ಬೆಳೆ ಹಾನಿ ಪರಿಹಾರಕ್ಕೆ ಒತ್ತಾಯ

Team Udayavani, Nov 4, 2020, 5:03 PM IST

ಬೆಳೆ ಹಾನಿ ಪರಿಹಾರಕ್ಕೆ ಒತ್ತಾಯ

ರಾಯಚೂರು: ಸತತವಾಗಿ ಸುರಿದ ಮಳೆಯಿಂದ ತಾಲೂಕಿನ ಮೀರಾಪುರ ಗ್ರಾಮ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಮನೆಗಳು ಜಖಂಗೊಂಡಿವೆ. ಸರ್ಕಾರ ಕೂಡಲೇ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ (ಆರ್‌ಕೆಎಸ್‌) ನೇತೃತ್ವದಲ್ಲಿ ಗ್ರಾಮಸ್ಥರು ಮಂಗಳವಾರ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟಿಸಿದರು.

ಈ ಕುರಿತು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ, ಮಳೆಯಿಂದ ತೊಗರಿ, ಹತ್ತಿ ಸೇರಿದಂತೆ ವಿವಿಧ ಬೆಳೆ ಸಂಪೂರ್ಣ ಹಾನಿಗೀಡಾಗಿದೆ. ಬಿತ್ತನೆ ಹಾಗೂ ಗೊಬ್ಬರಕ್ಕೆ ಮಾಡಿದ ಖರ್ಚು ಕೂಡ ಸಿಕ್ಕಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮನೆ ಕುಸಿತದಿಂದ ಇರಲು ಮನೆ ಇಲ್ಲದ ಸ್ಥಿತಿ ಇದೆ. ಹೀಗಾಗಿ ಸಂತ್ರಸ್ತರಿಗೆ ಕೂಡಲೇ ತಾತ್ಕಾಲಿಕ ಪರಿಹಾರ ಹಣ ವಿತರಿಸಬೇಕು. ಮನೆ ಕುಸಿತ ಹಾಗೂ ಬೆಳೆನಷ್ಟ ಅಂದಾಜು ಮಾಡಿ ನಷ್ಟಕ್ಕೆ ತಕ್ಕಂತೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಸಂಪೂರ್ಣ ಕುಸಿದ ಮನೆಗಳಿಗೆ ವಿವಿಧ ವಸತಿ ಯೋಜನೆಯಡಿ ಮನೆ ನಿರ್ಮಿಸಬೇಕು. ಗ್ರಾಮದ ಸಮೀಪದ ತಗ್ಗು ಪ್ರದೇಶದಲ್ಲಿ ನೀರು ತುಂಬಿ ಮನೆಗಳಿಗೆ ನುಗ್ಗದಂತೆ ಬೇರೆಡೆ ಹರಿಯಲು ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಎಸ್‌ಯುಸಿಐ ಜಿಲ್ಲಾ ಸಮಿತಿಸದಸ್ಯ ಚನ್ನಬಸವ ಜಾನೇಕಲ್‌, ಆರ್‌ಕೆಎಸ್‌ ಜಿಲ್ಲಾ ಸಂಘಟನಾ ಪ್ರಮೋದ ಕುಮಾರ ಜಿ., ಮೌನೇಶ, ಅಶೋಕ, ರೈತರಾದ ಮಹಾದೇವ, ರತ್ನಮ್ಮ, ನಾಗಮ್ಮ, ಚನ್ನಮ್ಮ ಇತರರು ಇದ್ದರು.

ಬೇಡಿಕೆ ಈಡೇರಿಕೆಗೆ ಪ್ರತಿಭಟನೆ :

ಮಾನ್ವಿ: ಪಟ್ಟಣದಲ್ಲಿ ನಿರ್ಮಾಣವಾಗಿರುವ ತಾಯಿ ಮಕ್ಕಳ ಆಸ್ಪತ್ರೆ ಪ್ರಾರಂಭಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಮಂಗಳವಾರ ಜನಶಕ್ತಿ ಕೇಂದ್ರ ಪದಾಧಿಕಾರಿಗಳು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ತಹಶೀಲ್ದಾರರು ಕ್ರಮ ಜರುಗಿಸುವ ಭರವಸೆ ನೀಡಿದ ಬಳಿಕ ಹಿಂಪಡೆದರು.

ಪಟ್ಟಣದ ಲೋಕೋಪಯೋಗಿ ಇಲಾಖೆ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ತಹಶೀಲ್ದಾರ್‌ ಶಂಶಾಲಂ ಮಾತನಾಡಿ, ಬೇಡಿಕೆಗಳಿಗೆ ಅನುಗುಣವಾಗಿ ಆಯಾ ಇಲಾಖೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆಯುವೆ. ಸಾರ್ವಜನಿಕ ಆಸ್ಪತ್ರೆ ರಸ್ತೆ ದುರಸ್ತಿ ಬಗ್ಗೆ ಪಿಡಬ್ಲೂಡಿ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ನಂತರ ತಪ್ಪಿತಸ್ಥ ಅಧಿಕಾರಿಗಳು ಮತ್ತು ಗುತ್ತೇದಾರರ ವಿರುದ್ಧ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ತಿಳಿಸುತ್ತೇನೆ ಎಂದರು.

ಪಟ್ಟಣದಲ್ಲಿ ನಿರ್ಮಾಣವಾಗಿರುವ ತಾಯಿ ಮಕ್ಕಳ ಆಸ್ಪತ್ರೆ ಉದ್ಘಾಟನೆ, ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ, ಸಾರ್ವಜನಿಕ ಆಸ್ಪತ್ರೆ ರಸ್ತೆ ದುರಸ್ತಿ ಹಾಗೂ ಕೆಕೆಆರ್‌ಡಿಬಿ ಅನುದಾನ ದುರ್ಬಳಕೆ ತನಿಖೆ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಅ.25ರಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗುವತ್ತಿದೆ. ಅಲ್ಲದೆ ಮಂಗಳವಾರ ಲೋಕೋಪಯೋಗಿ ಇಲಾಖೆ ಎದುರು ಉಪವಾಸ ಸತ್ಯಾಗ್ರಹ, ರಸ್ತೆ ತಡೆ, ತಾಯಿ ಮಕ್ಕಳ ಆಸ್ಪತ್ರೆಯಿಂದ ಕೆಳಗೆ ಬೀಳುವ ಚಳವಳಿ ನಡೆಸುವುದಾಗಿ ಪ್ರತಿಭಟನಾಕಾರರು ತಿಳಿಸಿದರು.

ಈ ವೇಳೆ ರಾಜ್ಯಾಧ್ಯಕ್ಷ ಪ್ರಭುರಾಜ್‌ಕೊಡ್ಲಿ, ಅಬ್ರಾಹಿಂ ಪನ್ನೂರು, ಶಂಕರ ಜಗ್ಲಿ, ರಾಮು ದೊಡ್ಡಿ, ಶಿವರಾಜ ದೊಡ್ಡಿ, ಜಯರಾಜ ಕೊಡ್ಲಿ, ಮೈನುದ್ದೀನ್‌, ಶ್ರೀನಿವಾಸ ಕೋನಾಪುರಪೇಟೆ, ಹುಸೇನಪ್ಪ ಪನ್ನೂರು, ಲಕ್ಷ್ಮಣ ಜಾಲವಾಡಿಗಿ, ಪಿಎಸ್‌ಐ ಸಿದ್ರಾಮಪ್ಪ ಇದ್ದರು.

ಟಾಪ್ ನ್ಯೂಸ್

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.