ಟಿಎಲ್‌ಬಿಸಿ ರೈತರ ಸಮಸ್ಯೆ ನಿವಾರಣೆಗೆ ಆಗ್ರಹ
Team Udayavani, Aug 26, 2022, 7:32 PM IST
ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆ 85/3 ಉಪವಿತರಣೆ ಕಾಲುವೆ ವ್ಯಾಪ್ತಿಯಲ್ಲಿ ರೈತರು ಅಕ್ರಮ ನೀರಾವರಿ ಮಾಡಿಕೊಂಡಿದ್ದು, ಶೇ.90ರಷ್ಟು ಜಮೀನಿಗೆ ನೀರು ಬರುತ್ತಿಲ್ಲ. ಅಕ್ರಮವಾಗಿ ನಿರ್ಮಿಸಿದ ತಡೆಗೋಡೆಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಗುರುವಾರ ಸಿರವಾರ ತಾಲೂಕಿನ ಬಲ್ಲಟಗಿ ಹಾಗೂ ಶ್ರೀನಿವಾಸ ಕ್ಯಾಂಪ್, ಗುಡದಿನ್ನಿ ಕೆ. ಗ್ರಾಮಗಳ ರೈತರು ಪ್ರತಿಭಟಿಸಿದರು.
ಈ ಕುರಿತು ಜಿಲ್ಲಾ ಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಟಿಎಲ್‌ಬಿಸಿಯ 85/3ರ ಉಪವಿತರಣಾ ಕಾಲುವೆಯ ವ್ಯಾಪ್ತಿಯಲ್ಲಿ ಗೇಜ್ ಪ್ರಮಾಣದ ಬಗ್ಗೆ ಪರಿಶೀಲಿಸಬೇಕು. ಕರ್ನಾಟಕ ನೀರಾವರಿ ನಿಗಮದ ಅ ಧೀಕ್ಷಕ ಇಂಜನಿಯರ್ ಅವರಿಗೆ ಅಕ್ರಮ ನೀರಾವರಿ ಕುರಿತು ಸಾಕ್ಷಿ ಸಮೇತ ದೂರು ನೀಡಲಾಗಿತ್ತು. ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಕಾಲುವೆ ಮೇಲ್ಭಾಗದ ಬೇಕಾಬಿಟ್ಟಿ ತಡೆಗೋಡೆ ನಿರ್ಮಿಸಿದ್ದರಿಂದ ಕಾಲುವೆ ಮುಂದಿನ ಭಾಗದ ರೈತರಿಗೆ ಸಮಸ್ಯೆ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ತುಂಗಭದ್ರಾ ಎಡದಂಡೆ ಕಾಲುವೆ (ಟಿಎಲ್ ಬಿಸಿ) 85/3ರ ಉಪಕಾಲುವೆಯಲ್ಲಿ ರೈತರಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ರೈತರಾದ ಬಸನಗೌಡ ಮಾಲಿಪಾಟೀಲ್ ಬಲ್ಲಟಗಿ, ವಿಜಯ ಕುಮಾರ, ಶರಣಗೌಡ, ಬೀರಯ್ಯ ಸ್ವಾಮಿ, ನರಸಪ್ಪ, ವೀರನಗೌಡ ಮಾಲಿಪಾಟೀಲ್, ಸುರೇಶ ಶ್ರೀನಿವಾಸ ಕ್ಯಾಂಪ್, ನಾಗೇಶರಾವ್, ಟಿ.ಬ್ರಹ್ಮಜಿರಾವ್, ಟಿ.ರಾಜೇಶ್ವರ ರಾವ್, ವೀರಭದ್ರರೆಡ್ಡಿ ಸೇರಿ ಅನೇಕರು ರೈತರು ಪ್ರತಿಭಟನೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.