ಎತ್ತಿನ ಬಂಡಿಯಲ್ಲಿ ಮತದಾನ ಜಾಗೃತಿ ಜಾಥಾ
Team Udayavani, Apr 9, 2018, 1:31 PM IST
ದೇವದುರ್ಗ: ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಶಿಶು ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಗ್ರಾಪಂ ಸಂಯುಕ್ತಾಶ್ರಯಲ್ಲಿ ಮಿಂಚಿನ ನೋಂದಣೆ ಅಭಿಯಾನ ಕುರಿತು ರವಿವಾರ ಎತ್ತಿನ ಬಂಡಿಗಳ ಮೂಲಕ ಜಾಗೃತಿ ಜಾಥಾ ನಡೆಸಲಾಯಿತು. ಮೇಲ್ವಿಚಾರಕಿ ಲತಾ ಮಾತನಾಡಿ, ಏ.14ವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅವಕಾಶವಿದೆ. ಯುವ ಮತದಾರರು ಕಡ್ಡಾಯವಾಗಿ ಹೆಸರು ಸೇರ್ಪೆಡೆ ಮಾಡಬೇಕು ಎಂದು ಸಲಹೆ ನೀಡಿದರು.
ಪ್ರತಿ ಮತಗಟ್ಟೆಯಲ್ಲಿ ಬೆಳಗ್ಗೆ 8:00ರಿಂದ ಸಂಜೆ 5:00ರ ವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಪ್ರತಿಯೊಬ್ಬರು ಮತದಾನ ಹಕ್ಕು ಪಡೆಯಲು ನೋಂದಣೆ ಪ್ರಕ್ರಿಯೆಗೆ ಮುಂದಾಗಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಬಯಸುವವರು ಅಗತ್ಯ ದಾಖಲೆಯೊಂದಿಗೆ ಬಿಎಲ್‌ಒಗಳಿಗೆ ಅರ್ಜಿ ಸಲ್ಲಿಸಬೇಕು. 18ವರ್ಷ ಮೇಲ್ಪಿಟ್ಟ ಅರ್ಹ ಮತದಾರರು ತಪ್ಪದೇ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ ಚುನಾವಣೆಯಲ್ಲಿ ಮತಾ ಧಿಕಾರ ಚಲಾಯಿಸಬೇಕು. ಸಂವಿಧಾನ ನೀಡಿದ ಮತದಾನದ ಹಕ್ಕನ್ನು ಬಳಸಿ ಪ್ರಜಾಸತ್ತಾತ್ಮಕ ವ್ಯವಸ್ಥೆ ಭದ್ರಪಡಿಸಬೇಕು.
ಪ್ರತಿಯೊಂದು ಮತಕ್ಕೂ ಅತ್ಯಮೂಲ್ಯ ಬೆಲೆ ಇದ್ದು, ನಿರ್ಲಕ್ಷ್ಯ ತಾಳದೇ ಮತ ಚಲಾಯಿಸಬೇಕು ಎಂದು ಹೇಳಿದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ, ಡಾ| ಪ್ರತಿಭಾ ಪಾಟೀಲ, ಕೃಷಿ ಅಧಿಕಾರಿ ಆರ್.ಬಿ.ಮಠಪತಿ, ಸುನೀಲಕುಮಾರ, ಆರೋಗ್ಯ ಸಹಾಯಕಿ ಸುಧಾರಾಣಿ, ಅಂಗನವಾಡಿ ಕಾರ್ಯಕರ್ತೆ ನೀಲಮ್ಮ, ಪಾರ್ವತಿ, ಲಕ್ಷ್ಮೀ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.