ಬೀದಿ ಬದಿ ವ್ಯಾಪಾರಿಗೆ ತರಬೇತಿ
Team Udayavani, Mar 27, 2022, 5:44 PM IST
ಮಾನ್ವಿ: ಪಟ್ಟಣದ ಬೀದಿಗಳಲ್ಲಿ ನೂರಾರು ಬಡ ಜನರು ತಮ್ಮ ನಿತ್ಯದ ಜೀವನ ನಿರ್ವಹಣೆಗಾಗಿ ಸಣ್ಣ ವ್ಯಾಪಾರಗಳನ್ನು ನಡೆಸುತ್ತಿದ್ದು, ಅಂಥವರ ಅಭಿವೃದ್ಧಿಗಾಗಿ ಪುರಸಭೆ ವತಿಯಿಂದ ದೀನ್‌ದಯಾಳ್ ಅಂತ್ಯೋದಯ ಹಾಗೂ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಅಗತ್ಯ ನೇರವನ್ನು ನೀಡಲಾಗುತ್ತಿದೆ ಎಂದು ಪುರಸಭೆ ವಿರೋಧ ಪಕ್ಷದ ನಾಯಕ ರಾಜಾ ಮಹೇಂದ್ರ ನಾಯಕ ತಿಳಿಸಿದರು.
ಪಟ್ಟಣದ ಪುರಸಭೆ ಸಭಾಂಗಣದಲ್ಲಿ ನಗರದ ಬೀದಿ ಬದಿ ವ್ಯಾಪಾರಿಗಳ ಬೆಂಬಲ ಉಪ ಘಟಕದಡಿ ವ್ಯಾಪಾರಿಗಳಿಗೆ ಅಧಿನಿಯಮ ಮತ್ತು ಯೋಜನೆಗಳ ಕುರಿತು ನಡೆದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಬೀದಿ ಬದಿ ವ್ಯಾಪಾರಿಗಳ ಜೀವನಮಟ್ಟ ಸುಧಾರಣೆಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ಮುಖ್ಯಾಧಿಕಾರಿ ಗಂಗಾಧರ ಮಾತನಾಡಿ, ಬೀದಿ ಬದಿ ವ್ಯಾಪಾರಿಗಳು ಪುರಸಭೆ ಹಾಗೂ ರಸ್ತೆ ನಿಯಮಗಳನ್ನು ಪಾಲನೆ ಮಾಡಬೇಕು. ಬೀದಿ ಬದಿ ವ್ಯಾಪಾರಿಗಳಿಗಾಗಿ ಅಲ್ಪ ಮೊತ್ತವನ್ನು ವಿವಿಧ ಬ್ಯಾಂಕ್‌ಗಳು ವಿತರಿಸುತ್ತಿದ್ದು, ಪಡೆದ ಸಾಲವನ್ನು ಸಕಾಲದಲ್ಲಿ ಮರು ಪಾವತಿ ಮಾಡಿದಲ್ಲಿ ವ್ಯಾಪಾರದ ಅಭಿವೃದ್ಧಿಗೆ ಹೆಚ್ಚಿನ ಆರ್ಥಿಕ ನೆರವನ್ನು ಪಡೆಯಬಹುದು ಎಂದರು.
ಪುರಸಭೆ ಅಧ್ಯಕ್ಷೆ ರಶೀದಾ ಬೇಗಂ, ಸಿಇಒ ಈರಣ್ಣ, ಎ.ಎಸ್.ಐ. ಚಕ್ರಪಾಣಿ, ಕಾನೂನು ಸಲಹೆಗಾರರಾದ ಎ.ಬಿ. ಉಪ್ಪಳ ಮಠ, ಆರೋಗ್ಯಾಧಿಕಾರಿ ಶಶಿಧರ, ಕೌಶಲ್ಯಧಿಕಾರಿ ರಸೂಲ್ ಸೇರಿದಂತೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.