ಗ್ರಾಪಂ ಎದುರೇ ಮಲ ಮೂತ್ರ ವಿಸರ್ಜನೆ!

Team Udayavani, Nov 12, 2020, 4:06 PM IST

ಗ್ರಾಪಂ ಎದುರೇ ಮಲ ಮೂತ್ರ ವಿಸರ್ಜನೆ!

ಹಟ್ಟಿಚಿನ್ನದಗಣಿ: ರೋಡಲಬಂಡಾ(ತ) ಗ್ರಾಪಂ ಆವರಣದ ಎದುರೇ ಮಲ ಮೂತ್ರ ವಿಸರ್ಜನೆ ಮಾಡುವುದರಿಂದ ಕಾರ್ಯಾಲಯದಲ್ಲಿ ಅಸ್ವಚ್ಛತೆ ತಾಂಡವಾಡುತ್ತಿದೆ. ಪಂಚಾಯ್ತಿ ಕಾರ್ಯಾಲಯ ಆವರಣದಲ್ಲಿ ಗಿಡ- ಗಂಟಿ ಬೆಳೆದಿದ್ದು, ಸೊಳ್ಳೆ, ಕ್ರಿಮಿಕೀಟಗಳ ಕಾಟ ಹೆಚ್ಚಾಗಿದೆ. ಜತೆಗೆ ವಿಷ ಜಂತುಗಳು ಸೇರಿಕೊಳ್ಳುವ ಅಪಾಯವಿದೆ. ಇಷ್ಟೆಲ್ಲ ಸಮಸ್ಯೆ ಕಣ್ಣೆದುರೇ ಕಂಡರೂ ಅಭಿವೃದ್ಧಿ ಅಧಿಕಾರಿಗಳು ಮಾತ್ರ ಗಮನ ವಹಿಸುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಪಂಚಾಯ್ತಿ ಕಾರ್ಯಾಲಯದ ಶೌಚಾಲಯದಲ್ಲಿ ನೀರಿನ ಸೌಲಭ್ಯವಿಲ್ಲದೇ ಇರುವುದುದರಿಂದ ಬಳಕೆ ಮಾಡದೇ ನನೆಗುದಿಗೆ ಬಿದ್ದಿದೆ. ಸಿಬ್ಬಂದಿಗಳೂ ಶೌಚಕ್ಕೆ ಬಯಲನ್ನೇ ಅವಲಂಬಿಸಿದ್ದಾರೆ. ಶೌಚಾಲಯ ದುರಸ್ತಿಗೊಳಿಸಿ ಕಾರ್ಯಾಲಯದ ಸಿಬ್ಬಂದಿ ಮತ್ತು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾದ ಅಧಿಕಾರಿಗಳೇ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಸ್ವಚ್ಛತಾ ಆಂದೋನಲನಕ್ಕೆ ಸಾವಿರಾರು ಕೋಟಿ ರೂ. ಖರ್ಚು ಮಾಡುತ್ತಿದೆ. ಆದರೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಸರ್ಕಾರದ ಯೋಜನೆ ಸಮರ್ಪಕ ಜಾರಿ ಹಾಗೂ ಬಳಸಿಕೊಳ್ಳುತ್ತಿಲ್ಲ ಎನ್ನುವ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಗ್ರಾಮದಲ್ಲಿ ಶೌಚಾಲಯ ಇಲ್ಲದಿರುವುದರಿಂದ ಮಹಿಳೆಯರು, ಮಕ್ಕಳು ಬಯಲಿನಲ್ಲಿಯೇ ಶೌಚ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಈ ಕೂಡಲೇ ಸಂಬಂಧಪಟ್ಟ ಅಧಿ ಕಾರಿಗಳು ಗ್ರಾಮದಲ್ಲಿ ಹೈಟೆಕ್‌ ಶೌಚಾಲಯ ನಿರ್ಮಿಸಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.

ಗ್ರಾಪಂ ತೀರ ಗಲೀಜಾಗಿದೆ. ಯಾರೇ ಅಭಿವೃದ್ಧಿ ಅಧಿಕಾರಿಗಳಾಗಿ ಬಂದರೂ ಬದಲಾಗುತ್ತಿಲ್ಲ. ಸುತ್ತಮುತ್ತಲಿನ ಜನ ಪಂಚಾಯ್ತಿ ಕಾರ್ಯಾಲಯದ ಎದುರು ಗಲೀಜು ಮಾಡುತ್ತಾರೆ. ತಮ್ಮ ಕಾರ್ಯಾಲಯವನ್ನೇ ಸ್ವಚ್ಛವಾಗಿಟ್ಟುಕೊಳ್ಳದ ಅಧಿ ಕಾರಿಗಳು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾಗಿ ಬಂದಿರುವುದು ದುರದೃಷ್ಟಕರ. –ನಿಂಗಪ್ಪ, ರೋಡಲಬಂಡಾ(ತ) ಗ್ರಾಮದ ನಿವಾಸಿ

ಟಾಪ್ ನ್ಯೂಸ್

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Balaganur: Body of newborn baby found in canal

Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

10-

Maski ರುದ್ರಭೂಮಿಯಲ್ಲಿ ವಿದ್ಯುತ್ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರ ಒತ್ತಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.