಗ ಮಹಾರಾಜರು ಮಾತನಾಡಿ, ಜಗತ್ತಿನಲ್ಲಿ ನನ್ನದೆನ್ನುವುದು ಏನು ಇಲ್ಲ. ನಾನು ಎಂಬುದು ನಶ್ವರ. ಅದನ್ನರಿತು ಜೀವನ ನಡೆಸಿದರೆ ಮುಕ್ತಿ ದೊರೆಯುತ್ತದೆ. ನಾವು ಅಕ್ಕಿಗೆ ಬೆಲೆ ನೀಡಬಹುದು. ಆದರೆ ಭೂಮಿಯಲ್ಲಿ ಬೆಳೆಯುವ ಭತ್ತದ ಕಣಗಳಿಗೆ ಬೆಲೆ ಕಟ್ಟಲಾಗದು. ನಾವು ಮಾಡುವ ಕೂಲಿಗೆ ತಕ್ಕಂತೆ ಬೆಲೆ ಸಿಗುತ್ತದೆ ಎಂದರು.

ನವಲಕಲ್ಲು ಬೃಹನ್ಮಠದ ಅಭಿನವಶ್ರೀ ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಜ್ಯೋತಿ ಅಕ್ಕ, ಕಲ್ಲೂರು ಜಿಪಂ ಸದಸ್ಯ ಮಹಾಂತೇಶ ಪಾಟೀಲ ಅತ್ತನೂರು, ಗ್ರೀನ್‌ ರಾಯಚೂರು ಸಂಸ್ಥೆಯ ರಾಜೇಂದ್ರಕುಮಾರ ಇದ್ದರು.
 
ಅದ್ಧೂರಿಯಾಗಿ ನಡೆದ ರಥೋತ್ಸವ: ಜಾತ್ರಾ ಮಹೋತ್ಸವ ಮಯೂರ ಶಿಲೆ ನಾಡೋತ್ಸವದ ಅಂಗವಾಗಿ ಸಂಜೆ ಲಿಂ. ಸೋಮಶೇಖರ ಶಿವಾಚಾರ್ಯರ ಮಹಾ ರಥೋತ್ಸವವು ಸಾವಿರಾರು ಭಕ್ತರ ಮಧ್ಯೆ ಅದ್ಧೂರಿಯಾಗಿ ನಡೆಯಿತು. ರಥೋತ್ಸವಕ್ಕೆ ಉಜ್ಜಯಿನಿ ಪೀಠದ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.

ನೀಲಗಲ್ಲು ಬೃಹನ್ಮಠದ ಡಾ.ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ, ಗಬ್ಬೂರು ಬೂದಿಬಸವೇಶ್ವರ ಸಂಸ್ಥಾನ ಮಠದ ಬೂದಿಬಸವ ಶಿವಾಚಾರ್ಯ ಸ್ವಾಮೀಜಿ, ಯರಡೋಣಿ ಸಿದ್ದರಾಮೇಶ್ವರ ಗುರುಮಠದ ಮುರುಘೇಂದ್ರ ಶಿವಯೋಗಿ ಸ್ವಾಮೀಜಿ, ನವಲಕಲ್ಲು ಬೃಹನ್ಮಠದ ಅಭಿನವಶ್ರೀ ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಕಾರ್ಜುವಳ್ಳಿಯ ಹಿರೇಮಠದ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ರಥೋತ್ಸವದಲ್ಲಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.