ಬರಗೂರು ಪಠ್ಯವನ್ನೇ ಮುಂದುವರಿಸಲು ಆಗ್ರಹ
Team Udayavani, Jun 19, 2022, 6:06 PM IST
ರಾಯಚೂರು: ರಾಜ್ಯ ಸರ್ಕಾರ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಪರಿಷ್ಕರಿಸಿದ ಪಠ್ಯ-ಪುಸ್ತಕ ಕೈ ಬಿಟ್ಟು ಹಿಂದಿನ ಡಾ| ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಪಠ್ಯವನ್ನೇ ಮುಂದುವರಿಸುವಂತೆ ಆಗ್ರಹಿಸಿ ಶನಿವಾರ ದಲಿತ, ಹಿಂದುಳಿದ, ಪ್ರಗತಿಪರ ಸಂಘಟನೆಗಳು ಹಾಗೂ ಕಸಾಪ, ದಲಿತ ಸಾಹಿತ್ಯ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಉದ್ಯಾನದಲ್ಲಿ ಧರಣಿ ನಡೆಸಿದ ಪ್ರತಿಭಟನಾಕಾರರು, ಈ ಕುರಿತು ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು. ರೋಹಿತ್ ಚಕ್ರತೀರ್ಥ ಅವರು ಬಲಪಂಥೀಯ ವಿಚಾರಗಳನ್ನು ಪಠ್ಯದಲ್ಲಿ ಅಳವಡಿಸಿದ್ದಾರೆ. ಹೆಚ್ಚೇನು ಅಧ್ಯಯನ ಇಲ್ಲದ, ಶಿಕ್ಷಣ ತಜ್ಞರಲ್ಲದ ಚಕ್ರತೀರ್ಥ ಅವರ ನೇತೃತ್ವದಲ್ಲಿ ಪಠ್ಯ ಪರಿಷ್ಕರಣೆ ಸಮಿತಿ ರಚಿಸಿರುವ ನಿರ್ಧಾರವೇ ಖಂಡನೀಯ. ಸ್ವಾತಂತ್ರ್ಯದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳಾಗಿದೆ. 2014ರಲ್ಲಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಪಠ್ಯ ಪರಿಷ್ಕರಣ ಸಮಿತಿ ಕನ್ನಡ ಸಾಹಿತ್ಯಕ್ಕೆ, ಸಾಹಿತಿಗಳ ಪರಿಚಯವನ್ನು ಪಠ್ಯದಲ್ಲಿ ಸೇರಿಸಿತ್ತು. ಕನ್ನಡ ಭಾಷೆಗೆ ಅದರಲ್ಲೂ ದೊಡ್ಡ ದೊಡ್ಡ ಸಾಹಿತಿಗಳಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಪಠ್ಯ ರಚಿಸಲಾಗಿತ್ತು ಎಂದು ವಿವರಿಸಿದರು.
ಕುವೆಂಪು ರಚಿಸಿದ ನಾಡಗೀತೆಯನ್ನು ಅವಹೇಳನ ಮಾಡಿ ಬರೆದಿದ್ದು, ವಿಶ್ವಗುರು ಬಸವಣ್ಣ, ಸ್ವಾಮಿ ವಿವೇಕಾನಂದ, ಮಹಾತ್ಮ ಜ್ಯೋತಿ ಬಾಪುಲೆ, ಸಾವಿತ್ರಬಾಯಿ ಪುಲೆ, ಪೆರಿಯಾರ್ ರಾಮಸ್ವಾಮಿ ನಾಯ್ಕರ್, ನಾರಾಯಣಗುರು ಅಂಥವರ ಜೀವನ ಚರಿತ್ರೆಯ ಪಾಠವನ್ನು ಮರುಪರಿಷ್ಕರಣೆ ನೆಪದಲ್ಲಿ ವಾಸ್ತವ ಮರೆಮಾಚಿ ಬರೆದು ಅವಮಾನ ಮಾಡಿರುವುದು ಖಂಡನೀಯ ಎಂದರು.
ಕಸಾಪ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ, ವಿವಿಧ ಸಂಘಟನೆಗಳ ಮುಖಂಡರಾದ ಜಿ.ಅಮರೇಶ, ಎಸ್.ಮಾರೆಪ್ಪ ವಕೀಲ, ಖಾಜಾ ಅಸ್ಲಾಂ ಅಹ್ಮದ್, ವೀರಹನುಮಾನ, ಎಂ.ಆರ್ ಬೇರಿ, ತಾಯಪ್ಪ ಹೊಸೂರು, ಮಾರೆಪ್ಪ ಹರವಿ, ಚನ್ನಬಸವ ಜಾನೇಕಲ್ ಸೇರಿ ಅನೇಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Education Policy: ಎನ್‌ಇಪಿ ಜಾರಿ ಗೊಂದಲ ಮಧ್ಯೆ ಶಿಕ್ಷಕರಿಗೆ ತರಬೇತಿ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.