ವಿಡಿಯೋ ವೈರಲ್: ನೀರು ತುಂಬಿದ್ದ ಗುಂಡಿಗೆ ಬಿದ್ದ ಬಾಲಕಿಯನ್ನು ರಕ್ಷಿಸಿದ ಯುವಕ
Team Udayavani, Dec 15, 2019, 12:27 PM IST
ರಾಯಚೂರು: ಖಾಸಗಿ ನಿವೇಶನದಲ್ಲಿದ್ದ ಗುಂಡಿಯಲ್ಲಿ ಆಯತಪ್ಪಿ ಬಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕಿಯನ್ನು ಯುವಕನೋರ್ವ ರಕ್ಷಣೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ.
ನಗರದ ಎನ್ ಜಿಒ ರೇಸ್ ಬಚಪನ್ ಶಾಲೆ ಹತ್ತಿರದ ನಿವೇಶನದಲ್ಲಿ ಈ ರ್ಘಟನೆ ಸಂಭವಿಸಿದೆ.
ನಿವೇಶನದಲ್ಲಿ ಕಟ್ಟಡ ನಿರ್ಮಾಣಕ್ಕಾಗಿ ಬೃಹತ್ ಗುಂಡಿ ಅಗೆಯಲಾಗಿತ್ತು. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ನೀರು ಸಂಗ್ರಹಗೊಂಡಿತ್ತು.
ಇದನ್ನು ಕಂಡ ಯುವಕ ತಕ್ಷಣವೇ ಜಿಗಿದು ಬಾಲಕಿಯನ್ನು ದಡಕ್ಕೆ ಎಳೆತಂದಿದ್ದಾನೆ. ಈ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ಹರಿದಾಡುತ್ತಿದೆ.
ಬಾಲಕಿ ಹಾಗೂ ಆಕೆಯನ್ನು ರಕ್ಷಿಸಿದ ಯುವಕ ಯಾರು ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಘಟನೆಯಿಂದ ಎಚ್ಚೆತ್ತಕೊಂಡ ನಿವೇಶನ ಮಾಲೀಕರು ಸುತ್ತಲೂ ಟಿನ್ ಅಳವಡಿಸಿ ಭದ್ರತೆ ಮಾಡಿದ್ದಾರೆ.
ನೇತಾಜಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.