ಅರ್ಕಾವತಿ ಹಗರಣದಲ್ಲಿದ್ದವರು ಜೈಲಿಗೆ ಹೋಗುತ್ತಾರೆ: ನಳಿನ್ ಕುಮಾರ್ ಕಟೀಲ್
Team Udayavani, Feb 25, 2023, 2:49 PM IST
ಲಿಂಗಸೂಗುರು: ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ ಎಂದು ನಾನು ಹೇಳಿದ್ದೆ. ಜಸ್ಟೀಸ್ ಕೆಂಪಣ್ಣ ಕೊಟ್ಟ ವರದಿ ವಿಧಾನಸಭೆಯಲ್ಲಿ ಸಿಎಂ ಓದಿದ್ದಾರೆ. ಲೋಕಾಯುಕ್ತಕ್ಕೆ ಕೊಟ್ಟು ಸಂಪೂರ್ಣ ತನಿಖೆ ಮಾಡಿಸಲಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾದ ನಾಯಕರ ವಿರುದ್ಧ ಕ್ರಮ ಆಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.
ಲಿಂಗಸೂಗೂರಿನಲ್ಲಿ ನಡೆದ ವಿಜಯಸಂಕಲ್ಪ ಯಾತ್ರೆಯಲ್ಲಿ ಭಾಗಿಯಾದ ವೇಳೆ ಸುದ್ದಿಗಾರರ ಜತೆ ಮಾತನಾಡಿದರು. ಸಿದ್ದರಾಮಯ್ಯ ನೇತೃತ್ವದ ಬಹುಮತ ಸರ್ಕಾರ ಇದ್ದಾಗ ಹಗರಣ ಆಗಿತ್ತು. ತಾವು ಸಿಕ್ಕಿ ಬೀಳುತ್ತೇವೆ ಎಂದು ಲೋಕಾಯುಕ್ತವನ್ನು ಮುಚ್ಚಿಸಿದ್ದರು. ಹಲ್ಲಿಲ್ಲದ ಎಸಿಬಿಯನ್ನು ಹುಟ್ಟುಹಾಕಿದರು. ಕೆಂಪಣ್ಣ ವರದಿಯನ್ನು ಮುಚ್ಚಿಡುವ ಕೆಲಸ ಸಿದ್ದರಾಮಯ್ಯ ಮಾಡಿದ್ದರು. ಈಗ ಆ ವರದಿ ದಾಖಲಾತಿಗಳನ್ನು ಇಟ್ಟುಕೊಂಡು ತನಿಖೆ ಮಾಡಿಸುತ್ತೇವೆ. ಹಗರಣದಲ್ಲಿದ್ದವರು ಜೈಲಿಗೆ ಹೋಗುತ್ತಾರೆ ಎಂದು ತಿಳಿಸಿದರು.
ಅಮಿತ್ ಶಾ ಜನಾರ್ದನ ರೆಡ್ಡಿಯನ್ನು ನೋಡಿಕೊಳ್ಳುತ್ತೇನೆ ಎಂದು ಹೇಳಿಲ್ಲ. ನೀವು ಪಕ್ಷದ ಕೆಲಸ ಮಾಡಿ, ರೆಡ್ಡಿ ಬಗ್ಗೆ ನಾವು ಯೋಚಿಸುತ್ತೇವೆ ಎಂದಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ:ರೈತರ ಕೃಷಿ ಪಂಪ್‌ಸೆಟ್‌ಗೆ ಹಗಲಿನಲ್ಲಿ ವಿದ್ಯುತ್ ನೀಡಲು ಮನವಿ
ಸಿ.ಟಿ ರವಿ ಮಾಂಸ ತಿಂದು ದೇವಸ್ಥಾನಕ್ಕೆ ತೆರಳಿದ ವಿಚಾರದ ಬಗ್ಗೆ ಅವರು ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಆದರೆ ಸಿದ್ದರಾಮಯ್ಯ ಮಾಂಸ ತಿಂದು ಧರ್ನಸ್ಥಳದ ಒಳಗೆ ಹೋಗಿದ್ದರು. ಸಿ.ಟಿ ರವಿ ದೇವಸ್ಥಾನದ ಒಳಗೆ ಹೋಗಿಲ್ಲ. ಇಬ್ಬರಿಗೂ ವ್ಯತ್ಯಾಸವಿದೆ ಎಂದು ನಳಿನ್ ಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.