ಅಕ್ರಮ ನೀರಾವರಿ ನಿಲ್ಲುವವರೆಗೂ ಹೋರಾಟ: ಕುಷ್ಟಗಿ
Team Udayavani, Jul 7, 2020, 11:15 AM IST
ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆ ಮೇಲ್ಭಾಗದಲ್ಲಿ ನಡೆಯುತ್ತಿರುವ ಅಕ್ರಮ ನೀರಾವರಿ ತಡೆಯಲು ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದು, ಅಕ್ರಮ ನಿಲ್ಲುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತುಂಗಭದ್ರಾ ಎಡದಂಡೆ ನಾಲೆ ಹಿತರಕ್ಷಣಾ ಸಮಿತಿ ಸಂಚಾಲಕ ರಾಘವೇಂದ್ರ ಕುಷ್ಟಗಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರುಗಳ್ಳತನ ತಡೆಯಲು ನಮ್ಮ ಸಮಿತಿಯಿಂದ ಜಾಗೃತ ದಳ ರಚಿಸಲಾಗುತ್ತಿದೆ. ಅದು ಜಿಲ್ಲಾಡಳಿತಕ್ಕೆ ಸಂಪೂರ್ಣ ಸಹಕಾರ ನೀಡಲಿದೆ. ಎಲ್ಲೆಲ್ಲಿ ಅಕ್ರಮ ನಡೆಯುತ್ತಿದೆ ಎಂಬುದನ್ನು ಜಾಗೃತ ಸಮಿತಿ ತನಿಖೆ ನಡೆಸಿ ಜಿಲ್ಲಾಡಳಿತಕ್ಕೆ ವರದಿ ನೀಡಲಿದೆ ಎಂದು ತಿಳಿಸಿದರು.
ಈಗಾಗಲೇ ರಾಯಚೂರು, ಕೊಪ್ಪಳ ಜಿಲ್ಲಾಧಿಕಾರಿಗಳು ಸಭೆ ನಡೆಸಿ ಕ್ರಮಕ್ಕೆ ಮುಂದಾಗಿರುವುದು ಶ್ಲಾಘನೀಯ. ಆದರೆ, ಅದು ಕೇವಲ ಆರಂಭಿಕ ಯತ್ನವಾಗದೆ ಶಾಶ್ವತ ಪರಿಹಾರ ಕಲ್ಪಿಸುವ ಕೆಲಸವಾಗಬೇಕು ಎಂದು ಆಗ್ರಹಿಸಿದರು.
ರೈತ ಸಂಘ ಮತ್ತು ಹಸಿರು ಸೇನೆ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿಯೇ ಅಕ್ರಮ ನೀರಾವರಿ ಹೆಚ್ಚಾಗಿರುವ ಅಂಶ ಅಲ್ಲಿನ ಜಿಲ್ಲಾಧಿಕಾರಿ ಗಮನಕ್ಕಿದೆ. ಜುಲೈನಲ್ಲಿ ನೀರು ಹರಿಸುವ ಪೂರ್ವದಲ್ಲಿಯೇ ಅಕ್ರಮ ಪಂಪ್‌ಸೆಟ್‌ಗಳನ್ನು ತೆಗೆಯುವಂತೆ ಅಲ್ಲಿನ ರೈತರಿಗೆ ಎಚ್ಚರಿಕೆ ನೀಡಬೇಕು. ಯಾರು ತೆಗೆಯುವುದಿಲ್ಲವೋ ಅಂಥವರ ವಿರುದ್ಧ ಪ್ರಕರಣ ದಾಖಲಿಸಬೇಕು. ಅಕ್ರಮ ಪಂಪ್ ಸೆಟ್ ತೆರವುಗೊಳಿಸದಿದ್ದಲ್ಲಿ ಜುಲೈನಲ್ಲಿ ಅಣೆಕಟ್ಟು ಮುಂದೆಯೇ ಬೃಹತ್ ಪ್ರತಿಭಟನೆ ಆರಂಭಿಸಲಾಗುವುದು. ಅಕ್ರಮ ಸ್ಥಗಿತವಾಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.