ಯಲಗಲದಿನ್ನಿ ಸೌಕರ್ಯ ಒದಗಿಸಲು ಆಗ್ರಹ
Team Udayavani, Nov 19, 2019, 1:22 PM IST
ಲಿಂಗಸುಗೂರು: ತಾಲೂಕಿನ ಯಲಗಲದಿನ್ನಿ ಗ್ರಾಮಕ್ಕೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಗ್ರಾಮಸ್ಥರು ಶಾಸಕ ಡಿ.ಎಸ್. ಹೂಲಗೇರಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಕಾಳಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲಗಲದಿನ್ನಿ ಗ್ರಾಮದಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ಚರಂಡಿಗಳು ಹೂಳಿನಿಂದ ತುಂಬಿದ್ದು ದುರ್ನಾತ ಬೀರುತ್ತಿವೆ. ಜನ ವಾಸಿಸಲು ತೊಂದರೆಯಾಗಿದೆ. ಶೌಚಾಲಯ ಇಲ್ಲದೇ ಮಹಿಳೆಯರು ಬಯಲು ಶೌಚಕ್ಕೆ ತೆರಳುತ್ತಿದ್ದಾರೆ. ಗ್ರಾಮದಲ್ಲಿ ಬೀದಿ ದೀಪಗಳನ್ನು ಅಳವಡಿಸದ್ದರಿಂದ ಕತ್ತಲಲ್ಲಿ ಒಡಾಡುವಂತಾಗಿದೆ. ಇತ್ತೀಚೆಗೆ ಬಾವಿಯಲ್ಲಿನ ಕಲುಷಿತ ನೀರು ಕುಡಿದ ಗ್ರಾಮಸ್ಥರು ವಾಂತಿ-ಬೇಧಿಯಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದರು. ಬಾವಿಯನ್ನು ಸ್ವತ್ಛಗೊಳಿಸಿಲ್ಲ. ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಮೇಲಾಧಿ ಕಾರಿಗಳು ಸೂಚನೆ ನೀಡಿದ್ದರೂ ನೀರು ಪೂರೈಸುತ್ತಿಲ್ಲ. ಪರಿಣಾಮ ಯಲಗಲದಿನ್ನಿ ಬಿಟ್ಟು ಬೇರೆಡೆ ತೆರಳುವಂತಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.
ಲಿಂಗಸುಗೂರು ಪಟ್ಟಣಕ್ಕೆ ಹೊಂದಿಕೊಂಡಿರುವ ಯಲಗಲದಿನ್ನಿ ಗ್ರಾಮದ ಪಕ್ಕದಲ್ಲಿನ ಕೃಷಿ ಜಮೀನುಗಳನ್ನು ಖರೀದಿ ಮಾಡಿ ನೂತನವಾಗಿ 32 ಲೇಔಟ್‌ಗಳನ್ನು ನಿರ್ಮಿಸಲಾಗಿದೆ. ಆದರೆ ಲೇಔಟ್ ಮಾಲೀಕರು ನಿವೇಶನಗಳಲ್ಲಿ ನಾಗರಿಕ ಸೌಲಭ್ಯಗಳು ಸೇರಿದಂತೆ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿದ್ದಾರೆ ಎಂದು ದೂರಿದರು. ಯಲಗಲದಿನ್ನಿ ಗ್ರಾಮಕ್ಕೆ ಶುದ್ಧ ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್ ಹಾಗೂ ಶೌಚಾಲಯಗಳ ನಿರ್ಮಾಣಕ್ಕೆ ಮುಂದಾಬೇಕೆಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಶಾಸಕ ಡಿ.ಎಸ್. ಹೂಲಗೇರಿ ಮಾತನಾಡಿ, ಕುಡಿಯುವ ನೀರು ಪೂರೈಕೆಗೆ ತಕ್ಷಣ ಕ್ರಮ ವಹಿಸಲಾಗುವುದು. ನ.25ರಂದು ಜಿಲ್ಲಾ ಪಂಚಾಯಿತಿ ಸಭೆ ಇದ್ದು, ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸುವ ಕುರಿತು ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.
ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಬಾಲನಗೌಡ, ಗೌರವಾಧ್ಯಕ್ಷ ಶ್ರೀಮಂತ ದೇಗಲಮಡಿ, ಮಲ್ಲಪ್ಪ, ಈರಪ್ಪ, ಬಸವರಾಜ ನಾಯಕ, ಬಸವರಾಜ ಕಾಳಾಪುರ, ತಿರುಪತಿ ಯತಗಲ್, ಮುತ್ತಣ್ಣ ಗುಡಿಹಾಳ, ಅಣ್ಣಯ್ಯ ಯಲಗಟ್ಟಾ, ಅಮಾತೆಪ್ಪ, ಚಾಂದಪಾಷಾ, ರಂಗಪ್ಪ ಗೌಂಡಿ, ನಂದೇಶ ಪೂಜಾರಿ, ಆದಪ್ಪ ಯಲಗಲದಿನ್ನಿ, ನಾಗಪ್ಪ ಮಾರಲದಿನ್ನಿ, ನಿಂಗಪ್ಪ ಕಾಳಾಪುರ, ಈಶ್ವರ, ಶಿವಲಿಂಗ ಲಿಂಗಸುಗೂರು, ನಿರುಪಾದಿ ಕರಡಕಲ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.