ವಚನಕಾರರು ಜಾತಿ-ಮತಕ್ಕೆ ಸೀಮಿತವಲ್ಲ: ಅಭಿರಾಂ


Team Udayavani, Feb 23, 2018, 3:21 PM IST

ray-1.jpg

ರಾಯಚೂರು: ವಚನಕಾರರು ಯಾವುದೇ ಮತ, ಧರ್ಮಕ್ಕೆ ಸೀಮಿತವಾಗದೇ ಎಲ್ಲ ವರ್ಗಕ್ಕೂ ಸೇರಿದವರಾಗಿದ್ದಾರೆ. ವಚನಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಕೆಲಸ ಮಾಡಿದವರು ಶರಣರು ಎಂದು ಜಿಪಂ ಸಿಇಒ ಅಭಿರಾಂ ಜಿ. ಶಂಕರ್‌ ಹೇಳಿದರು.

ಜಿಲ್ಲಾಡಳಿತ, ಜಿಪಂ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕುಂಬಾರ ಸಮಾಜದ ಸಹಯೋಗದಲ್ಲಿ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಗುರುವಾರ ನಡೆದ ಸಂತ ಕವಿ ಸರ್ವಜ್ಞ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹಾವೇರಿ ಜಿಲ್ಲೆಯ ಚಿಕ್ಕ ಹಳ್ಳಿಯಲ್ಲಿ ಜನಿಸಿದ ಸರ್ವಜ್ಞರು, ತ್ರಿಪದಿಗಳನ್ನು ರಚಿಸುವ ಮೂಲಕ ಜಗದ್ವಿಖ್ಯಾತರಾದರು.
ಕನ್ನಡದಲ್ಲಿ ಅರ್ಥವಾಗುವ ರೀತಿಯಲ್ಲಿ ವಚನಗಳನ್ನು ಬರೆದು ಸಮಾಜದ ಪ್ರತಿಯೊಬ್ಬರಿಗೆ ಅನ್ವಯವಾಗುವಂಥ ಸಂದೇಶಗಳನ್ನು ಸಾರಿದರು ಎಂದರು.

ಚುನಾವಣೆ ಸಮೀಪಿಸುತ್ತಿದ್ದು, ಸಮಾಜದವರು ಯಾವುದೇ ಆಸೆ ಆಮಿಷಗಳಿಗೆ ತುತ್ತಾಗದೆ ಉತ್ತಮರನ್ನು ಆಯ್ಕೆ ಮಾಡಬೇಕು ಎಂದ ಅವರು, ಪಾರದರ್ಶಕವಾಗಿ ಮತ ಚಲಾಯಿಸುವ ಕುರಿತು ಪ್ರತಿಜ್ಞಾವಿಧಿ ಭೋದಿಸಿದರು.

ದೇವರಾಜ ಅರಸು ಅಭಿವೃದ್ಧಿ ನಿಗಮದ ರಾಜ್ಯ ನಿರ್ದೇಶಕ ಬಿ.ನಾಗಪ್ಪ ಗಿರಣಿ ಮಾತನಾಡಿ, ಪ್ರತಿ ಸಮಾಜದಲ್ಲಿ ಭಿನ್ನಮತ ಸಹಜ. ತಾವು ಸಂಘಟಿತರಾದಾಗ ಮಾತ್ರ ಸಮಾಜ ಬಲಿಷ್ಠಗೊಳ್ಳಲು ಸಾಧ್ಯ. 2017-18ನೇ ಸಾಲಿನಲ್ಲಿ ಕುಂಬಾರ ಸಮಾಜದ ಅಭಿವೃದ್ಧಿಗೆ ಸರ್ಕಾರ 15 ಕೋಟಿ ರೂ. ನೀಡಿದೆ. ವಿದೇಶದಲ್ಲಿ ಓದುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ 10 ಲಕ್ಷದವರೆಗೆ ಧನ ಸಹಾಯ ನೀಡಲಾಗುತ್ತದೆ. ಒಟ್ಟು 29 ಕೋರ್ಸ್‌ಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಹಾಯಧನ ನೀಡುವದಲ್ಲದೆ 18ರಿಂದ 35 ವರ್ಷದ ಯುವಕರ ಸ್ವ ಸಹಾಯ ಸಂಘಗಳಿಗೆ 3.5 ಲಕ್ಷದವರೆಗೆ ಸಾಲ ನೀಡಲಾಗುತ್ತಿದೆ ಎಂದರು.

ಸಾಹಿತಿಗಳಾದ ಬನ್ನಪ್ಪ ಬಿ.ಕುಂಬಾರ ವಿಶೇಷ ಉಪನ್ಯಾಸ ನೀಡಿ, ಬಸವಣ್ಣ, ಅಂಬಿಗರ ಚೌಡಯ್ಯ, ಸರ್ವಜ್ಞರ ತತ್ವಗಳನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರು ಸಮಾಜಕ್ಕೆ ಅಂಟಿಕೊಂಡಿರುವ ಕೆಟ್ಟ ಸಂಪ್ರಾದಾಯಗಳನ್ನು ತಮ್ಮ ವಚನಗಳ ಮೂಲಕ ನಿವಾರಿಸಿ ಸಮಾಜ ತಿದ್ದುವ ಕೆಲಸ ಮಾಡಿದರು. ಸರ್ವಜ್ಞ 16ನೇ ಶತಮಾನದಲ್ಲಿ ವ್ಯಾಕರಣದಲ್ಲಿ ರಚಿಸಿದ ಅವರ ವಚನಗಳು 7 ಕೋಟಿ 7 ಲಕ್ಷ 75 ಸಾವಿರ ವಚನಗಳೆಂದು ತಮ್ಮ ವಚನದಲ್ಲಿ ಹೇಳಿದ್ದಾರೆ. ಲಭ್ಯವಿರುವ 2 ಸಾವಿರ ವಚನಗಳನ್ನು ಮಾತ್ರ ಅವರು ಯಾವ ರಾಜರ ಆಶ್ರಯದಲ್ಲಿ ಬೆಳೆಯದೆ ಕಂಡಿದ್ದನ್ನು ಕಂಡಂತೆ ಬರೆದಿದ್ದರು ಎಂದು ವಿವರಿಸಿದರು.

ಬೆಳಗ್ಗೆ ಗಂಜ್‌ ವೃತ್ತದಲ್ಲಿ ಸರ್ವಜ್ಞ ಭಾವಚಿತ್ರ ಮೆರವಣಿಗೆಗೆ ನಗರಸಭೆ ಉಪಾಧ್ಯಕ್ಷ ಜಯಣ್ಣ ಚಾಲನೆ ನೀಡಿದರು. ಗಂಜ್‌
ವೃತ್ತದಿಂದ ಚಂದ್ರ ಮೌಳೇಶ್ವರ ವೃತ್ತ ತೀನ್‌ ಕಂದಿಲ್‌, ಡಾ| ಬಿ.ಆರ್‌.ಅಂಬೇಡ್ಕರ್‌ ವೃತ್ತಗಳ ಮಾರ್ಗವಾಗಿ ಮೆರವಣಿಗೆ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರಕ್ಕೆ ತಲುಪಿತು.

ಹೈ-ಕ ವಿಭಾಗದ ಕುಂಬಾರ ಸಂಘದ ಅಧ್ಯಕ್ಷ ವೈ. ಸುರೇಂದ್ರಬಾಬು, ಉಪಾಧ್ಯಕ್ಷ ವೀರಭದ್ರಪ್ಪ, ಕುಂಬಾರ ಸಂಘದ ಜಿಲ್ಲಾಧ್ಯಕ್ಷ ಶಿವರಾಜ, ಗ್ರೇಡ್‌ 2 ತಹಶೀಲ್ದಾರ್‌ ಅನಿಲ್‌, ಪ್ರೊಬೇಷನರಿ ತಹಶೀಲ್ದಾರ್‌ ಸಂತೋಷಿ ರಾಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಬಿ.ನೀಲಮ್ಮ ಸೇರಿ ಕುಂಬಾರ ಸಮಾಜದವರು ಪಾಲ್ಗೊಂಡಿದ್ದರು. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

11

Kannada Rajyotsava: ನಿಂತ ನೆಲವೇ ಕರ್ನಾಟಕ!

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

3-raj-b-shetty

Kannada: ಬೆಳೆ ಕನ್ನಡ : ಸರಣಿ-1 ಕನ್ನಡ ಚಿತ್ರರಂಗ; ಬದಲಾದ ಬದುಕೇ ಸಿನೆಮಾ ಭಾಷೆಗೂ ಕುತ್ತು

9

Kannada Rajyotsava: ಮುಖ್ಯಮಂತ್ರಿಗಳು ಇವ ನಮ್ಮವ ಎಂದಿದ್ದರು!

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Maski ರುದ್ರಭೂಮಿಯಲ್ಲಿ ವಿದ್ಯುತ್ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರ ಒತ್ತಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

1-weqew-e

Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

4

New Delhi: ದೀಪಾವಳಿ ಹಬ್ಬದ ವೇಳೆ ಅಮೆರಿಕ ರಾಯಭಾರಿ ಡ್ಯಾನ್ಸ್‌!

11

Kannada Rajyotsava: ನಿಂತ ನೆಲವೇ ಕರ್ನಾಟಕ!

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

4-editorial

Editorial: ಸುವರ್ಣ ಕರ್ನಾಟಕ: ವಿಕಾಸಕ್ಕೆ ಕಾರ್ಯಸೂಚಿ ಅಗತ್ಯ

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.