ಗ್ರಾಮ ಲೆಕ್ಕಿಗನ ಹತ್ಯೆ: ಟಿಪ್ಪರ್ ಚಾಲಕನ ಬಂಧನ
Team Udayavani, Dec 24, 2018, 7:40 AM IST
ರಾಯಚೂರು: ಮಾನ್ವಿ ತಾಲೂಕಿನ ಚೀಕಲಪರ್ವಿ ಕ್ರಾಸ್ ಬಳಿ ಶನಿವಾರ ಸಂಜೆ ಗ್ರಾಮ ಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಮೇಲೆ ಅಕ್ರಮ ಮರಳು ದಂಧೆಕೋರರು ಟಿಪ್ಪರ್ ಹರಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಪ್ಪರ್ ಚಾಲಕ ರಂಗಪ್ಪನನ್ನು ರವಿವಾರ ಮಾನ್ವಿ ಪೊಲೀಸರು ಬಂಧಿಸಿದ್ದಾರೆ. ರಂಗಪ್ಪ ವಿರುದ್ಧ ಸೆಕ್ಷನ್ 302ರಡಿ ಪ್ರಕರಣ ದಾಖಲಿಸಲಾಗಿದೆ. ಎಸ್‌ಪಿ ಡಿ. ಕಿಶೋರ್ ಬಾಬು ಅವರು ಘಟನೆ ನಡೆದ ಸ್ಥಳವನ್ನು ಪರಿಶೀಲಿಸಿದ್ದು, ಚಾಲಕ ರಂಗಪ್ಪನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ ಲಾರಿ ಮಾಲಕರ ವಿರುದ್ಧವಾಗಲಿ, ಅಕ್ರಮ ಮರಳು ದಂಧೆಕೋರರ ಹೆಸರನ್ನಾಗಲಿ ಪೊಲೀಸರು ಬಹಿರಂಗಪಡಿಸಿಲ್ಲ.
ಇದೇ ವೇಳೆ ಘಟನೆ ಖಂಡಿಸಿ ಮಾನ್ವಿಯಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಹೋರಾಟಗಾರರು ಬೀದಿಗಿಳಿದು ಹೋರಾಟ ನಡೆಸಿದರು. ಜಿಲ್ಲೆಯಲ್ಲಿ ಎಗ್ಗಿಲ್ಲದೇ ಮರಳು ದಂಧೆ ನಡೆಯುತ್ತಿದೆ. ಇದರ ಹಿಂದೆ ಕೆಲ ಪ್ರಭಾವೀ ರಾಜಕಾರಣಿಗಳು ಮತ್ತು ಮುಖಂಡರಿದ್ದು ಕೂಡಲೇ ಅವರ ವಿರುದ್ಧವೂ ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದರು. ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಇಂದು ಸಾಮೂಹಿಕ ರಜೆ
ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹನುಮೇಶ್ ಅವರು ಡಿ.24ರಂದು ಸಂಘದ ಎಲ್ಲ ಸದಸ್ಯರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಮೃತ ಗ್ರಾಮ ಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಮೂಲತಃ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದವರು. ರವಿವಾರ ತಡರಾತ್ರಿ ಮೃತದೇಹವನ್ನು ಗ್ರಾಮಕ್ಕೆ ತಂದಾಗ ಗ್ರಾಮಸ್ಥರಿಂದಲೂ ತೀವ್ರ ಆಕ್ರೋಶ ವ್ಯಕ್ತವಾಯಿತು. ಗ್ರಾಮಸ್ಥರೆಲ್ಲ ಸಹಿ ಸಂಗ್ರಹ ಮಾಡಿ ರವಿವಾರ ಬೆಳಗ್ಗೆ ಗ್ರಾಮಕ್ಕೆ ಭೇಟಿ ನೀಡಿದ ಅ ಧಿಕಾರಿಗಳಿಗೆ ಮನವಿ ನೀಡಿ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿದರು.
ಚಾಲಕನನ್ನು ವಶಕ್ಕೆ ಪಡೆದಿದ್ದು, ಸೆಕ್ಷನ್ 302ರಡಿ ಪ್ರಕರಣ ದಾಖಲಿಸಲಾಗಿದೆ. ಈಗಷ್ಟೇ ತನಿಖೆ ಶುರು ಮಾಡಿದ್ದು ಯಾವುದೇ ಮಾಹಿತಿ ಬಹಿರಂಗಪಡಿಸಲು ಆಗುವುದಿಲ್ಲ. ವಾಹನ ಮಾಲಕರ ಬಗ್ಗೆಯೂ ಸ್ಪಷ್ಟ ಮಾಹಿತಿ ಇಲ್ಲ. ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಬಗ್ಗೆ ಸಾಕಷ್ಟು ಕಟ್ಟೆಚ್ಚರ ವಹಿಸಲಾಗಿದೆ.
– ಡಿ. ಕಿಶೋರ್ ಬಾಬು, ಎಸ್‌ಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.