ಮಳೆಗೆ ಗೋಡೆ ಕುಸಿದು ಮೂವರಿಗೆ ಗಾಯ
Team Udayavani, Aug 28, 2017, 12:59 PM IST
ರಾಯಚೂರು: ಜಿಲ್ಲೆಯ ವಿವಿಧೆಡೆ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಸಂತಸ ಮೂಡಿದರೆ ಕೆಲವೆಡೆ ಅನಾಹುತ ಸಂಭವಿಸಿವೆ. ನಗರದ ಸಿಯಾತಲಾಬ್ ಬಡಾವಣೆಯಲ್ಲಿ ಶನಿವಾರ ರಾತ್ರಿ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಮೂವರಿಗೆ ಗಾಯಗಳಾಗಿವೆ. ಪಕ್ಕದ ಮನೆಯ ಗೋಡೆ ಟಿನ್ ಶೆಡ್ ಗುಡಿಸಲಿನ ಮೇಲೆ ಬಿದ್ದಿದ್ದು, ಗುಡಿಸಲಿನಲ್ಲಿದ್ದ ಸೈದಾರೆಡ್ಡಿ (34), ನಾಗವೇಣಿ (26) ಹಾಗೂ ಸಂಸ್ಕೃತಿ (3) ಎಂಬ ಬಾಲಕಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ರಿಮ್ಸ್‌ಗೆ ದಾಖಲಿಸಲಾಗಿದೆ. ಗುಡಿಸಲಿನಲ್ಲಿ 10 ಜನ ಮಲಗಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ. ಎರಡು ದಿನಗಳಿಂದ ಸುರಿದ ಜೋರು ಮಳೆ ರೈತರಲ್ಲಿ ತುಸು ನೆಮ್ಮದಿ ಮೂಡಿಸಿದೆ. ನಗರ ಸೇರಿ ಮಾನವಿ, ಸಿಂಧನೂರು, ದೇವದುರ್ಗ, ಲಿಂಗಸುಗೂರು ತಾಲೂಕಿನ ಹಲವೆಡೆ ಶುಕ್ರವಾರ, ಶನಿವಾರ ರಾತ್ರಿ ಜೋರು ಮಳೆಯಾಗಿದೆ. ನಗರದಲ್ಲಿ ಅತೀ ಹೆಚ್ಚು 53 ಮಿ.ಮೀ. ಮಳೆ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Education Policy: ಎನ್‌ಇಪಿ ಜಾರಿ ಗೊಂದಲ ಮಧ್ಯೆ ಶಿಕ್ಷಕರಿಗೆ ತರಬೇತಿ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
EPF ನಿಧಿ ವಂಚನೆ: ರಾಬಿನ್ ಉತಪ್ಪ ವಿರುದ್ದದ ವಾರಂಟ್‌ಗೆ ಹೈಕೋರ್ಟ್ ತಡೆ
Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.