ಬಾಪೂರಿಗೆ ಕುಡಿವ ನೀರು ಪೂರೈಕೆಗೆ ಆಗ್ರಹ
Team Udayavani, Mar 3, 2020, 2:13 PM IST
ರಾಯಚೂರು: ತಾಲೂಕಿನ ಬಾಪೂರು ಗ್ರಾಮಸ್ಥರಿಗೆ ಕುಡಿವ ನೀರಿನ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಕುರಿತು ಜಿಪಂ ಸಿಇಒಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ತಾಲೂಕಿನ ಸಿಂಗನೋಡಿ ಗ್ರಾಪಂ ವ್ಯಾಪ್ತಿಯ ಬಾಪೂರು ಗ್ರಾಮಕ್ಕೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗುತ್ತದೆ. ಎರಡು ಸಾವಿರಕ್ಕೂ ಅ ಧಿಕ ಜನ ಗ್ರಾಮದಲ್ಲಿದ್ದಾರೆ. ಗ್ರಾಮದಲ್ಲಿ ಕುಡಿವ ನೀರಿಗೆ ಸಾಕಷ್ಟು ಸಮಸ್ಯೆ ಇದೆ. ಗ್ರಾಮದಲ್ಲಿ ಕೂಲಿ ಕಾರ್ಮಿಕರು ಹೆಚ್ಚಾಗಿದ್ದಾರೆ. ಕುಡಿವ ನೀರಿಗಾಗಿ ರಾತ್ರಿ ಇಡಿ ನೀರಿಗಾಗಿ ಕಾಯ್ದು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ನೀರಿನ ಸಮಸ್ಯೆ ನಿವಾರಣೆಗೆ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಪಂ ಅಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿದೆ ಆದರೂ ಸ್ಪಂದಿಸಿಲ್ಲ. ವಾರದೊಳಗಾಗಿ ಗ್ರಾಮಕ್ಕೆ ಭೇಟಿ ನೀಡಿ ಕುಡಿವ ನೀರಿನ ಸಮಸ್ಯೆ ಬಗ್ಗೆ ಪರಿಶೀಲಿಸಬೇಕು. ಈ ಬಗ್ಗೆ ನಿರ್ಲಕ್ಷಿಸಿದರೆ ರಸ್ತೆ ಸಂಚಾರ ತಡೆದು ಪ್ರತಿಭಟಿಸುವುದಾಗಿ ಎಚ್ಚರಿಸಿದರು. ಸಂಘದ ಜಿಲ್ಲಾಧ್ಯಕ್ಷ ವಾಸುದೇವ ಮೇಟಿ, ಸದಸ್ಯರಾದ ಶಿವಪ್ಪ ಆಲ್ಕೂರು, ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಬಾನು ಬಿ., ರಾಮಬಾಬು, ಶಂಕರ ಬೇಲಿಮಂಚಿ ಸೇರಿ ಇತರರಿದ್ದರು.
ಬೇಗ ಬಾರದ ಸಿಇಒ: ಕಚೇರಿ ಎದುರು ರೈತ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ಹೋರಾಟ ಮಾಡುತ್ತಿದ್ದರೂ ಕಚೇರಿಯಲ್ಲಿಯೇ ಇದ್ದ ಜಿಪಂ ಸಿಇಒ ಲಕ್ಷ್ಮೀಕಾಂತರೆಡ್ಡಿ ಮನವಿ ಸ್ವೀಕರಿಸಲು ಬೇಗನೆ ಬರಲಿಲ್ಲ. ರೈತರನ್ನು ಸಾಕಷ್ಟು ಸಮಯ ಕಾಯಿಸಿದ ಕಾರಣ ರೈತರು ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.